ನಾಲೆಗಳಲ್ಲಿನ ತ್ಯಾಜ್ಯ ಸ್ವಚ್ಛಗೊಳಿಸಿ


Team Udayavani, May 1, 2019, 2:51 PM IST

mandya-3-tdy..

ಮದ್ದೂರು ಪುರಸಭೆ ವ್ಯಾಪ್ತಿಯ ಕೆಮ್ಮಣ್ಣು ನಾಲೆಯಲ್ಲಿ ಶೇಖರಣೆಗೊಂಡಿರುವ ತ್ಯಾಜ್ಯ .

ಮದ್ದೂರು: ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯದ ಫ‌ಲವೆಂಬಂತೆ ಪಟ್ಟಣದಲ್ಲಿ ಹಾದು ಹೋಗಿರುವ ಕಾಲುವೆಗಳು ತ್ಯಾಜ್ಯದಿಂದ ತುಂಬಿ ಕಳೆ ಸಸ್ಯಗಳು ಬೆಳೆದು ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ನೀಡಿದಂತಾಗಿದೆ.

ಮದ್ದೂರು ಕೆರೆ ಅಚ್ಚುಕಟ್ಟು ಭಾಗದ ಜಮೀನುಗಳಿಗೆ ನೀರೊದಗಿಸುವ ಕೆಮ್ಮಣ್ಣು ನಾಲೆ, ಚಾಮನಹಳ್ಳಿ ನಾಲೆ, ಭೈರನ್‌ನಾಲೆ ಮತ್ತು ವೈದ್ಯನಾಥಪುರ ನಾಲೆಗಳೆಲ್ಲವೂ ಕಳೆಗಿಡಗಳಿಂದ ತುಂಬಿವೆ. ಜತೆಗೆ ಮದ್ದೂರು ಪಟ್ಟಣದ ಕೆಲ ಬಡಾವಣೆಗಳ ತ್ಯಾಜ್ಯ ನೀರಿನ ಹೊಂಡಗಳಾಗಿ ಪರಿವರ್ತನೆಗೊಂಡಿವೆ.

ಪಟ್ಟಣದ ಮಧ್ಯಭಾಗದಲ್ಲಿ ಹಾದು ಹೋಗಿರುವ ಕೆಮ್ಮಣ್ಣು ನಾಲೆ, ವೈದ್ಯನಾಥಪುರ ನಾಲೆ ಹಾಗೂ ಭೈರನ್‌ ನಾಲೆಗಳ ಕೊಳಚೆ ನೀರಿನಲ್ಲಿ ಉತ್ಪಾದನೆಯಾಗುವ ಸೊಳ್ಳೆಗಳು ಮೇಲಿನ ನಾಲಾ ದಂಡೆಗಳಲ್ಲಿನ ನಿವಾಸಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತಿದ್ದು, ನೀರಾವರಿ ಇಲಾಖೆ ಅಧಿಕಾರಿಗಳು ಕಂಡು ಕಾಣದಂತಿರುವುದು ವಿಪರ್ಯಾಸವೇ ಆಗಿದೆ.

ನಾಲೆಗೆ ತ್ಯಾಜ್ಯವೂ ಸೇರ್ಪಡೆ: ಕೆಮ್ಮಣ್ಣು ನಾಲೆಯಲ್ಲಿ ಆಳೆತ್ತರದ ಗಿಡಗಂಟಿಗಳು ಬೆಳೆದು ನಿಂತಿರುವ ಜತೆಗೆ ತ್ಯಾಜ್ಯ ವಸ್ತುಗಳು ಸುರಿಯುವ ಕೇಂದ್ರವಾಗಿ ಮಾರ್ಪಟ್ಟಿವೆ. ವಿವಿಧ ಬಡಾವಣೆಗಳ ತ್ಯಾಜ್ಯ ನೀರು ಕೆಮ್ಮಣ್ಣು ನಾಲೆಗೆ ಸೇರುತ್ತಿದೆ. ಇದರಿಂದ ಚರ್ಮವ್ಯಾದಿ ಕಾಯಿಲೆಗಳು ಕಂಡು ಬರುತ್ತಿದ್ದು, ಸ್ಥಳೀಯ ಸಂಘ, ಸಂಸ್ಥೆಗಳು ಹಲವಾರು ಬಾರಿ ಪ್ರತಿಭಟನೆ ನಡೆಸಿದರೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕಂಡು ಕಾಣದಂತೆ ಮೌನ ವಹಿಸಿದ್ದಾರೆ.

ತ್ಯಾಜ್ಯವೇ ತೆರವುಗೊಳಿಸಿಲ್ಲ: ಕಳೆದ ವರ್ಷದ ಮಳೆಗಾಲದಲ್ಲಿ ಕಾಲುವೆಯ ಕಳೆ ಸಸ್ಯಗಳು, ತ್ಯಾಜ್ಯ, ಹೂಳು ತೆಗೆಸಿ ರಸ್ತೆಬದಿ ಹಾಕಿದ ನೀರಾವರಿ ನಿಗಮದ ಅಧಿಕಾರಿಗಳು, ಮತ್ತೂಂದು ವರ್ಷದ ಮಳೆಗಾಲ ಮುಕ್ತಾಯಗೊಂಡಿದ್ದರೂ ರಾಶಿಬಿದ್ದಿರುವ ಕಸದ ತ್ಯಾಜ್ಯವನ್ನು ಬೇರೆಡೆಗೆ ಸಾಗಿಸಿಲ್ಲ. ಇದು ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಸಾಕ್ಷಿ. ಕಾಲುವೆಗಳಲ್ಲಿ ತ್ಯಾಜ್ಯ ಹೊರತೆಗೆದು ಸ್ವಚ್ಛಗೊಳಿಸಿದ ಮೇಲೆ ಆ ತ್ಯಾಜ್ಯವನ್ನು ಬೇರೆಡೆಗೆ ಸಾಗಿಸಬೇಕೆಂಬ ಪ್ರಾಥಮಿಕ ಜ್ಞಾನವೂ ಅಧಿಕಾರಿಗಳಿಗಿಲ್ಲವೇ ಎಂದು ಸಾರ್ವಜನಿಕರ ಪ್ರಶ್ನೆಯಾಗಿದೆ. ಹಲವು ಬಾರಿ ನೀರಾವರಿ ಇಲಾಖೆ ಕಚೇರಿ ಬಳಿ ಪ್ರತಿಭಟನೆಗಳೂ ನಡೆಸಿದರೂ ಇದ್ಯಾವುದಕ್ಕೂ ಸೊಪ್ಪು ಹಾಕದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.

ನೀರುಗಂಟಿ ನೇಮಕದಲ್ಲಿ ಭ್ರಷ್ಟಾಚಾರ: ಈ ಹಿಂದೆ ಪ್ರತಿ ಕಾಲುವೆಗಳಿಗೂ ನಿರ್ವಹಣೆಗೆಂದು ನೇಮಿಸಲ್ಪಟ್ಟಿದ್ದ ನೀರುಗಂಟಿಗಳನ್ನು ಉಳಿತಾಯದ ನೆಪವೊಡ್ಡಿ ಆರೋಗ್ಯ, ಶಿಕ್ಷಣ ಮತ್ತಿತರ ಇಲಾಖೆಗಳಿಗೆ ವರ್ಗಾಯಿಸಲಾಗಿದೆ. ಪ್ರಸಕ್ತ ಗುತ್ತಿಗೆ ಆಧಾರದ ಮೇಲೆ ನೀರುಗಂಟಿಗಳ ನೇಮಕ ಮಾಡಿದ್ದು ಇದು ಕಡತಗಳಿಗೆ ಮಾತ್ರ ಸೀಮಿತವಾಗಿದೆ. ಗುತ್ತಿಗೆ ಆಧಾರದಲ್ಲಿ ನೇಮಿಸಿರುವ ನೀರು ಗಂಟಿಗಳಿಗೆ ತಿಂಗಳಲ್ಲಿ ಐದರಿಂದ ಹತ್ತು ದಿನ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಿ, ಉಳಿದ ಇಪ್ಪತ್ತು ದಿನಗಳ ಹಾಜರಾತಿ ತೋರಿಸಿ ಗೋಲ್ಮಾಲ್ ಮಾಡುತ್ತಿರುವ ಬಗ್ಗೆ ಸದರಿ ಹಣ ಮೇಲ್ಮಟ್ಟದಿಂದ ಹಿಡಿದು ಕೆಳವರ್ಗದ ಗುಮಾಸ್ತರವರೆಗೂ ಹಂಚಿಕೆಯಾಗುತ್ತಿದೆ ಎಂದೂ ಸ್ಥಳೀಯರು ಆರೋಪಿಸಿದ್ದಾರೆ. ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮದ್ದೂರು ಪಟ್ಟಣದಲ್ಲಿ ಅಶುಚಿತ್ವ, ಅನಾರೋಗ್ಯ ತಾಂಡವವಾಡುತ್ತಿದೆ. ಮಾರಕ ರೋಗಗಳಿಗೆ ಎಡೆಮಾಡಿಕೊಟ್ಟಿದ್ದರೂ ಸ್ಥಳೀಯ ಶಾಸಕರೂ ಸೇರಿದಂತೆ ಅಧಿಕಾರಸ್ಥ ರಾಜಕಾರಣಿಗಳು ಕಂಡು ಕಾಣದಂತಿರುವುದು ಹತ್ತು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೇವಲ ಪುರಸಭೆ, ಆರೋಗ್ಯ ಇಲಾಖೆಯತ್ತ ಬೊಟ್ಟು ಮಾಡುವ ಬದಲು ಕಾಲುವೆ ಸ್ವಚ್ಛತೆಗೆ ಮುಂದಾಗದ ನೀರಾವರಿ ನಿಗಮದ ಅಧಿಕಾರಿಗಳ ಧೋರಣೆಗೆ ತಕ್ಕ ಉತ್ತರ ನೀಡಲು ಸಾರ್ವಜನಿಕರು ಬೀದಿಗಿಳಿಯುವ ಮೊದಲು ಅವ್ಯವಸ್ಥೆ ಸರಿಪಡಿಸಲು ಮುಂದಾಗಬೇಕಿದೆ ಎಂದು ಎಚ್ಚರಿಸಿದ್ದಾರೆ.

•ಎಸ್‌.ಪುಟ್ಟಸ್ವಾಮಿ

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

festcide

Mandya: ಭ್ರೂಣ ಹತ್ಯೆ ತಲೆಮರೆಸಿಕೊಂಡಿದ್ದ 12 ಆರೋಪಿಗಳ ಬಂಧನ

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Bommai

Governer Procicution: ಹೈಕೋರ್ಟ್‌ ತೀರ್ಪಿನ ಮೇಲೆ ಸಿಎಂ ಸ್ಥಾನ ನಿರ್ಧಾರ: ಬೊಮ್ಮಾಯಿ

suicide (2)

Mandya; ರೋಡ್ ರೋಮಿಯೋಗಳ ಕಿರುಕುಳ: 14 ವರ್ಷದ ವಿದ್ಯಾರ್ಥಿನಿ ಆತ್ಮಹ*ತ್ಯೆ

1-wwwww

BJP 12 ವರ್ಷಗಳಿಂದ ತುಕ್ಕು ಹಿಡಿದಿದ್ದ ಪ್ರಕರಣಕ್ಕೆ ಜೀವ ನೀಡಿದೆ: ಸಚಿವ ಮಧು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.