ಸುಗ್ಗಿಕಟ್ಟೆ: ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜೆ


Team Udayavani, May 1, 2019, 6:30 AM IST

29SPT1

ಸೋಮವಾರಪೇಟೆ : ಇಲ್ಲಿಗೆ ಸಮೀಪದ ಶಾಂತಳ್ಳಿ ಹೋಬಳಿಯ ನಗರಳ್ಳಿ ಗ್ರಾಮದ ಐತಿಹಾಸಿಕ ಕೂತಿ ನಾಡು ಸುಗ್ಗಿ ಹಬ್ಬ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಸೋಮವಾರ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಕೂತಿನಾಡಿಗೆ ಸೇರಿದ 18 ಗ್ರಾಮಗಳ ನಿವಾಸಿಗಳು ಸುಗ್ಗಿಕಟ್ಟೆಯಲ್ಲಿ ಸೇರಿ ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಗ್ರಾಮ ಸುಭಿರಕ್ಷೆಗೆ ಪೂಜೆ ಹಾಗೂ ಮಳೆ, ಬೆಳೆ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಭಕ್ತರ ಆಕರ್ಷಣೆಯ ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್‌ ಕಲ್ಲಿನ ಕಂಬದಲ್ಲಿ 4 ಮಂದಿ ದೇವರ ಒಡೆಕಾರರನ್ನು ಬೆತ್ತದ ಉಯ್ನಾಲೆಯಲ್ಲಿ ತೂಗುವ ಮೂಲಕ ಸುಗ್ಗಿ ಉತ್ಸವಕ್ಕೆ ವಿಧ್ಯುಕ್ತ ತೆರೆ ಬಿದ್ದಿತು.
ಬೆಳ್ಳಿಗ್ಗೆ ಸುಗ್ಗಿಬನದ ಸಮೀಪವಿರುವ ಬಿಲ್ಲ ರಂಗದಲ್ಲಿ ಪೂರ್ವಜರ ಜೀವನ ಪದ್ಧತಿಯನ್ನು ಬಿಂಬಿಸುವ ನೃತ್ಯ ಪ್ರಾಕಾರ, ಬಿಲ್ಲುಬಾಣಗಳನ್ನು ಹಿಡಿದು ಸಾಂಕೇತಿಕವಾಗಿ ಬೇಟೆಯಾಡುವ ಪ್ರಸಂಗ, ಕಡವೆಯ ಪಾತ್ರಧಾರಿಯನ್ನು ಅಟ್ಟಿಸಿಕೊಂಡು ಹೋಗುವ ಬೇಟೆಗಾರರ ತಂಡದ ಸದಸ್ಯರಿಗೆ ಕಡವೆ ಒದೆಯುವ ದೃಶ್ಯ ಮನಮೋಹಕವಾಗಿತ್ತು. ಕೊನೆಯಲ್ಲಿ ಕಡವೆ ಕಾಡು ಸೇರುವ ಮೂಲಕ, ಬೇಟೆಗಾರರಿಂದ ಬಚಾವಾಗುವ ದೃಶ್ಯ, ಸಾಂಪ್ರದಾಯಿಕ ಬಿಳಿ ಕುಪ್ಪಸ ದಟ್ಟಿಯನ್ನು ಧರಿಸಿದ್ದ ಗ್ರಾಮದ ಹಿರಿಯರು, ಬಿಲ್ಲರಂಗದಲ್ಲಿ ಪ್ರದರ್ಶನ ಹಾಕುತ್ತ, ಮಲೆನಾಡು ಸುಗ್ಗಿ ಇತಿಹಾಸವನ್ನು ನೆರೆದಿದ್ದವರಿಗೆ ತಿಳಿಸುತ್ತಿದ್ದರು.

ಕೂತಿ ನಾಡು ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಕೂತಿ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೀಕಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟದಕೊಪ್ಪ, ಹಳ್ಳಿಯೂರು, ಕೊತ್ತನಳ್ಳಿ, ಇನಕನಹಳ್ಳಿ, ಬೆಂಕಳ್ಳಿ, ಕುಡಿಗಾಣ, ನಾಡ್ನಳ್ಳಿ, ತಡ್ಡಿಕೊಪ್ಪ, ಓಡಳ್ಳಿ ಗ್ರಾಮಗಳ ಮುಖ್ಯಸ್ಥರು ಗ್ರಾಮ ದೇವತೆಗೆ ಪಟ್ಟ ಒಪ್ಪಿಸಿ, ಸಾಮೂಹಿಕ ಪೂಜೆ ನೆರವೇರಿಸಿದರು.

ಕೂತಿನಾಡು ಶ್ರೀ ಸಬ್ಬಮ್ಮ ದೇವರ ಸಮಿತಿ ಅಧ್ಯಕ್ಷ ಕೆ.ಟಿ.ಜೋಯಪ್ಪ, ಉಪಾಧ್ಯಕ್ಷ ಎನ್‌.ಕೆ.ಪ್ರಕಾಶ್‌, ಕಾರ್ಯ ದರ್ಶಿ ಎನ್‌.ಬಿ.ರಾಘವೇಂದ್ರ. ಖಜಾಂಚಿ ಎಲ್‌.ಪಿ.ಈರಪ್ಪ, ಸಹಕಾರ್ಯದರ್ಶಿ ಎಚ್‌.ಆರ್‌. ಗೋಪಾಲ ಸುಗ್ಗಿಯ ಉಸ್ತುವಾರಿ ವಹಿಸಿದ್ದರು.

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

5-madikeri

Madikeri: ಗಾಂಜಾ ದಂಧೆ : ಬೆಡ್ ಶೀಟ್ ಮಾರಾಟಗಾರರ ಬಂಧನ

Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

15-fruad

Kuwait ಬ್ಯಾಂಕ್‌ನಿಂದ 700 ಕೋಟಿ ರೂ. ಲಪಟಾವಣೆ: 1425 ಕೇರಳಿಯರಿಗಾಗಿ ಶೋಧ

14-mulleria

ಪತ್ನಿ, ಮೂವರು ಮಕ್ಕಳಿರುವ ವ್ಯಕ್ತಿ ಜತೆಗೆ 19ರ ಹರೆಯದ ನರ್ಸಿಂಗ್‌ ವಿದ್ಯಾರ್ಥಿನಿ ಪರಾರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.