ಎಲ್ಲ ಖಾಸಗಿ ಶಾಲೆಗಳಲ್ಲಿ ಆರ್‌ಟಿಇ ಸೀಟು ನೀಡಲು ಆಗ್ರಹ

ಮೇ 8 ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಮುತ್ತಿಗೆಗೆ ರೈತಸಂಘ ತೀರ್ಮಾನ

Team Udayavani, Apr 30, 2019, 2:03 PM IST

kolar-tdy-2..

ಕೋಲಾರ ಜಿಲ್ಲಾ ರೈತ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳು ಹಾಜರಿದ್ದು, ಶಿಕ್ಷಣ ಇಲಾಖೆಯ ವಿರುದ್ಧ ಮೇ 8 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದರು.

ಕೋಲಾರ: ಎಲ್ಲಾ ಖಾಸಗಿ ಶಾಲೆಗಳಲ್ಲಿ ಆರ್‌.ಟಿ.ಇ ಸೀಟುಗಳಿಗೆ ಅವಕಾಶ ನೀಡಬೇಕು ಎಂದು ರೈತ ಸಂಘ ಆಗ್ರಹಿಸಿದೆ.

ಹೊಸ ಖಾಸಗಿ ಶಾಲೆಗಳಿಗೆ ಅನುಮತಿ ನೀಡಬಾರದು ಹಾಗೂ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಲು ಮೇ.8 ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಶಿಕ್ಷಣ ಕ್ಷೇತ್ರವೂ ಶ್ರೀಮಂತವಾಗಿ ಖಾಸಗಿ ಕಾರ್ಪೊರೇಟ್ ಕಂಪನಿಗಳ ಪಾಲಾಗಿ ಬಡವರ ಮಕ್ಕಳು ಶಿಕ್ಷಣದಿಂದ ವಂಚಿತವಾಗುತ್ತಿದ್ದಾರೆ.

ಶಾಲೆಗಳ ಮರಣ ಶಾಸನ: ಐದು ವರ್ಷಕೊಮ್ಮೆ ಬರುವ ಶಿಕ್ಷಣ ಸಚಿವರು ಗಲ್ಲಿಗೊಂದರಂತೆ ಖಾಸಗಿ ಶಾಲೆಗಳಿಗೆ ಅನುಮತಿ ನೀಡಿ ಸರ್ಕಾರಿ ಶಾಲೆಗಳ ಮರಣ ಶಾಸನವನ್ನು ಬರೆಯುತ್ತಿದ್ದಾರೆ. ಮತ್ತೂಂದೆಡೆ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸಾವಿರಾರು ಕೋಟಿ ಅನುದಾನಗಳನ್ನು ಬಿಡುಗಡೆ ಮಾಡಿ ನಾನಾ ಯೋಜನೆಗಳಲ್ಲಿ ಜಾರಿಗೆ ತಂದರೂ ಯಾವುದೇ ಪ್ರಯೋಜನವಾಗದೆ ಹಣ ಅಧಿಕಾರಿಗಳ ಜೇಬು ಸೇರುತ್ತಿದೆ ಎಂದು ದೂರಿದರು.

ಖಾಸಗಿ ವ್ಯಾಮೋಹ : ಸರಕಾರದ ಕೆಲಸ ಪಡೆದು ತಮ್ಮ ಮಕ್ಕಳನ್ನು ಖಾಸಗಿ ಕಾಲೇಜುಗಳಲ್ಲಿ ಸೇರಿಸುವ ಎಲ್ಲಾ ರಾಜಕಾರಣಿಗಳಿಗೆ ಮತ್ತು ಅಧಿಕಾರಿಗಳ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಯಲ್ಲೇ ಪ್ರಾಥಮಿಕ ಶಿಕ್ಷಣ ಪಡೆಯಬೇಕೆಂಬ ಆದೇಶ ಮಾಡಿ ದರೆ ಸರ್ಕಾರಿ ಶಾಲೆಗಳನ್ನು ಉಳಿಸಬಹುದು. ಆದರೆ ಶಿಕ್ಷಣ ಕ್ಷೇತ್ರದ ಅಧಿಕಾರಿಗಳೇ ಖಾಸಗಿ ವ್ಯಾಮೋಹ ಹೊಂದಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ಜಿಲ್ಲಾ ಕಾರ್ಯಧ್ಯಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ, ಸಂವಿದಾನ ಶಿಲ್ಪಿ ಡಾ.ಬಾಬಾ ಸಾಹೇಬ್‌ ಆಂಬೇಡ್ಕರ್‌ರವರ ಏಕ ರೂಪದ ಶಿಕ್ಷಣದ ಕನಸು ಕನಸಾಗಿಯೇ ಉಳಿದಿದೆ. ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಜತೆಗೆ ಗುಣಮಟ್ಟದ ಶಿಕ್ಷಣ ಕೊಡುವಲ್ಲಿ ಶಿಕ್ಷಕರು ವಿಫ‌ಲರಾಗಿದ್ದಾರೆ ಎಂದು ದೂರಿದರು.

ಬಡವರಿಗೆ ಅನುಕೂಲವಾಗಿದ್ದ ಆರ್‌ಟಿಇ ಯನ್ನು ಸಹ ಕಸಿದು ಸಂಪೂರ್ಣವಾಗಿ ಬಡವರ ಮಕ್ಕಳನ್ನು ಶಿಕ್ಷಣದಿಂದ ವಂಚಿತ ಮಾಡುತ್ತಿರುವ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ಖಾಸಗಿ ಶಿಕ್ಷಣ ನೀತಿಯನ್ನು ಖಂಡಿಸಿ ಶಿಕ್ಷಣ ಇಲಾಖೆಯ ಮುತ್ತಿಗೆ ಹಾಕುವ ಎಚ್ಚರಿಕೆಯನ್ನು ನೀಡಿದರು.

ಈ ಸಭೆಯಲ್ಲಿ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್‌, ತೆರ್ನಹಳ್ಳಿ ಆಂಜಿನಪ್ಪ, ಬೂದಿಕೋಟೆ ಹರೀಶ್‌, ಪ್ರವೀಣ್‌, ರಮೇಶ್‌, ತ್ಯಾಗರಾಜ್‌, ಪುರುಷೋತ್ತಮ್‌, ಕೆಂಬೋಡಿ ಕೃಷ್ಣೇಗೌಡ, ನಾಗರಾಜ್‌, ಅನಿಲ್ ಇತರರು ಇದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.