ಬರದ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ಬೆಂಬಲ?
•ಈ ಬಾರಿ ಶೇ. 1.3ರಷ್ಟು ಮತದಾನ ಇಳಿಕೆ •ಬಿಜೆಪಿಗೆ ಮೋದಿ ಅಲೆ-ಮೈತ್ರಿಪಕ್ಷಗಳಿಗೆ ಅಹಿಂದ ಬಲ
Team Udayavani, May 1, 2019, 1:18 PM IST
ಜಗಳೂರು ವಿಧಾನ ಸಭಾ ಕ್ಷೇತ್ರ
ದಾವಣಗೆರೆ: ಜಿಲ್ಲೆಯಲ್ಲಿ ಸದಾ ಬರಗಾಲದಿಂದ ತತ್ತರಿಸುವ, ರಾಜ್ಯದ ಅತಿ ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿ ಒಂದಾಗಿರುವ ಜಗಳೂರು ವಿಧಾನಸಭಾ ಕ್ಷೇತ್ರದಲ್ಲಿ 2014ರ ಲೋಕಸಭಾ ಚುನಾವಣೆಗಿಂತ ಈ ಬಾರಿ ಮತದಾನ ಇಳಿಕೆ ಆಗಿದೆ.
2014ರ ಲೋಕಸಭಾ ಚುನಾವಣೆಯಲ್ಲಿ ಶೇ. 74.66ರಷ್ಟು ಮತದಾನ ಆಗಿದ್ದರೆ, ಈ ಬಾರಿ ಶೇ. 73.36 ಮತದಾನ ಆಗಿದೆ. ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಒಟ್ಟು ಜಗಳೂರು ವಿಧಾನ ಸಭಾ ಕ್ಷೇತ್ರದ 1,73,202 ಮತದಾರರ ಪೈಕಿ ಒಟ್ಟು 1,29,325 ಮಂದಿ ಮತದಾನ ಮಾಡಿದ್ದರು. ಈ ಬಾರಿಯ ಚುನಾವಣೆಯಲ್ಲಿ 96,143 ಪುರುಷರು, 95,570 ಮಹಿಳೆಯರು ಹಾಗೂ 10 ಮಂದಿ ಇತರರು ಒಳಗೊಂಡಂತೆ 1,89,723 ಮತದಾರರು ಇದ್ದರು. ಕಳೆದ ಚುನಾವಣೆಗಿಂತ ಈ ಬಾರಿ 16,521 ಮತದಾರರು ಹೆಚ್ಚಾಗಿದ್ದಾರೆ.
ಕಳೆದ ಏ.23ರಂದು ನಡೆದ ಚುನಾವಣೆಯಲ್ಲಿ 96,143 ಪುರುಷ ಮತದಾರರಲ್ಲಿ 72,202 ಹಾಗೂ 95,570 ಮಹಿಳಾ ಮತದಾರರ ಪೈಕಿ 66,975 ಮಂದಿ ಮತದಾನ ಮಾಡಿದ್ದಾರೆ. ಇತರೆ 10 ಮಂದಿಯಲ್ಲಿ ಕೇವಲ ಒಬ್ಬರು ಮತದಾನ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಜಗಳೂರು ಕ್ಷೇತ್ರದಲ್ಲಿ ಒಟ್ಟು 1,39,178 ಮಂದಿ ತಮ್ಮ ಸಂವಿಧಾನಿಕ ಹಕ್ಕು ಚಲಾಯಿಸಿದ್ದಾರೆ.
ಕಡಿಮೆ ಮತದಾನ: ಕಳೆದ ಲೋಕಸಭಾ ಚುನಾವಣೆಗಿಂತಲೂ ಈ ಬಾರಿ ಜಗಳೂರು ಕ್ಷೇತ್ರದಲ್ಲಿ 9,853 ಹೆಚ್ಚು ಮತದಾರರು ಮತ ಚಲಾಯಿಸಿದ್ದರೂ ಒಟ್ಟು ಶೇ. 1.3 ಕಡಿಮೆ ಪ್ರಮಾಣದ ಮತದಾನ ಆಗಿದೆ.
ಮುನ್ನಡೆ ಲೆಕ್ಕಚಾರದಲ್ಲಿ ಬಿಜೆಪಿ: ಜಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಈಗ ಭಾರತೀಯ ಜನತಾ ಪಕ್ಷದ ಎಸ್.ವಿ.ರಾಮಚಂದ್ರ ಶಾಸಕರು. 2018ರಲ್ಲಿ ನಡೆದ ರಾಜ್ಯ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ನ ಎಚ್.ಪಿ. ರಾಜೇಶ್‌ರನ್ನು 29,221 ಮತಗಳ ಅಂತರದಿಂದ ಪರಾಭವಗೊಳಿಸಿದ್ದರು. ಆ ಚುನಾವಣೆಯಲ್ಲಿ ಎಸ್.ವಿ.ರಾಮಚಂದ್ರ 78,848 ಮತ ಪಡೆದಿದ್ದರೆ, ಎಚ್.ಪಿ.ರಾಜೇಶ್ 49,727 ಮತ ಗಳಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ದೇವೇಂದ್ರಪ್ಪಗೆ 13,401 ಮತ ದೊರೆತಿದ್ದವು. ಹಾಗಾಗಿ 2019ರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಯೇ ಲೀಡ್ ಪಡೆಯಲಿದ್ದಾರೆ ಎಂಬ ಲೆಕ್ಕಾಚಾರ ಕಮಲ ಪಾಳೆಯದ್ದು.
ಮೋದಿ ಅಲೆ ಪ್ಲಸ್ ಪಾಯಿಂಟ್: ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ್, ಜಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಅಲೆ ಮತ್ತು ಎಲೆ ಮರೆಯ ಕಾಯಂತೆ ಸಂಘ ಪರಿವಾರದವರ ಕಾರ್ಯತಂತ್ರ ಅವರಿಗೆ ಪ್ಲಸ್ ಪಾಯಿಂಟ್ ಎಂಬ ಮಾತು ಕೇಳಿ ಬರುತ್ತಿದೆ.
ಕಮಲ ಪಡೆ ಬಲಿಷ್ಠ: ಜಗಳೂರು ಪಟ್ಟಣ ಪಂಚಾಯತ್ ಬಿಜೆಪಿ ಹಿಡಿತದಲ್ಲಿದೆ. ಜಿಲ್ಲಾ ಪಂಚಾಯತ್‌ನ ಮೂವರು, ತಾಲೂಕು ಪಂಚಾಯತ್‌ನ 8 ಸದಸ್ಯರು ಇರುವುದರಿಂದ ಕಮಲ ಪಡೆ ಬಲಶಾಲಿಯಾಗಿದೆ ಎಂಬುದು ಮೇಲ್ನೋಟಕ್ಕೆ ಕಾಣಲಿದೆ.
ಕಾಂಗ್ರೆಸ್ ಕೈಡಿಯಲಿದೆಯೇ ಅಹಿಂದ?: 2014ರ ಲೋಕಸಭಾ ಚುನಾವಣೆಯಲ್ಲಿ ಈ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್.ಮಲ್ಲಿಕಾರ್ಜುನ್ ಮುನ್ನಡೆ ಸಾಧಿಸಿದ್ದರು. ಹಿಂದುಳಿದ ಪ್ರದೇಶವಾಗಿರುವುದರಿಂದ ಈ ವಿಧಾನ ಸಭಾ ಕ್ಷೇತ್ರದಲ್ಲಿ ಒಂದಿಷ್ಟು ಅಹಿಂದ ವರ್ಗದ ಜನಸಂಖ್ಯೆ ಹೆಚ್ಚಿದೆ. ಎಸ್ಸಿ-ಎಸ್ಟಿ, ಯಾದವ, ಮುಸ್ಲಿಮರು, ರೆಡ್ಡಿ ಸಮುದಾಯ, ಲಿಂಗಾಯತ ಸಮಾಜದವರೂ ಗಣನೀಯ ಪ್ರಮಾಣದಲ್ಲಿದ್ದಾರೆ. ಮೈತ್ರಿ ಅಭ್ಯರ್ಥಿ ಎಚ್.ಬಿ.ಮಂಜಪ್ಪ ಅಹಿಂದ ಮತದಾರರನ್ನ ಸೆಳೆಯಬಹುದೆಂಬ ಲೆಕ್ಕಾಚಾರ ಕೈ ಪಾಳೆಯದ್ದು. ಜತೆಗೆ ಮಾಜಿ ಶಾಸಕ ಎಚ್.ಪಿ.ರಾಜೇಶ್, ಜೆಡಿಎಸ್ ಮುಖಂಡರು ಸಹ ಕ್ಷೇತ್ರದಲ್ಲಿ ಅಡ್ಡಾಡಿರುವುದು ಮಂಜಪ್ಪಗೆ ಅನುಕೂಲವಾಗಲಿದೆ ಎಂಬ ಮಾತು ಕೇಳಿ ಬರುತ್ತಿದೆ. ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಮುಖಂಡರು ತಮ್ಮನ್ನು ಸಮರ್ಪಕವಾಗಿ ಬಳಸಿಕೊಳ್ಳಲಿಲ್ಲ ಎಂಬ ಅಸಮಾಧಾನ ಜೆಡಿಎಸ್ ಪಕ್ಷದಲ್ಲಿದೆ. ಈ ಬೇಸರ ಮೈತ್ರಿ ಅಭ್ಯರ್ಥಿ ಮತ ಗಳಿಕೆಗೆ ಅಡ್ಡಿಯಾಗಲಿದೆ ಎಂಬುದಾಗಿ ನಿಖರವಾಗಿ ಹೇಳಲಾಗದು. 2014ರ ಲೋಕಸಭಾ ಚುನಾವಣೆಯಲ್ಲಿ ಜಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯ ಜಿ.ಎಂ. ಸಿದ್ದೇಶ್ವರ್ 58,578 ಮತ ಪಡೆದಿದ್ದರೆ, ಕಾಂಗ್ರೆಸ್‌ನ ಎಸ್.ಎಸ್. ಮಲ್ಲಿಕಾರ್ಜುನ್ 60,480 ಮತ ಗಳಿಸಿದ್ದರು. ಇನ್ನು ಜೆಡಿಎಸ್‌ನ ಮಹಿಮಾ ಜೆ. ಪಟೇಲ್ 3,790 ಮತ ತಮ್ಮದಾಗಿಸಿಕೊಂಡಿದ್ದರು.
ಎನ್.ಆರ್. ನಟರಾಜ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು
Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್’
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.