ಉಚಿತ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ
Team Udayavani, May 1, 2019, 3:00 AM IST
ಸಂತೆಮರಹಳ್ಳಿ: ದೇಶದಲ್ಲಿ ಉಚಿತ ಹಾಗೂ ಕಡ್ಡಾಯ ಶಿಕ್ಷಣ ನೀತಿ ಜಾರಿಗೆ ಬಂದು ದಶಕ ಕಳೆದರೂ ಇದು ಇನ್ನೂ ಪರಿಣಾಮಕಾರಿಯಾಗಿ ಜಾರಿಯಾಗಿಲ್ಲ ಎಂದು ಸಿವಿಲ್ ನ್ಯಾಯಾಧೀಶ ಎನ್.ಶರತ್‌ಚಂದ್ರ ಹೇಳಿದರು.
ಯಳಂದೂರು ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘದಿಂದ ಕಾನೂನು ಅರಿವು ನೆರವು ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ ಕುರಿತು ಮಾತನಾಡಿದರು.
ಭಾರತ ದೇಶದಲ್ಲಿ ಉಚಿತವಾಗಿ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಇದಕ್ಕೆ ವಿಶ್ವಬ್ಯಾಂಕಿನ ಕಾರ್ಲ್ಸನ್ ಅವರೂ ಕೂಡ ಇದನ್ನು ಶ್ಲಾ ಸಿದ್ದಾರೆ. ಶಿಕ್ಷಣದಿಂದ ದೇಶದ ಅಭಿವೃದ್ಧಿ ಸಾಧ್ಯ. ಕೇವಲ ಸರ್ಕಾರಿ ಹುದ್ದೆಗೆ ಶಿಕ್ಷಣ ಮೀಸಲಲ್ಲ.
ಮನುಷ್ಯನ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣವೇ ಮಾನದಂಡವಾಗಿದೆ. ಆದರೂ ಕೂಡ ಇನ್ನೂ ಅನೇಕ ಮಕ್ಕಳು ಶಾಲೆಯಿಂದ ಹಿಂದುಳಿದಿದ್ದಾರೆ. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು. ಪೋಷಕರೂ ಇದರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ಅಧಿಕಾರಿ ಮಹೇಶ್ ಮಾತನಾಡಿ, 2009ರಲ್ಲಿ ಸಂವಿಧಾನದ 86ನೇ ತಿದ್ದುಪಡಿ ಮೂಲಕ ಕಡ್ಡಾಯ ಶಿಕ್ಷಣ ನೀತಿ ದೇಶದಲ್ಲಿ ಜಾರಿಯಾಯಿತು. ನಮ್ಮ ರಾಜ್ಯದಲ್ಲಿ 2012ರ ಏಪ್ರಿಲ್ ತಿಂಗಳಿನಿಂದ ಈ ನೀತಿ ಅಳವಡಿಸಿಕೊಳ್ಳಲಾಯಿತು ಎಂದರು.
ಉಚಿತ ಹಾಗೂ ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕಾಗಿದೆ. ಇದಕ್ಕಾಗಿ ಸರ್ಕಾರ ಸುಸಜ್ಜಿತ ಶಾಲೆ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ, ಬ್ಯಾಗ್, ಸಮವಸ್ತ್ರ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇದರೊಂದಿಗೆ ಆರ್‌ಟಿಇ ಕಾಯ್ದೆಯ ಮೂಲಕ ಖಾಸಗಿ ಶಾಲೆಗಳಲ್ಲೂ ಶೇ.25 ರಷ್ಟು ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ.
ಇಷ್ಟಿದ್ದರೂ ಯಳಂದೂರು ತಾಲೂಕಿನಲ್ಲಿ 29 ಮಕ್ಕಳು ಶಾಲೆಯಿಂದ ಇನ್ನೂ ಕೂಡ ಹೊರಗುಳಿದಿದ್ದಾರೆ. ಇವರನ್ನು ಶಿಕ್ಷಣದ ಮುಖ್ಯವಾಹಿನಿಗೆ ತರುವಲ್ಲಿ ಇಲಾಖೆ ಶ್ರಮ ಪಡುತ್ತಿದೆ. ಪೋಷಕರು ತಮ್ಮ ಮಕ್ಕಳಿಗೆ ಇರುವ ಇಂತಹ ಅಮೂಲ್ಯವಾದ ಕಾಯ್ದೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ವಕೀಲ ಸಂಘದ ಅಧ್ಯಕ್ಷ ಕೆ.ಬಿ. ಶಶಿಧರ್, ಉಪಾಧ್ಯಕ್ಷ ಕಾಂತರಾಜು, ವಕೀಲರಾದ ಎಂ.ಮಾದೇಶ್, ಜಯಶಂಕರ್, ಶ್ರೀನಿವಾಸ್, ಹರಿಶ್ಚಂದ್ರ, ರಂಗಸ್ವಾಮಿ, ಗುರು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.