‘ಸಚಿವರೆಲ್ಲ ಶೀಘ್ರ ಮಾಜಿ ಆಗ್ತಾರೆ’
Team Udayavani, May 3, 2019, 6:00 AM IST
ಬೆಳಗಾವಿ/ಗೋಕಾಕ: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಹಾಲಿ ಸಚಿವರಾಗಿ ತಿರುಗಾಡುವವರು ಮಾಜಿಗಳಾಗಲಿದ್ದಾರೆ. ಸರ್ಕಾರದಲ್ಲಿ ಬಹಳ ಬದಲಾವಣೆ ಆಗಲಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ದೋಸ್ತಿ ಸರ್ಕಾರ ಪತನದ ಭವಿಷ್ಯ ನುಡಿದರು.
ತಮ್ಮ ಪುತ್ರ ಅಮರನಾಥ ಜಾರಕಿಹೊಳಿಯವರು ಕೆಎಂಎಫ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಗುರುವಾರ ಗೋಕಾಕದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿ, ಕೆಂಪು ಲೈಟ್ ಹಾಕಿಕೊಂಡು ಓಡಾಡುವರು ಮಾಜಿ ಆಗುತ್ತಾರೆ. ಈಗ ಕೆಂಪು ಲೈಟ್ ಹಾಕಿಕೊಂಡು ಓಡಾಡುವವರನ್ನು ನೋಡಿ ಹೆದರಬೇಡಿ. ದೊಡ್ಡ ಪ್ರಮಾಣದಲ್ಲಿ ನಮಗೆ ಅಧಿಕಾರ ಬರುತ್ತದೆ. ವಿಶ್ವಾಸ ದ್ರೋಹ ಮಾಡುವ ಹಾಗೂ ಬೆನ್ನಿಗೆ ಚೂರಿ ಹಾಕುವ ಮಂದಿಯನ್ನು ನಂಬಬೇಡಿ. ಅಧಿಕಾರ ಬರಲಿ, ಬಿಡಲಿ ನಮ್ಮನ್ನು ನಂಬಿ ಎಂದು ಹೇಳಿದರು.
ಮಗನನ್ನು ನಿರ್ದೇಶಕರಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ ಹೇಳಿದ ರಮೇಶ, ಕೆಎಂಎಫ್‌ನ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸೇರಿ ಎಲ್ಲರ ಆಶೀರ್ವಾದ ಇದೆ. ಅಥಣಿ ಶಾಸಕ ಮಹೇಶ ಕುಮಠಳ್ಳಿ ಕಾರ್ಯಕ್ರಮಕ್ಕೆ ಬಂದಿದ್ದಾನೆ. ಅವನು ನಮ್ಮವನೇ. ಕೆಎಂಎಫ್ ಚುನಾವಣೆ ಅಂದರೆ ಎಂಎಲ್ಎ ಚುನಾವಣೆ ಇದ್ದ ಹಾಗೆ. ಬೆಂಗಳೂರು ಲೆವೆಲ್ನಲ್ಲಿ ಮಗನ ತರುವ ಆಸೆ ಇದೆ. ಅದಕ್ಕೆ ನೀವು ಸಹಕಾರ ಕೊಡಬೇಕು. ನಂತರ ರಾಜಕೀಯದಲ್ಲಿ ಧ್ರುವೀಕರಣ ಆಗಲಿದೆ ಎಂದರು.
ಶಾಸಕ ರಮೇಶ ಅವರೊಂದಿಗೆ ಮಾತುಕತೆ ಮುಗಿಸಿ ಹೊರ ಬಂದ ಶಾಸಕ ಕುಮಠಳ್ಳಿ, ಮಾಧ್ಯಮದವರಿಗೆ ರಾಜಕೀಯ ವಿಷಯ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಅಥಣಿ ತಾಲೂಕಿನಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಈ ಕುರಿತು ಶಾಸಕ ರಮೇಶ ಅವರೊಂದಿಗೆ ಚರ್ಚಿಸಿದ್ದೇನೆ. ಮಹಾರಾಷ್ಟ್ರ ಮುಖ್ಯಮಂತ್ರಿ ಅವರೊಂದಿಗೆ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದಾರೆ ಎಂದರು.
ಶಾಸಕರೊಂದಿಗೆ ಗೌಪ್ಯ ಮಾತುಕತೆ
ಪುತ್ರ ಅಮರನಾಥ ಅವರ ಸನ್ಮಾನ ಕಾರ್ಯಕ್ರಮಕ್ಕೆ ಬೆಂಗಳೂರಿನಿಂದ ಆಗಮಿಸಿದ ಶಾಸಕ ರಮೇಶ ಜಾರಕಿಹೊಳಿ, ಶಾಸಕ ಮಹೇಶ ಕುಮಠಳ್ಳಿ, ವಿಧಾನ ಪರಿಷತ್ ಸದಸ್ಯ ವಿವೇಕರಾವ್ ಪಾಟೀಲರೊಂದಿಗೆ ವೇದಿಕೆ ಹಂಚಿಕೊಂಡರು. ಗೋಕಾಕ ಹಾಗೂ ಅರಭಾವಿ ಕ್ಷೇತ್ರದ ಮುಖಂಡರು, ಬೆಂಬಲಿಗರು, ಗೋಕಾಕ ನಗರಸಭೆಯ ಹಾಲಿ, ಮಾಜಿ ಸದಸ್ಯರು ಭಾಗಿಯಾಗಿದ್ದರು. ನಂತರ ರಮೇಶ ಅವರು ತಮ್ಮ ನಿವಾಸದಲ್ಲಿ ಗೌಪ್ಯವಾಗಿ ಕುಮಠಳ್ಳಿ, ವಿವೇಕರಾವ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು. ಅರ್ಧ ಗಂಟೆಗೂ ಹೆಚ್ಚು ಹೊತ್ತು ಸಭೆ ನಡೆಸಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.