ಪಿಎಸ್‌ಐ ವಿರುದ್ಧ ಡಿವೈಎಸ್‌ಪಿಗೆ ದೂರು
ಅನುಚಿತ ನಡವಳಿಕೆ, ದೂರು ದಾಖಲಿಸಿಕೊಳ್ಳಲು ಮೀನಮೇಷ: ಆರೋಪ
Team Udayavani, May 1, 2019, 3:31 PM IST
ತಿಪಟೂರು: ಹುಳಿಯಾರು ಪೊಲೀಸ್ ಠಾಣೆಯ ಪಿಎಸ್‌ಐ ಲಕ್ಷ್ಮೀಕಾಂತ್ ಅನುಚಿತ ನಡವಳಿಕೆ ಹಾಗೂ ದೂರು ದಾಖಲಿಸಿಕೊಳ್ಳಲು ಮೀನಮೇಷ ಎಣಿ ಸುತ್ತಿದ್ದು, ಇವರ ವಿರುದ್ಧ ಕಾನೂನೂ ಕ್ರಮ ಕೈಗೊಳ್ಳಬೇಕೆಂದು ತುಮಕೂರು ಜಿಲ್ಲಾ ಜಯಕರ್ನಾಟಕ ಸಂಘಟನೆ ಪದಾಧಿಕಾರಿಗಳು ತಿಪಟೂರು ಉಪ ವಿಭಾಗದ ಡಿವೈಎಸ್‌ಪಿ ಕಲ್ಯಾಣ್‌ಕುಮಾರ್ ರವರಿಗೆ ಮನವಿ ಪತ್ರ ಸಲ್ಲಿಸಿದ ಘಟನೆ ಸೋಮವಾರ ನಡೆಯಿತು.
ಈ ವೇಳೆ ಜಿಲ್ಲಾ ಅಧ್ಯಕ್ಷ ಸಿ.ಪಿ. ಸುಧೀರ್ ಮಾತನಾಡಿ, ಹುಳಿಯಾರು ಹೋಬಳಿ ಜಯ ಕರ್ನಾಟಕ ಅಧ್ಯಕ್ಷ ಮೋಹನ್‌ಕುಮಾರ್ ರೈ ಸ್ಥಳೀಯ ವಿಷಯವಾಗಿ ಠಾಣೆಗೆ ದೂರು ನೀಡಲು ಹೋದಾಗ ಪಿಎಸ್‌ಐ ಲಕ್ಷ್ಮೀಕಾಂತ್ ಈ ವಿಷಯದ ಬಗ್ಗೆ ಕೇಳಲು ನೀನು ಯಾರು ಎಂದು ಏಕಾಏಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೇ ಸಂಘಟನೆ ಬಗ್ಗೆ ಕೇವಲವಾಗಿ ಮಾತನ್ನಾಡುತ್ತಾರೆ.
ಈ ರೀತಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಯಾಗಿ ಈ ರೀತಿ ನಡೆದು ಕೊಂಡರೆ ಜನಸಾಮಾನ್ಯರ ಗತಿ ಏನು. ಈ ಬಗ್ಗೆ ತಾವುಗಳು ಪರಿಶೀಲನೆ ನಡೆಸಿ ಪಿಎಸ್‌ಐ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳ ಬೇಕೆಂದು ಒತ್ತಾಯಿಸಿದರು.
ಈ ವೇಳೆ ಜಯಕರ್ನಾಟಕ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ತಿಮ್ಮರಾಜು, ಗಿರೀಶ್‌ಗೌಡ, ತಿಪಟೂರು ತಾಲೂಕು ಅಧ್ಯಕ್ಷ ಬಿ.ಟಿ. ಕುಮಾರ್, ಮಧುಗಿರಿ ತಾಲೂಕು ಅಧ್ಯಕ್ಷ ಚಂದನ್, ಹುಳಿಯಾರು ಹೋಬಳಿ ಅಧ್ಯಕ್ಷ ಮೋಹನ್‌ಕುಮಾರ್ ರೈ, ಕಾರ್ಯಾಧ್ಯಕ್ಷ ತಾಂಡವಚಾರ್, ಯುವಘಟಕದ ಮೋಹನ್‌ಬಾಬು, ಪ್ರಶಾಂತ್, ರಾಜೇಶ್, ಖಲಂದರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.