ನಾಟಕ ರಂಗದ ದೈತ್ಯ ಪ್ರತಿಭೆ ಮಾಸ್ಟರ್‌ ಹಿರಣ್ಣಯ್ಯ ಇನ್ನಿಲ್ಲ

ಮರೆಯಾದ ಕಲಾ ಗಜಸಿಂಹ, ನಟ ರತ್ನಾಕರ

Team Udayavani, May 2, 2019, 10:43 AM IST

1-aa

ಬೆಂಗಳೂರು : ಹಿರಿಯ ನಟ, ನಾಟಕ ರಂಗದ ದೈತ್ಯ ಪ್ರತಿಭೆ ಕನ್ನಡ ನಾಡು ಕಂಡ ಪ್ರಸಿದ್ಧ ರಂಗಕರ್ಮಿ ಮಾಸ್ಟರ್‌ ಹಿರಣ್ಣಯ್ಯ ಅವರು ಗುರುವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಲಿವರ್‌ ಸಮಸ್ಯೆಯಿಂದ ಬಳಲುತ್ತಿದ್ದ ಹಿರಣ್ಣಯ್ಯ ಅವರು ಬೆಂಗಳೂರಿನ ಬಿಜಿಎಸ್‌ ಗ್ಲೋಬಲ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪತ್ನಿ ಮತ್ತು ಐವರು ಮಕ್ಕಳನ್ನು ಮಾಸ್ಟರ್‌ ಹಿರಣ್ಣಯ್ಯ ಅವರು ಅಗಲಿದ್ದಾರೆ.

ಬನಶಂಕರಿಯಲ್ಲಿರುವ ನಿವಾಸಕ್ಕೆ ಅವರ ಪಾರ್ಥೀವ ಶರೀರವನ್ನು ತರಲಾಗುತ್ತಿದೆ.

1934 ಫೆಬ್ರವರಿ 15 ರಂದು ಮೈಸೂರಿನಲ್ಲಿ ಕಲ್ಚರ್‌ಡ್‌ ಕಾಮೆಡಿನ್‌ ಎನಿಸಿಕೊಂಡಿದ್ದ ಹಿರಣ್ಣಯ್ಯ ಮತ್ತು ಶಾರಾದಮ್ಮ ದಂಪತಿಗಳ ಮಗನಾಗಿ ಜನಿಸಿದ ಮಾಸ್ಟರ್‌ ಹಿರಣ್ಣಯ್ಯ ಅವರ ಮೂಲಕ ಹೆಸರು ನರಸಿಂಹಮೂರ್ತಿ. ತಂದೆಯಿಂದ ರಕ್ತಗತವಾಗಿ ಕಲೆ ಮೈಗೂಡಿಸಿಕೊಂಡ ಮಾಸ್ಟರ್‌ ಹಿರಣ್ಣಯ್ಯ ತನ್ನ ಕಲಾ ಪ್ರತಿಭೆಯನ್ನು ನಾಡಿನಾದ್ಯಂತ ಬೆಳಗಿ ಪ್ರಖ್ಯಾತರಾದವರು. ಹಲವು ಕನ್ನಡ ಚಿತ್ರಗಳಲ್ಲಿಯೂ ಮನೋಜ್ಞ ಅಭಿನಯವನ್ನುನೀಡಿದ್ದಾರೆ.

ಲಂಚಾವತಾರ, ಮಕ್ಮಲ್‌ ಟೋಪಿ, ಸದಾರಮೆ ಮೊದಲಾದ ನಾಟಕಗಳು ಕರ್ನಾಟಕದಲ್ಲಿ ಮನೆಮಾತಾಗಿದೆ.

ತಂದೆಯವರ ಹಿರಣ್ಣಯ್ಯ ಮಿತ್ರಮಂಡಳಿಯನ್ನು ಮುಂದುವರಿಸಿ ಸಾವಿರಾರು ಕಡೆಗಳಲ್ಲಿ ಪ್ರದರ್ಶನ ನೀಡಿದ ಹಿರಿಮೆ ಮಾಸ್ಟರ್‌ ಹಿರಣ್ಣಯ್ಯ ಅವರದ್ದು.

ಸಮಾಜದ ಅಂಕು ಡೊಂಕುಗಳನ್ನು ಮುಲಾಜಿಲ್ಲದೆ ಟೀಕಿಸುತ್ತಿದ್ದ ಹಿರಣ್ಣಯ್ಯ ಅವರು ಯಾವ ರಾಜಕಾರಣಿಯನ್ನು ಟೀಕಿಸಲು ಹಿಂಜರಿದವರಲ್ಲ.

ರಾಜಕಾರಣಿ ಗಳ ಬಗ್ಗೆ ವೇದಿಕೆಯಲ್ಲಿ ಟೀಕಿಸಿ ಕೇಸುಗಳನ್ನುಮೈಮೇಲೆ ಎಳೆದುಕೊಂಡಿದ್ದ ಗಟ್ಟಿಗ ಹಿರಣ್ಣಯ್ಯ ಸುಪ್ರೀಂಕೋರ್ಟ್‌ ಮೆಟ್ಟಿಲನ್ನೂ ಏರಿ ನ್ಯಾಯ ಪಡೆದವರು.

ಗುಬ್ಬಿ ವೀರಣ್ಣ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ವಿಶ್ವಾದ್ಯಂತ ಸಾವಿರಾರು ಸನ್ಮಾನಗಳನ್ನು ಹಿರಣ್ಣಯ್ಯ ಅವರು ಪಡೆದಿದ್ದಾರೆ.

ನಡುಬೀದಿ ನಾರಾಯಣ, ಪಶ್ಚಾತಾಪ, ಭ್ರಷ್ಟಾಚಾರ, ಚಪಲಾವತಾರ, ಡಬ್ಬಲ್‌ ತಾಳಿ, ಲಾಟರಿ ಸರ್ಕಾರ, ಸನ್ಯಾಸಿ ಸಂಸಾರ , ಎಚ್ಚಮ ನಾಯಕ ಮೊದಲಾದವು ಜನಮನಗೆದ್ದು ಇಂದಿಗೂ ನೆನಪಿನಲ್ಲುಳಿದ ನಾಟಕಗಳು.

ಟಾಪ್ ನ್ಯೂಸ್

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ

Naxal-Vikram-Sister

Naxal Vikram Encounter: ಟಿವಿ ನೋಡಿ ವಿಷಯ ತಿಳಿಯಿತು, ನಮಗೆ ಯಾರೂ ಹೇಳಿಲ್ಲ: ಸಹೋದರಿ

Himachal-Bhavan

Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ

Russia-Putin

‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುತಿನ್‌ ಅಣ್ವಸ್ತ್ರ ದಾಳಿ ಎಚ್ಚರಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Peetabail-Naxal-encounter-Vikram

Encounter: ನಕ್ಸಲ್‌ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್‌ ಮಾರುವೇಷ’!

Naxaliam-End

Naxal Activity: ರಾಜ್ಯದಲ್ಲಿ ನಕ್ಸಲ್‌ ಚಳವಳಿ ಅಂತ್ಯಗೊಂಡೀತೇ?

Rajana–Chelva

Debt Reduction: ನಬಾರ್ಡ್‌ ಸಾಲ ಕಡಿತ: ಪ್ರಧಾನಿ ಮೋದಿ, ಶಾ ಭೇಟಿಗೆ ರಾಜ್ಯ ಸರಕಾರದ ನಿರ್ಧಾರ

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

5

Mangaluru: ಪ್ಲಾಸ್ಟಿಕ್‌ ಉತ್ಪಾದನ ಘಟಕ, ಮಾರಾಟದ ಮೇಲೆ ನಿಗಾ

4

Mangaluru: ಕಾರಿಗೆ ಬೆಂಕಿ; ನಿರ್ವಹಣ ನಿರ್ಲಕ್ಷ್ಯ ಕಾರಣ?

3

Ullal: ಬಡವರ ಬಿಪಿಎಲ್‌ ಕಿತ್ತುಕೊಳ್ಳಬೇಡಿ

2

Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.

1

Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.