ಸರ್ಕಾರದ ಸವಲತ್ತು ಸದುಪಯೋಗಿಸಿಕೊಳ್ಳಿ
Team Udayavani, May 2, 2019, 3:00 AM IST
ಕೊಳ್ಳೇಗಾಲ: ಅಸಂಘಟಿತ ಕಾರ್ಮಿಕರ ಉದ್ಧಾರಕ್ಕಾಗಿ ಸರ್ಕಾರ ಕೈಗೊಳ್ಳುವ ಸವಲತ್ತುಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿ ಸರ್ಕಾರದ ಸವಲತ್ತುಗಳು ಲಭಿಸುವಂತೆ ಮಾಡಬೇಕು ಎಂದು ತಾಲೂಕು ಮರಗೆಲಸ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶ್ರೀನಿವಾಸ್ ಒತ್ತಾಯಿಸಿದರು.
ನಗರದ ಮರಗೆಲಸ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯಲ್ಲಿ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ಸರ್ಕಾರ ನೀಡುವ ಕೆಲವು ಸವಲತ್ತುಗಳು ಕಾರ್ಮಿಕರಿಗೆ ತಿಳಿಯದಂತೆ ಆಗಿದ್ದು, ಕಡ್ಡಾಯವಾಗಿ ಪ್ರತಿಯೊಬ್ಬರಿಗೂ ಸವಲತ್ತುಗಳ ಅರಿವು ಮೂಡಿಸುವ ಪ್ರಯತ್ನ ಆದಾಗ ಮಾತ್ರ ಅಸಂಘಟಿತ ಕಾರ್ಮಿಕರು ಸಂಘಟಿತರಾಗಲು ಸಾಧ್ಯ ಎಂದರು.
ಸರ್ಕಾರದಿಂದ ಗ್ರಾಮೀಣ ಪ್ರದೇಶದ ಕಾರ್ಮಿಕರಿಗೆ ಯಾವುದೇ ಸೌಲಭ್ಯ ದೊರಯದೆ ವಂಚಿತರಾಗುತ್ತಿದ್ದು, ಅಂತಹ ಕಾರ್ಮಿಕರನ್ನು ಸರ್ಕಾರ ಗುರುತಿಸಿ ಅವರಿಗೂ ಸಹ ಸರ್ಕಾರದ ಸೌಲಭ್ಯಗಳು ದಕ್ಕುವಂತೆ ಮಾಡಿದಾಗ ಮಾತ್ರ ಕಾರ್ಮಿಕರ ದಿನಾಚರಣೆ ಸಾರ್ಥಕವಾಗಲಿದೆ ಎಂದು ತಿಳಿಸಿದರು.
ಕಾರ್ಮಿಕರ ದಿನಾಚರಣೆಯನ್ನು ಕಳೆದ 10 ವರ್ಷಗಳಿಂದ ಸಂಘದಿಂದ ಆಚರಿಸುತ್ತಾ ಬಂದಿದ್ದು, ಸಂಘದ ಸದಸ್ಯರು ನೀಡುವ ದೇಣಿಗೆಯಿಂದ ದಿನಾಚರಣೆಯನ್ನು ಹಬ್ಬವನ್ನಾಗಿ ಆಚರಣೆ ಮಾಡಲಾಗುತ್ತದೆ. ಪ್ರತಿ ವರ್ಷ ಬಡಮಕ್ಕಳಿಗೆ ಉಚಿತ ಬಟ್ಟೆ, ಪುಸ್ತಕ ಮತ್ತು ಉಪಹಾರಗಳನ್ನು ನೀಡುತ್ತಾ ಬಂದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಬಡವರಿಗೆ ಸವಲತ್ತುಗಳನ್ನು ನೀಡುವ ಉದ್ದೇಶ ಹೊಂದಲಾಗಿದೆ ಎಂದರು.
ಮೆರವಣಿಗೆ: ನಗರದ ಉಮಾಶಂಕರ್ ಕಲ್ಯಾಣ ಮಂಟಪದ ಬಳಿ ಇರುವ ಮರಗೆಲಸ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಹೊರಟ ಮೆರವಣಿಗೆ ಬಸ್ ನಿಲ್ದಾಣ, ಡಾ. ವಿಷ್ಣುವರ್ಧನ್, ಡಾ. ರಾಜ್‌ಕುಮಾರ್, ಡಾ. ಬಿ.ಆರ್. ಅಂಬೇಡ್ಕರ್, ಲೋಕೋಪಯೋಗಿ ಇಲಾಖೆಯ ವಸತಿ ಗೃಹದ ರಸ್ತೆ ಆರ್‌ಎಂಸಿ ಆವರಣದಲ್ಲಿ ಅಂತ್ಯಗೊಂಡಿತು.
ಬುದ್ಧಿಮಾಂದ್ಯ ಮಕ್ಕಳು: ಮೆರವಣಿಗೆ ಆರ್‌ಎಂಸಿಗೆ ಅಂತ್ಯಗೊಂಡ ಬಳಿಕ ಸಂಘದ ಪದಾಧಿಕಾರಿಗಳು ನಗರದ ಹೊರ ವಲಯದಲ್ಲಿರುವ ಕುರುಣಾಲಯ ಬುದ್ಧಿಮಾಂದ್ಯ ಮಕ್ಕಳಿಗೆ ಉಪಹಾರ ವಿತರಣೆ ಮಾಡಿ ಮಾನವೀಯತೆಯನ್ನು ಮೆರೆದರು.
ಸಂಘದ ಉಪಾದ್ಯಕ್ಷ ಉಮೇಶ್, ಕಾರ್ಯದರ್ಶಿ ರಾಜು, ಗೌರವಾದ್ಯಕ್ಷ ರಂಗಯ್ಯ, ಮುಖಂಡರಾದ ಪುಟ್ಟಸ್ವಾಮಿ, ಪಾಪಣ್ಣ, ರಮೇಶ್, ನಿಂಗರಾಜು, ಸಿದ್ದಪ್ಪಾಜಿ, ಚಂದ್ರಶೇಖರ್, ಕಾರ್ಮಿಕರ ಸಂಘದ ಯುವ ಘಟಕದ ಅಧ್ಯಕ್ಷ ಮಂಜುನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.