ಕಾರಟಗಿ: ಮರಗಳ ಮಾರಣಹೋಮ
Team Udayavani, May 2, 2019, 4:39 PM IST
ಕಾರಟಗಿ: ಪಟ್ಟಣದ ಸರಕಾರಿ ಪೌಢಶಾಲೆಯ ಆವರಣದಲ್ಲಿ ನೂತನ ಕಟ್ಟಡ ನಿರ್ಮಾಣದ ನೆಪದಲ್ಲಿ ಆವರಣದಲ್ಲಿ ನೆರಳು ನೀಡುತ್ತಿದ್ದ ಮರಗಳನ್ನು ಕಡಿಯಲಾಗಿದೆ. ಮರಗಳ ಕಡಿಯುವ ಅವಶ್ಯಕತೆ ಇರಲಿಲ್ಲ. ಒಂದು ಮರ ಕಡಿದರೆ ಸಾಕಾಗಿತ್ತು ಅನಾವಶ್ಯವಾಗಿ ಮೂರ್‍ನಾಲ್ಕು ಮರಗಳನ್ನು ಕಡಿಯಲಾಗಿದೆ ಎಂದು ಪಟ್ಟಣದ ಜನತೆ ದೂರಿದ್ದಾರೆ.
ಆವರಣದಲ್ಲಿ ವಿದ್ಯಾರ್ಥಿಗಳು ಕಷ್ಟಪಟ್ಟು ನೀರು ಹೊತ್ತು ಹಾಕಿ ಬೆಳೆಸಿದ ಮರಗಳನ್ನು ಏಕಾಏಕಿ ಕಡಿಯುವುದು ತಪ್ಪು. ಶಾಲಾ ಆವರಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಮಂಜೂರಾದ ನೂತನ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಮುಖ್ಯೋಪಾಧ್ಯಾಯೆ ಆದೇಶಿಸಿದ್ದಾರೆ. ಆ ಕಾರಣಕ್ಕೆ ಮರಗಳನ್ನು ಕಡಿಯಲಾಗಿದೆ ಎಂದು ಮರಕಡಿಯುವವರು ತಿಳಿಸಿದರು. ಅಲ್ಲದೇ ಅರಣ್ಯಾಧಿಕಾರಿಗಳ ಪರವಾನಗಿ ಕೂಡ ಪಡೆಯದೇ ಮರಗಳನ್ನು ಕಡಿದಿರುವುದು ಸಂಶಯ ಮೂಡಿಸಿದೆ. ಕಟ್ಟಡ ಕಟ್ಟಲು ಮರಗಳನ್ನು ಕಡಿಯುವ ಪ್ರಮಯವೇ ಇಲ್ಲ. ಅಲ್ಲದೇ ಕಡಿದ ಮರಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದಾರೆಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಅರಣ್ಯ ಇಲಾಖೆ ಮರಗಿಡಗಳನ್ನು ಬೆಳೆಸಿ ಎಂದು ಸಸಿಗಳನ್ನು ಉಚಿತವಾಗಿ ನೀಡಿ ಸಾರ್ವಜನಿಕರಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಆದರೆ ಶಾಲಾ ಆವರಣದಲ್ಲಿ ಬೆಳೆದು ನಿಂತ ಮರಗಳನ್ನು ಕಡಿದರೂ ಅರಣ್ಯಾಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸ ಎಂದು ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಬಂಧಿಸಿದ ಇಲಾಖೆ ಈ ಕೂಡಲೇ ಸ್ಥಳೀಯ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿನ ಮರಗಳನ್ನು ಕಡಿದಿರುವ ಬಗ್ಗೆ ತನಿಖೆ ನಡೆಸಿ, ಅರಣ್ಯ ಇಲಾಖೆಯ ಕಾಯ್ದೆಯನ್ವಯ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಸರಕಾರಿ ಪ್ರೌಢಶಾಲೆಯ ಆವರಣದಲ್ಲಿನ ಮರ ಕಡಿದಿರುವ ಬಗ್ಗೆ ಹಾಗೂ ಅವುಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅಲ್ಲದೇ ಶಾಲಾ ಮುಖ್ಯೋಪಾಧ್ಯಾಯರು ಕೂಡ ಈ ಬಗ್ಗೆ ನನಗೆ ಏನೂ ಹೇಳಿಲ್ಲ.
•ಬಸವರಾಜ ಶೆಟ್ಟರ, ಎಸ್‌ಡಿಎಂಸಿ ಉಪಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.