ಪೌರತ್ವ ಸಾಬೀತುಪಡಿಸುವ ಅನಿವಾರ್ಯತೆ

ಪೌರತ್ವ ಕುರಿತ ದೂರಿಗೆ ಸಂಬಂಧಿಸಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗೆ ಗೃಹ ಇಲಾಖೆಯಿಂದ ನೋಟಿಸ್‌

Team Udayavani, May 1, 2019, 6:00 AM IST

PTI4_30_2019_000082B

ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಮತದಾನ ನಡೆಯುತ್ತಿರುವ ಈ ಹೊತ್ತಿನಲ್ಲೇ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಪೌರತ್ವದ ಕುರಿತ ಚರ್ಚೆಯು ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ ಅವರು ರಾಹುಲ್‌ ಪೌರತ್ವದ ಕುರಿತು ಪ್ರಶ್ನೆಯೆತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಕೇಂದ್ರ ಗೃಹ ಸಚಿವಾಲಯವು ಮಂಗಳವಾರ ರಾಹುಲ್‌ಗೆ ನೋಟಿಸ್‌ ಜಾರಿ ಮಾಡಿ ಪ್ರತಿಕ್ರಿಯೆ ಕೇಳಿದೆ.

ನಿಮ್ಮ ಪೌರತ್ವಕ್ಕೆ ಸಂಬಂಧಿಸಿದ ಎಲ್ಲ ಪ್ರಶ್ನೆಗಳಿಗೂ ಸ್ಪಷ್ಟವಾದ ಉತ್ತರವನ್ನು 15 ದಿನಗಳೊಳಗಾಗಿ ಸಲ್ಲಿಸಬೇಕು ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಈ ನೋಟಿಸ್‌ ಜಾರಿಯಾಗುತ್ತಿದ್ದಂತೆಯೇ ಒಂದು ಕಡೆ ರಾಹುಲ್‌ ಲಂಡನ್‌ನವರಾ, ಲ್ಯುಟೆನ್ಸ್‌ನವರಾ ಎಂದು ಬಿಜೆಪಿ ವ್ಯಂಗ್ಯವಾಡಿದರೆ, ಮತ್ತೂಂದು ಕಡೆ ಕೆಂಡಾಮಂಡಲವಾಗಿರುವ ಕಾಂಗ್ರೆಸ್‌, ಇದು ರಾಜಕೀಯಪ್ರೇರಿತ ಕುತಂತ್ರ ಎಂದು ಹೇಳಿದೆ. ಇನ್ನೊಂದೆಡೆ, ರಾಹುಲ್‌ ಭಾರತದ ಮಣ್ಣಲ್ಲೇ ಹುಟ್ಟಿ, ಬೆಳೆದವರು ಎಂಬುದು ಇಡೀ ದೇಶಕ್ಕೇ ಗೊತ್ತು ಎಂದು ಸಹೋದರಿ ಪ್ರಿಯಾಂಕಾ ವಾದ್ರಾ ಪ್ರತಿಕ್ರಿಯಿಸಿದ್ದಾರೆ.

ಪ್ರಶ್ನೆ ಎದ್ದಿದ್ದು ಏಕೆ?: 2003ರಲ್ಲಿ ಯುಕೆಯಲ್ಲಿ ಬ್ಯಾಕಾಪ್ಸ್‌ ಲಿಮಿಟೆಡ್‌ ಎಂಬ ಕಂಪೆನಿಯನ್ನು ಸ್ಥಾಪಿಸಲಾಗಿದ್ದು, ರಾಹುಲ್‌ ಗಾಂಧಿ ಅವರೂ ಈ ಕಂಪೆನಿಯ ನಿರ್ದೇಶಕರಲ್ಲಿ ಒಬ್ಬರು ಎಂದು ನಮೂದಿಸಲಾಗಿತ್ತು. ಈ ಬ್ರಿಟಿಷ್‌ ಕಂಪೆನಿಯು 2005ರ ಅಕ್ಟೋಬರ್‌ 10 ಮತ್ತು 2006ರ ಅ.31ರಂದು ಸಲ್ಲಿಸಿರುವ ವಾರ್ಷಿಕ ರಿಟರ್ನ್ಸ್ನಲ್ಲಿ, ರಾಹುಲ್‌ ಗಾಂಧಿ ಅವರ ಜನ್ಮದಿನಾಂಕವನ್ನು ಜೂನ್‌ 19, 1970 ಎಂದೂ, ಅವರ ಪೌರತ್ವವನ್ನು “ಬ್ರಿಟಿಷ್‌’ ಎಂದೂ ನಮೂದಿಸಲಾಗಿತ್ತು. ಅಷ್ಟೇ ಅಲ್ಲದೆ, 2009ರ ಫೆ.17ರಂದು ಕಂಪೆನಿಯು ಮುಚ್ಚಿಹೋಗಿದ್ದು, ಆಗ ಸಲ್ಲಿಸುವ ರಾಹುಲ್‌ ಪೌರತ್ವವನ್ನು ಬ್ರಿಟಿಷ್‌ ಎಂದೇ ಉಲ್ಲೇಖೀಸಲಾಗಿತ್ತು ಎಂದು ಬಿಜೆಪಿ ನಾಯಕ ಸುಬ್ರಹ್ಮಣ್ಯನ್‌ ಸ್ವಾಮಿ ಆರೋಪಿಸಿದ್ದಾರೆ. ಈ ಎಲ್ಲ ಆರೋಪಗಳಿಗೆ ಸಂಬಂಧಿಸಿ ನೀವು ಸ್ಪಷ್ಟವಾದ ಹಾಗೂ ಸತ್ಯವಾದ ಮಾಹಿತಿಯನ್ನು 15 ದಿನಗಳ ಒಳಗೆ ಸಲ್ಲಿಸಬೇಕು ಎಂದು ರಾಹುಲ್‌ಗೆ ಜಾರಿ ಮಾಡಿರುವ ನೋಟಿಸ್‌ನಲ್ಲಿ ಸೂಚಿಸಲಾಗಿದೆ.

2015ರ ನವೆಂಬರ್‌ನಲ್ಲಿ ರಾಹುಲ್‌ ಪೌರತ್ವ ಕುರಿತು ಸಿಬಿಐ ತನಿಖೆಯಾಗಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಪಿಐ ಎಲ್‌ ಅನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿತ್ತು. ಬಳಿಕ ಸಂಸದೀಯ ನೈತಿಕ ಸಮಿತಿಗೂ ಈ ಬಗ್ಗೆ ಸ್ವಾಮಿ ದೂರು ಸಲ್ಲಿಸಿದ್ದರು. ಇದು ರಾಹುಲ್‌ ಅವರಿಗೆ ಅವಹೇಳನ ಮಾಡಲು ಸಲ್ಲಿಸಿರುವ ದೂರು ಎಂದು ಹೇಳಿ ಸಮಿತಿ ಕೂಡ ಅರ್ಜಿಯನ್ನು ವಜಾ ಮಾಡಿತ್ತು.

ಮಂಗಳವಾರದ ನೋಟಿಸ್‌ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ರಾಜ ನಾಥ್‌ ಸಿಂಗ್‌, ಇದು ದೊಡ್ಡ ಬೆಳವಣಿಗೆಯೇನೂ ಅಲ್ಲ. ಇದೊಂದು ಸಾಮಾನ್ಯ ಪ್ರಕ್ರಿಯೆ. ಲೋಕಸಭೆ ಚುನಾವಣೆಯ ಹೊತ್ತಲ್ಲೇ ನೋಟಿಸ್‌ ನೀಡಲಾಗಿದೆ ಎಂಬ ಮಾತ್ರಕ್ಕೆ ಸಮಯದ ಬಗ್ಗೆ ಪ್ರಶ್ನಿಸುವುದು ಸರಿಯಲ್ಲ ಎಂದಿದ್ದಾರೆ.

ಭಾರತೀಯರ ಕಣ್ಣೆದುರೇ ಹುಟ್ಟಿ, ಬೆಳೆದವರು
ನೋಟಿಸ್‌ ಕುರಿತು ಪ್ರತಿಕ್ರಿಯೆ ನೀಡಿದ ಪ್ರಿಯಾಂಕಾ ವಾದ್ರಾ, “ಇಂಥ ಮೂರ್ಖತನವನ್ನು ನಾನೆಂದೂ ಕೇಳಿಲ್ಲ, ನೋಡಿಲ್ಲ. ರಾಹುಲ್‌ ಇಲ್ಲೇ ಹುಟ್ಟಿ, ಇಲ್ಲೇ ಬೆಳೆದವರು. ಅವರೊಬ್ಬ ಹಿಂದೂಸ್ಥಾನಿ ಎಂಬುದು ಇಡೀ ಹಿಂದೂಸ್ಥಾನಕ್ಕೇ ಗೊತ್ತು. ಭಾರತದ ಜನರ ಮುಂದೆಯೇ ರಾಹುಲ್‌ ಹುಟ್ಟಿದ್ದು, ಅವರ ಕಣ್ಣೆದುರೇ ಬೆಳೆದಿದ್ದು. ಸೋಲಿನ ಭೀತಿಯಿಂದ ಈ ರೀತಿಯ ಆರೋಪ ಮಾಡಲಾಗುತ್ತಿದೆ ಎಂದು ನನಗನಿಸುತ್ತಿದೆ’ ಎಂದು ಆಕ್ರೋಶಭರಿತರಾಗಿ ನುಡಿದಿದ್ದಾರೆ.

ಟಾಪ್ ನ್ಯೂಸ್

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

6-delhi-pollution

Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್‌, ಬಸ್‌ಗಳಿಗೆ ನಿರ್ಬಂಧ

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.