![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 1, 2019, 6:13 AM IST
ಸೋಮವಾರಪೇಟೆ: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ತಾಯಿ ಮತ್ತು ಮಗಳನ್ನು ಕತ್ತಿಯಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಸಮೀಪದ ದೊಡ್ಡಮಳೆ¤ ಗ್ರಾಮದಲ್ಲಿ ನಡೆದಿದೆ.
ದೊಡ್ಡಮಳೆ¤ ಗ್ರಾಮದ ದಿವಂಗತ ವೀರರಾಜು ಅವರ ಪತ್ನಿ ಕವಿತಾ (45) ಹಾಗೂ ಅವರ ಪುತ್ರಿ ಜಗಶ್ರೀ (17) ಮೃತಪಟ್ಟವರು.
ಕವಿತಾ ಅವರ ತಲೆ, ಕುತ್ತಿಗೆ ಕೈ, ಕಾಲು ಹಾಗೂ ಜಗಶ್ರೀಯ ಕೈ ಹಾಗೂ ತಲೆ ಭಾಗಕ್ಕೆ ಗಂಭೀರವಾಗಿ ಕಡಿದಿರುವ ಪರಿಣಾಮ ರಕ್ತದ ಮಡುವಿನಲ್ಲಿ ಬಿದ್ದು ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತಾಯಿಯ ಮೊಬೈಲ್‌ಗೆ ಕರೆ ಮಾಡಿದ ಪುತ್ರ ಮೇಘಮದನ್‌ರಾಜ್, ಮೊಬೈಲ್ ಸ್ವಿಚ್‌ಆಫ್ ಆಗಿದ್ದರಿಂದ ತೋಟದ ಬಳಿ ತೆರಳಿದ ಸಂದರ್ಭ ಘಟನೆ ಬೆಳಕಿಗೆ ಬಂದಿದೆ.
ತತ್‌ಕ್ಷಣ ಸ್ಥಳೀಯರಿಗೆ ಮಾಹಿತಿ ನೀಡಿದ ಮೇರೆಗೆ ಸ್ಥಳೀಯರು ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದರು. ಸ್ಥಳಕ್ಕೆ ಸೋಮವಾರಪೇಟೆ ಡಿವೈಎಸ್‌ಪಿ ದಿನಕರ್‌ಶೆಟ್ಟಿ, ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ, ಠಾಣಾಧಿಕಾರಿ ಶಿವಶಂಕರ್ ಅವರು ತೆರಳಿ ಪರಿಶೀಲನೆ ಮಾಡಿದ್ದಾರೆ.
ಸ್ಥಳೀಯರ ಅಸಮಾಧಾನ
ಸ್ಥಳದಲ್ಲಿ ಶ್ವಾನದಳವಿದ್ದರೂ ಯಾವುದೇ ಪರಿಶೀಲನೆ ನಡೆಸದೇ ಮೃತದೇಹಗಳನ್ನು ಸ್ಥಳಾಂತರಿಸಲು ಪೊಲೀಸರು ಮುಂದಾಗುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಡಿವೈಎಸ್‌ಪಿ ದಿನಕರ್ ಶೆಟ್ಟಿ ಸೇರಿದಂತೆ ಪೊಲೀಸರು ಸ್ಥಳೀಯರನ್ನು ಸಮಾಧಾನಪಡಿಸಿದರು. ಶ್ವಾನದಳದಿಂದ ಪರಿಶೀಲನೆ ನಡೆಸಿದ ಅನಂತರ ಮೃತದೇಹವನ್ನು ಸಾಗಿಸಲಾಯಿತು.
ಘಟನೆಗೆ ಆಸ್ತಿಯಲ್ಲಿನ ದಾರಿ ವಿವಾದವೇ ಕಾರಣ ಎನ್ನಲಾಗಿದ್ದು, ಈ ಹಿಂದೆ ದಾರಿಗೆ ಸಂಬಂಧಿಸಿದಂತೆ ತಕರಾರು ನಡೆಸುತ್ತಿದ್ದ ಸ್ಥಳೀಯ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿರುವ ಬಗ್ಗೆ ತಿಳಿದುಬಂದಿದೆ.
ಮೃತೆ ಜಗಶ್ರೀ ಹಾಸನದ ಸಂತ ಫಿಲೋಮಿನಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ರಜೆಯ ಹಿನ್ನೆಲೆ ಮನೆಗೆ ಆಗಮಿಸಿದ್ದಳು. ಪುತ್ರ ಮೇಘಮದನ್‌ರಾಜ್ ವೀರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ.
You seem to have an Ad Blocker on.
To continue reading, please turn it off or whitelist Udayavani.