ಫ‌ಲಿತಾಂಶದಲ್ಲಿ ಸಾಧನೆ ತೋರಿ ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳು


Team Udayavani, May 1, 2019, 12:56 PM IST

Udayavani Kannada Newspaper

ಕಲಬುರಗಿ: ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಅಂಕ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಬಿಸಿಲೂರಿನ ಪ್ರತಿಭಾವಂತ 10 ವಿದ್ಯಾರ್ಥಿಗಳು ರಾಜ್ಯದ 10ನೇ ರ್‍ಯಾಂಕ್‌ನೊಳಗೆ ಸ್ಥಾನ ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ.

ಒಬ್ಬ ವಿದ್ಯಾರ್ಥಿನಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದು ಮಿಂಚಿದರೆ, ಸರ್ಕಾರಿ ಶಾಲೆ ವಿದ್ಯಾರ್ಥಿಯೊಬ್ಬ ಕನ್ನಡ ಮಾಧ್ಯಮದಲ್ಲಿ 617 ಅಂಕಗಳನ್ನು ಪಡೆದು 9ನೇ ರ್‍ಯಾಂಕ್‌ನೊಂದಿಗೆ ಅದ್ವೀತಿಯ ಸಾಧನೆ ಮಾಡಿದ್ದಾನೆ. ಒಟ್ಟಾರೆ ಒಬ್ಬ ವಿದ್ಯಾರ್ಥಿನಿ ಜಿಲ್ಲೆಗೆ ಟಾಪರ್‌ ಆಗಿ ಹೊರಹೊಮ್ಮಿದರೆ, ಇಬ್ಬರು ಟಾಪ್‌ ಎರಡನೇ ಸ್ಥಾನ ಹಾಗೂ ನಾಲ್ವರು ಟಾಪ್‌ ಮೂರನೇ ಸ್ಥಾನ ಹಾಗೂ ಮೂವರು ಟಾಪ್‌ ನಾಲ್ಕನೇ ಸ್ಥಾನ ಹಂಚಿಕೊಂಡಿದ್ದಾರೆ.

ನಗರದ ಪ್ರತಿಷ್ಠಿತ ಶರಣಬಸವೇಶ್ವರ ವಸತಿ ಶಾಲೆಯ ಸಾಕ್ಷಿ ಬಿರಾದಾರ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ 625ಕ್ಕೆ 620 ಅಂಕಗಳೊಂದಿಗೆ ಶೇ.99.20ರಷ್ಟು ಫಲಿತಾಂಶ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅದೇ ರೀತಿ ಇದೇ ಶಾಲೆಯ ಶಾಲೆಯ ಸ್ನೇಹಾ ಪಾಟೀಲ ಹಾಗೂ ಅಫಜಲಪುರ ತಾಲೂಕಿನ ಚೌಡಾಪುರದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಭಾಗ್ಯಶ್ರೀ ಇಬ್ಬರೂ ತಲಾ 618 ಸಮಾನ ಅಂಕ ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಭಾಗ್ಯಶ್ರೀ ಕನ್ನಡದಲ್ಲಿ 125ಕ್ಕೆ 125ಕ್ಕೆ ಮತ್ತು ಹಿಂದಿಯಲ್ಲಿ 100ಕ್ಕೆ 100 ಅಂಕ ಪಡೆದಿದ್ದರೆ, ಇಂಗ್ಲಿಷ್‌ನಲ್ಲಿ 99, ಸಮಾಜ ವಿಜ್ಞಾನದಲ್ಲಿ 99, ಗಣಿತದಲ್ಲಿ 97, ವಿಜ್ಞಾನದಲ್ಲಿ 98 ಅಂಕ ಗಳಿಸಿದ್ದಾರೆ. ಇತ್ತ, ಅಫಜಲಪುರ ತಾಲೂಕಿನ ಮಣ್ಣೂರು ಸರ್ಕಾರಿ ಶಾಲೆಯ ವಿದ್ಯಾರ್ಥಿ ಮತೀನ್‌ ಕನ್ನಡ ಮಾಧ್ಯಮದಲ್ಲಿ 617 ಅಂಕಗಳೊಂದಿಗೆ ಶೇ. 98.72ರಷ್ಟು ಫಳಿತಾಂಶ ಪಡೆದು ಗಮನ ಸೆಳೆದಿದ್ದಾರೆ.

ಕನ್ನಡದಲ್ಲಿ 125ಕ್ಕೆ 125ಕ್ಕೆ ಅಂಕ, ಗಣಿತ ಮತ್ತು ಹಿಂದಿಯಲ್ಲಿ 100ಕ್ಕೆ 100 ಅಂಕವನ್ನು ಮತೀನ್‌ ಪಡೆದಿದ್ದಾರೆ. ವಿಶೇಷವೆಂದರೆ ಕನ್ನಡ ಮಾಧ್ಯಮವಾಗಿದ್ದರೂ ಇಂಗ್ಲಿಷ್‌ನಲ್ಲಿ 100ಕ್ಕೆ 99 ಪಡೆದು ಮತೀನ್‌ ಅಮೋಘ ಸಾಧನೆ ಮಾಡಿದ್ದಾರೆ. ಸಮಾಜ ವಿಜ್ಞಾನದಲ್ಲಿ 100ಕ್ಕೆ 98 ಅಂಕ ಈತ ಮುಂದೆ ವಿಜ್ಞಾನ ವಿಷಯ ಆಯ್ಕೆ ಮಾಡಿಕೊಳ್ಳುವ ಉದ್ದೇಶ ಹೊಂದಿದ್ದಾನೆ.

ಎಸ್‌ಆರ್‌ಎನ್‌ ಮೆಹ್ತಾ ಶಾಲೆಯ ಭರತ್‌ ಪಾಟೀಲ ಮತ್ತು ಚೇತನ್‌ ಜಾಧವ್‌ ಸಹ ತಲಾ 617 ಅಂಕ ಪಡೆದಿದ್ದಾರೆ. ಶರಣಬಸವೇಶ್ವರ ವಸತಿ ಶಾಲೆಯ ಸುಮಿತ್‌, ವಿದ್ಯಾಚೇತನ ಶಾಲೆಯ ಲಕ್ಷ್ಮೀ ಹಾಗೂ ಸರ್ದಾರ ವಲ್ಲಭಭಾಯಿ ಪಟೇಲ್ ಸ್ಮಾರಕ ಶಾಲೆಯ ಶೇಕ್‌ ಅಬ್ದುಲ್ ರಹಮಾನ್‌ ತಲಾ 616 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.