ಬಿಯರ್ ಬಾಟಲ್‌ನಿಂದ ಹೊಡೆದು ಕೊಲೆ
Team Udayavani, May 2, 2019, 3:00 AM IST
ಬೆಂಗಳೂರು: ಕೆಲ ದಿನಗಳ ಹಿಂದೆ ತಮ್ಮನ್ನು ಗುರಾಯಿಸಿದ್ದ ಎಂಬ ಕಾರಣಕ್ಕೆ ಗುಂಪೊಂದು, ಯುವಕನ ತಲೆಗೆ ಬಿಯರ್ ಬಾಟಲ್‌ನಿಂದ ಹೊಡೆದು ಕೊಂದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಜೆ.ಪಿ.ನಗರ ನಿವಾಸಿ ಮಂಜುನಾಥ್ (21) ಕೊಲೆಯಾದ ಯುವಕ. ಏ.25ರಂದು ರಾತ್ರಿ ವಿನಾಯಕ ಬ್ಯಾಂಕ್ ಲೇಔಟ್‌ನಲ್ಲಿ ದುಷ್ಕರ್ಮಿಗಳ ಗುಂಪು ಮಂಜುನಾಥ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದು, ಏ.27ರಂದು ಚಿಕಿತ್ಸೆ ಫಲಿಸದೆ ಮಂಜುನಾಥ್ ಮೃತಪಟ್ಟಿದ್ದಾರೆ.
ದುಷ್ಕರ್ಮಿಗಳ ತಂಡ ಮಂಜುನಾಥ್ ಮೇಲೆ ಹಲ್ಲೆ ನಡೆಸಿದ್ದನ್ನು ಆತನ ಸ್ನೇಹಿತ ಜಗನ್ನಾಥ್ ನೋಡಿ ಭಯಗೊಂಡಿದ್ದಾನೆ. ಗಲಾಟೆ ಬಗ್ಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮಾಹಿತಿ ನೀಡಿದ್ದ ಆತ ಪೊಲೀಸರು ಸ್ಥಳಕ್ಕೆ ತೆರಳುವಷ್ಟರಲ್ಲಿ ಭಯದಿಂಧ ಮನೆಗೆ ಹೋಗಿದ್ದ.
ಈ ಕುರಿತು ಜಗನ್ನಾಥ್ ನೀಡಿರುವ ದೂರು ಆಧರಿಸಿ ಮೈಕೋ ಲೇಔಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು,ಆರೋಪಿಗಳಾದ ನಂದ, ಅರ್ಜುನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.
ಮೃತ ಮಂಜುನಾಥ್ ಹಾಗೂ ಜಗನ್ನಾಥ್ ಏ.25ರಂದು ರಾತ್ರಿ 7 ಗಂಟೆ ಸುಮಾರಿಗೆ ವಿಜಯ ಬ್ಯಾಂಕ್ ಲೇಔಟ್‌ನಲ್ಲಿರುವ ಬಾರ್‌ಗೆ ಹೋಗಿ, ಮದ್ಯ ಖರೀದಿಸಿದ್ದು, ಮದ್ಯ ಸೇವಿಸಲು ಸಮೀಪದ, ನಿರ್ಮಾಣ ಹಂತದ ಕಟ್ಟಡಕ್ಕೆ ತೆರಳಿದ್ದಾರೆ. ಇದೇ ವೇಳೆ ಕಟ್ಟಡದ ಮೊದಲನೇ ಮಹಡಿಯಲ್ಲಿ ನಾಲ್ವರು ಯುವಕರು ಮದ್ಯ ಸೇವಿಸುತ್ತಿದ್ದರು.
ಮಂಜುನಾಥ್‌ನನ್ನು ನೋಡಿದ ಯುವಕರು ಮೇಲೆ ಬಾ ಎಂದು ಕರೆದಿದ್ದಾರೆ. ಅಲ್ಲಿಗೆ ಹೋದ ಬಳಿಕ, 15 ದಿನಗಳ ಹಿಂದೆ ಮದ್ಯ ಸೇವಿಸುವಾಗ ಗುರಾಯಿಸಿದ್ದು ಯಾಕೆ? ಎಂದು ಏಕಾಏಕಿ ಒಬ್ಬ ಅತನ ಮುಖಕ್ಕೆ ನಾಲ್ಕೈದು ಬಾರಿ ಹೊಡೆದಿದ್ದಾನೆ.
ಈ ವೇಳೆ ಮತ್ತೂಬ್ಬ, ಬಿಯರ್ ಬಾಟಲ್‌ನಿಂದ ಮುಖ ಹಾಗೂ ತಲೆಗೆ ಹೊಡೆದಿದ್ದಾನೆ. ಕ್ಷಮಿಸಿ ಎಂದು ಕೇಳಿಕೊಂಡರೂ ಬಿಡದೆ ಮನಬಂದಂತೆ ಥಳಿಸಿದ್ದಾರೆ. ರಕ್ಷಣೆಗೆ ಹೋದ ತನ್ನ ಮೇಲೂ ಹಲ್ಲೆ ನಡೆಸಿದರು ಎಂದು ಜಗನ್ನಾಥ್ ದೂರಿನಲ್ಲಿ ತಿಳಿಸಿರುವುದಾಗಿ ಎಂದು ಹಿರಿಯ ಅಧಿಕಾರಿ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.