ಸಿಎಂ – ಮಾಜಿ ಪಿಎಂಗೆ ಚಿಕಿತ್ಸೆ

ಮಾಧ್ಯಮದವರೊಂದಿಗೆ ಪೊಲೀಸರ ಜಟಾಪಟಿ!

Team Udayavani, May 2, 2019, 6:00 AM IST

CM-a

ಕಾಪು: ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮೂಳೂರು ಸಾಯಿರಾಧಾ ಹೆರಿಟೇಜ್‌ನಲ್ಲಿ ಆಯುರ್ವೇದ ಪಂಚಕರ್ಮ ಚಿಕಿತ್ಸೆಗೆ ದಾಖಲಾಗಿದ್ದರೆ ಆ ಕುರಿತು ವರದಿಗೆ ತೆರಳಿದ ಮಾಧ್ಯಮದವರು ಮತ್ತು ಪೊಲೀಸರ ನಡುವೆ ಬುಧವಾರ ಮತ್ತೆ ಮಾತಿನ ಚಕಮಕಿ, ತಳ್ಳಾಟ ನಡೆದಿದೆ.

ರೆಸಾರ್ಟ್‌ ಬಳಿ ರಸ್ತೆಯಲ್ಲಿ ನಿಂತು ಚಿತ್ರೀಕರಣ ನಡೆಸುತ್ತಿದ್ದಾಗ ಅವರ ಜತೆಗೆ ವಾಗ್ವಾದಕ್ಕಿಳಿದ ಪೋಲಿಸ್‌ ಅಧಿಕಾರಿ ಕೆಮರಾಮ್ಯಾನ್‌ನ್ನು ತಳ್ಳಿದ್ದು,ಮತ್ತೋರ್ವ ಅಧಿಕಾರಿ ಮಾಧ್ಯಮದವರನ್ನು ನಿಂದಿಸುತ್ತಿರುವುದು ಟ್ರೋಲ್‌ ಆಗಿದೆ.

ಚಿತ್ರೀಕರಣಕ್ಕೂ ನಿರ್ಬಂಧ
ಸಿಎಂ ಮತ್ತು ಮಾಜಿ ಪಿಎಂಗೆ ಚಿಕಿತ್ಸೆ ನೀಡುತ್ತಿರುವ ಹಿನ್ನೆಲೆಯಲ್ಲಿ ರೆಸಾರ್ಟ್‌ನೊಳಗೆ ಮಾಧ್ಯಮ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜತೆಗೆ ರೆಸಾರ್ಟ್‌ನ ಹೊರಗಿನ 100 ಮೀ. ವ್ಯಾಪ್ತಿಯೊಳಗೂ ಮಾಧ್ಯಮದವರು ವಿಡೀಯೋ ಚಿತ್ರೀಕರಣ ನಡೆಸದಂತೆ ಪೊಲೀಸರು ತಡೆಯೊಡ್ಡಿದ್ದಾರೆ.

ನಿವಾಸಿಗಳಿಗೂ ತೊಂದರೆ?
ರೆಸಾರ್ಟ್‌ ಬಳಿಯ ಮನೆ ಅಂಗಳದಲ್ಲಿ ನಿಂತು ಚಿತ್ರೀಕರಣ ನಡೆಸುತ್ತಿದ್ದ ವೇಳೆ ಅಲ್ಲಿಗೆ ಆಗಮಿಸಿದ ಪೊಲೀಸರು ಮನೆಯವರಿಗೂ ಬೆದರಿಕೆ ಹಾಕಿದ್ದಾರೆಂದು ಹೇಳಲಾಗಿದೆ.
ಕೆಟ್ಟ ಪದ ಪ್ರಯೋಗ ಆರೋಪಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಶಿರ್ವ ಎಸ್‌ಐ ಅಬ್ದುಲ್‌ ಖಾದರ್‌ ಮತ್ತುಕಾಪು ಎಸ್‌ಐ ನವೀನ್‌ ನಾಯಕ್‌ ಮತ್ತಿತರ ಅಧಿಕಾರಿಗಳು ಮಾಧ್ಯಮದವರೊಂದಿಗೆ ಉಢಾಪೆಯಾಗಿ ಮಾತನಾಡಿದ್ದು, ಚಿತ್ರೀಕರಣ ನಡೆಸದಂತೆ ತಡೆದಿದ್ದಾರೆ. ಕೆಮರಾಮ್ಯಾನ್‌ ಓರ್ವರನ್ನು ದೂಡಿದ್ದಾರೆ. ಕೆಟ್ಟ ಪದ ಪ್ರಯೋಗ ಮಾಡಿದ್ದಾರೆ ಎಂದು ವರದಿಗಾರರು ಆರೋಪಿಸಿದ್ದಾರೆ.

ಎಸ್ಪಿಗೆ ದೂರು
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಉಡುಪಿ ಎಸ್ಪಿಗೆ ದೂರು ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಎಸ್ಪಿಕುಮಾರಚಂದ್ರ ಮತ್ತು ಎಎಸ್ಪಿ ಕೃಷ್ಣಕಾಂತ್‌ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಪೊಲೀಸರು ಮತ್ತು ಮಾಧ್ಯಮದವ ರೊಂದಿಗೆ ಮಾತುಕತೆ ನಡೆಸಿದ್ದಾರೆ. ಪರಿಸ್ಥಿತಿ ತಿಳಿಗೊಳಿಸಿ ಮಾಧ್ಯಮದವ ರೊಂದಿಗೆ ಅನುಚಿತವಾಗಿ ವರ್ತನೆ ಗೈದ ಅಧಿಕಾರಿಗಳ ವಿರುದ್ಧ ಲಿಖೀತ ದೂರು ಬಂದರೆ ಪರಿಶೀಲಿಸುವು ದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.ಮುಂದುವರಿದ ಚಿಕಿತ್ಸೆರೆಸಾರ್ಟ್‌ ಹೊರಗೆ ರವಿವಾರ ದಿಂದಲೂ ಹಲವು ರೀತಿಯ ಗೊಂದಲಗಳಿದ್ದರೂ ಕುಮಾರಸ್ವಾಮಿ ಮತ್ತು ದೇವೇಗೌಡ ಅವರು ತಮ್ಮಷ್ಟಕ್ಕೆ ಆಯುರ್ವೇದ ಪಂಚಕರ್ಮ ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ.

ಬ್ರಹ್ಮಕಲಶದ ಭೋಜನ
ಸವಿದ ದೇವೇಗೌಡ
ದೇವೇಗೌಡ ಅವರಿಗೆ ಮಂಗಳ ವಾರ ಮಧ್ಯಾಹ್ನ ಜಲಂಚಾರು ಶ್ರೀ ಮಹಾಲಿಂಗೇಶ್ವರ – ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶದ ಊಟ ಕಳುಹಿಸಲಾಗಿತ್ತು. ಭರ್ಜರಿ ಭೋಜನ ಸವಿದ ಅವರು ದೇಗುಲದ ಕಥೆಯನ್ನು ಕೇಳಿದ್ದು, ದೇಗುಲಕ್ಕೆ ಭೇಟಿ ನೀಡುವ ಭರವಸೆಯನ್ನೂ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.