ಹಳ್ಳಿಗಳಿಗೆ ಧರ್ಮಸ್ಥಳ ಯೋಜನೆ ನೀರು
Team Udayavani, May 2, 2019, 2:43 PM IST
ಚಿಕ್ಕೋಡಿ: ಬರಪೀಡಿತ ಪ್ರದೇಶಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಮುಂದೆ ಬಂದಿದೆ.
ತಾಲೂಕಿನ ಕರೋಶಿ ಗ್ರಾಮದಿಂದ ಕುಡಿಯುವ ನೀರಿನ ಯೋಜನೆಗೆ ಸಂಸ್ಥೆಯ ಜಿಲ್ಲಾ ನಿರ್ದೇಶಕ ಶೀನಪ್ಪ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮೂರು ದಶಕಗಳಿಂದ ರಾಜ್ಯದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ಹತ್ತಾರು ಸಮಾಜಮುಖೀ ಕಾರ್ಯಕ್ರಮಗಳೊಂದಿಗೆ ಜನಪ್ರಿಯವಾಗಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯಶಸ್ವಿಯಾಗಿ ಅನುಷ್ಠಾನಿಸುತ್ತ ಬಂದಿದೆ. ಇದೀಗ ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು ಉಚಿತವಾಗಿ ವಿತರಿಸಲು ಸಂಸ್ಥೆ ಮುಂದೆ ಬಂದಿದೆ ಎಂದರು.
ರಾಜ್ಯಾದ್ಯಂತ ಕಾರ್ಯಕ್ರಮ: ತಾಲೂಕು ಯೋಜನಾಧಿಕಾರಿ ಗಣಪತಿ ಮಾಳಂಜಿ ಮಾತನಾಡಿ, ಬರಪೀಡಿತ ಗ್ರಾಮಗಳಿಗೆ ಕುಡಿಯುವ ನೀರೊದಗಿಸುವ ಕಾರ್ಯಕ್ರಮ ರಾಜ್ಯಾದ್ಯಂತ ಮಾಡುತ್ತಿದ್ದು, ಈ ಕಾರ್ಯಕ್ರಮ ತಾಲೂಕಿನ ಕರೋಶಿ, ಬಂಬಲವಾಡ, ಕಮತೆನಟ್ಟಿ, ತೋರಣಹಳ್ಳಿ, ಬಿದರಳ್ಳಿ, ಹತ್ತರವಾಟ, ಮಾಗನೂರು, ಮುಗಳಿ, ಜೈನಾಪುರ, ಕುಂಗಟೋಳಿ, ಬೆಳಕೂಡ ಆಯ್ದ ಬರ ಪೀಡಿತ ಪ್ರದೇಶಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದಿನಕ್ಕೆ 8ರಂತೆ ಒಂದು ತಿಂಗಳ ಕಾಲ ಒಟ್ಟು 240 ಟ್ಯಾಂಕರ್ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಜಿಪಂ ಸದಸ್ಯೆ ಲಕ್ಷ್ಮೀ ಕುರಬರ, ತಾಪಂ ಸದಸ್ಯೆ ನಸೀಮಾ ಭಾನು, ಗ್ರಾಪಂ ಉಪಾಧ್ಯಕ್ಷೆ ಸಾವಿತ್ರಿ ಜೇಧೆ, ವಿಜಯ ಕೊಟೆವಾಲೆ, ಮೇಲ್ವಿಚಾರಕರಾದ ನವೀನ್ ನಾಯ್ಕ, ಕುಮಾರ ಬಣಕಾರ ಇದ್ದರು.
ಪ್ರಸಕ್ತ ವರ್ಷ ನದಿಗಳು ಬರಿದಾಗಿದ್ದು, ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ನೀರು ಪೂರೈಸುವ ಬಗ್ಗೆ ಗ್ರಾಮದ ಜನರು ಹಾಗೂ ಜನಪ್ರತಿನಿಧಿಗಳು ಬೇಡಿಕೆ ನೀಡಿದ್ದು, ಪರಿಶೀಲಿಸಿ ಕ್ಷೇತ್ರದ ಪೂಜ್ಯರಿಗೆ ಮನವಿ ಮಾಡಿದಾಗ ಒಂದು ತಿಂಗಳ ಕಾಲ ನೀರು ಸರಬರಾಜು ಮಾಡಲು ಒಟ್ಟು ರೂ.1,44,000 ಮಂಜೂರು ಮಾಡಿದ್ದಾರೆ.
•ಶೀನಪ್ಪ, ಸಂಸ್ಥೆಯ ಜಿಲ್ಲಾ ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.