ಎರಡನೇ ಹಂತದ ನಗರ ಸ್ಥಳೀಯ ಸಂಸ್ಥೆಗಳಿಗೆ ಮೇ 29ರಂದು ಚುನಾವಣೆ
ದ.ಕ. ಜಿಲ್ಲೆಯಲ್ಲಿ ಮೂಲ್ಕಿ, ಮೂಡಬಿದಿರೆ ಹಾಗೂ ಸುಳ್ಯ ನಗರ ಸಂಸ್ಥೆಗಳಿಗೆ ಚುನಾವಣೆ
Team Udayavani, May 2, 2019, 2:58 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used
ಬೆಂಗಳೂರು : 2019ರ ಮಾರ್ಚ್ ನಿಂದ ಜುಲೈ ತಿಂಗಳಲ್ಲಿ ಅವಧಿ ಮುಕ್ತಾಯ ಹೊಂದಲಿರುವ ಒಟ್ಟು 103 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಒಟ್ಟು 63 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಇದೇ ಮೇ 29ರಂದು ಚುನಾವಣೆ ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಮತದಾನ ನಡೆಯಲಿದೆ.
ದಕ್ಷಿಣಕನ್ನಡ ಜಿಲ್ಲೆಯ ಮೂಲ್ಕಿ ಪಟ್ಟಣ ಪಂಚಾಯತ್ 18 ವಾರ್ಡ್‌ಗಳಿಗೆ, ಮೂಡಬಿದಿರೆ ಪುರಸಭೆಯ 23 ವಾರ್ಡ್‌ಗಳಿಗೆ ಮತ್ತು ಸುಳ್ಯ ಪಟ್ಟಣ ಪಂಚಾಯತ್ ನ 20 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ.
ಮೊದಲ ಹಂತದಲ್ಲಿ 109 ನಗರ ಸ್ಥಳೀಯ ಸಂಸ್ಥೆಗಳಿಗೆ ಕಳೆದ ವರ್ಷ ಆಗಸ್ಟ್ ನಲ್ಲಿ ಚುನಾವಣೆ ನಡೆದಿತ್ತು. ಉಳಿದ 103 ನಗರ ಸಂಸ್ಥೆಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ ಕ್ಷೇತ್ರ ವಿಂಗಡಣೆ ಹಾಗೂ ವಾರ್ಡ್‌ವಾರು ಮೀಸಲಾತಿ ಪ್ರಶ್ನಿಸಿ 39 ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಕರಣಗಳು ಹೈಕೋರ್ಟಿನಲ್ಲಿ ವಿಚಾರಣಾ ಹಂತದಲ್ಲಿರುವುದರಿಂದ ಆ 39 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುತ್ತಿಲ್ಲ. ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿರುವುದರಿಂದ ಅಲ್ಲಿ ಪಟ್ಟಣ ಪಂಚಾಯತ್ ಚುನಾವಣೆಯನ್ನು ನಡೆಸುತ್ತಿಲ್ಲ.
ಚುನಾವಣೆ ನಡೆಯಲಿರುವ 63 ನಗರ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ. ಮೇ 31ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. 63 ನಗರ ಸ್ಥಳೀಯ ಸಂಸ್ಥೆಗಳ1361 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ.
ಮೇ 9ರಂದು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ನಾಮಪತ್ರ ಸಲ್ಲಿಸಲು ಮೇ 16 ಅಂತಿಮ ದಿನವಾಗಿರುತ್ತದೆ. ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ20 ಅಂತಿಮ ದಿನವಾಗಿರುತ್ತದೆ. ಮೇ 29ರಂದು ಮತದಾನ ನಡೆಯಲಿದ್ದು ಮೇ 31ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ನೋಟಾ ಮತದಾನಕ್ಕೂ ಅವಕಾಶವಿರುತ್ತದೆ.
ಈ ಹಂತದಲ್ಲಿ 22 ಜಿಲ್ಲೆಗಳ 08 ನಗರಸಭೆಗಳ 248 ವಾರ್ಡ್‌ಗಳು, 33 ಪುರಸಭೆಗಳ 783 ವಾರ್ಡ್‌ಗಳು ಹಾಗೂ 22 ಪಟ್ಟಣಪಂಚಾಯತ್ ಗಳ 330 ವಾರ್ಡ್‌ಗಳು ಸೇರಿದಂತೆ ಒಟ್ಟಾರೆಯಾಗಿ 1361 ವಾರ್ಡ್‌ಗಳಲ್ಲಿ ಚುನಾವಣೆ ನಡೆಯಲಿದೆ. ಒಟ್ಟು 14,74,086 ಮತದಾರರು ಈ ಚುನಾವಣೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ.
ಉಡುಪಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿನ ಎಲ್ಲಾ ನಗರ ಸಂಸ್ಥೆಗಳಿಗೆ ಆಗಸ್ಟ್ 2018ರಲ್ಲಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಲಾಗಿತ್ತು. ರಾಮನಗರ, ಕೊಡಗು, ಬೆಳಗಾವಿಮ ಕಲಬುರಗಿ ಜಿಲ್ಲೆಗಳಲ್ಲಿ ಚುನಾವಣೆ ನಡೆಸಲು ಬಾಕಿ ಇರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಕರಣಗಳು ಹೈಕೋರ್ಟ್ ನಲ್ಲಿ ವಿಚಾರಣೆಗೆ ಬಾಕಿ ಇರುವುದರಿಂದ ಇಲ್ಲಿ ಈ ಹಂತದಲ್ಲಿ ಚುನಾವಣೆ ನಡೆಯುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.