ಐಐಎಸ್ಸಿ ವಿದ್ಯಾರ್ಥಿ ನೇಣಿಗೆ ಶರಣು
Team Udayavani, May 2, 2019, 3:00 AM IST
ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯಲ್ಲಿ ಪಿಎಚ್ಡಿ ವ್ಯಾಸಾಂಗ ಮಾಡುತ್ತಿದ್ದ ನಾಗಪುರ ಮೂಲದ ವಿದ್ಯಾರ್ಥಿ, ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಅಮ್ಯಾ ಮನೋಜ್ ಚುಟೆ ಆತ್ಮಹತ್ಯೆ ಮಾಡಿಕೊಂಡವರು. ಎಂಟೆಕ್ ಪೂರ್ಣಗೊಳಿಸಿದ್ದ ಮನೋಜ್, ಐಐಎಸ್ಸಿಯಲ್ಲಿ ಕಂಪ್ಯೂಟರ್ ಸೈನ್ಸ್ ಹಾಗೂ ಅಟೋಮೇಶನ್ ವಿಭಾಗದಲ್ಲಿ ಪಿಎಚ್ಡಿ ಸಂಶೋಧನಾ ವಿದ್ಯಾರ್ಥಿಯಾಗಿದ್ದು, ಸಂಸ್ಥೆಯ ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದರು.
ಮಂಗಳವಾರ ರಾತ್ರಿ 12.25ರ ಸುಮಾರಿಗೆ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣುಬಿಗಿದುಕೊಂಡಿದ್ದಾರೆ. ಇದನ್ನು ಗಮನಿಸಿದ ಸ್ನೇಹಿತರು, ಹಾಸ್ಟೆಲ್ ಆಡಳಿತ ಮಂಡಳಿಗೆ ವಿಷಯ ತಿಳಿಸಿದ್ದಾರೆ.
ವಿಷಯ ತಿಳಿದ ಕೂಡಲೇ ಸದಾಶಿವನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಯಾವುದೇ ಡೆತ್ನೋಟ್ ಪತ್ತೆಯಾಗಿಲ್ಲ. ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದ ಮನೋಜ್, ಸೋಮವಾರ 8 ಗಂಟೆ ಸುಮಾರಿಗೆ ತನ್ನ ತಾಯಿಗೆ ಕರೆ ಮಾಡಿ 30 ನಿಮಿಷ ಮಾತನಾಡಿದ್ದಾರೆ. ಮತ್ತೆ ಕರೆ ಮಾಡಿಲ್ಲ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
ಮನೋಜ್, ಈ ಹಿಂದೆ ನಿಮ್ಹಾನ್ಸ್ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಸಂಸ್ಥೆಯಲ್ಲಿರುವ ಆರೋಗ್ಯ ಕೇಂದ್ರದಲ್ಲಿಯೂ ಆಗಾಗ ಚಿಕಿತ್ಸೆ ಪಡೆಯುತ್ತಿದ್ದ ಎಂದು ಅವರ ಪೋಷಕರು ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.