ಆಮ್ನಿ ಪಲ್ಟಿ: ತಾಯಿ, ಮಗ ಸಾವು
Team Udayavani, May 3, 2019, 10:34 AM IST
ಕುಂಬಳೆ: ಪುತ್ತಿಗೆ ಬಳಿಯ ಬಾಡೂರು ಓಣಿಬಾಗಿಲು ಎಂಬಲ್ಲಿ ಆಮ್ನಿ ಕಾರು ರಸ್ತೆ ತಿರುವಿನಲ್ಲಿ ಪಕ್ಕದ ಹೊಂಡಕ್ಕೆ ಬಿದ್ದು ತಾಯಿ ಮತ್ತು ಮಗ ಸ್ಥಳದಲ್ಲೇ ಸಾವಿಗೀಡಾಗಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಮೂಲತಃ ಅಡ್ಕಸ್ಥಳದವರಾಗಿದ್ದು, ಪ್ರಸ್ತುತ ಪೆರ್ಲದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹ ಮ್ಮದ್ ಅವರ ಪುತ್ರ ಅಬ್ದುಲ್ ಶರೀಫ್ (39) ಹಾಗೂ ಇವರ ತಾಯಿ ಬಿ ಫಾತಿಮಾ(60) ಮೃತಪಟ್ಟವರು. ಅಬ್ದುಲ್ ಶರೀಫ್ ಅವರ ಪತ್ನಿ ಖೈರುನ್ನೀಸಾ (28) ಪುತ್ರಿಯರಾದ ಶಮ್ನಾ (10) ಮತ್ತು ಶಹರ್ ಬಾನ್(6) ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಬ್ದುಲ್ ಶರೀಫ್ ಅವರು ಮುಂಬಯಿಯಲ್ಲಿ ಹೊಟೇಲ್ನಲ್ಲಿ ದುಡಿಯುತ್ತಿದ್ದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದು, ಶುಕ್ರವಾರ ಮತ್ತೆ ಮುಂಬಯಿಗೆ ತೆರಳುವವರಿದ್ದರು.
ಮುಗು ರೋಡ್ನ ಉರ್ಮಿಯಲ್ಲಿರುವ ಪತ್ನಿ ಸಹೋದರ ರಫೀಕ್ ಅವರ ಮಗುವನ್ನು ತೊಟ್ಟಿಲಿಗೆ ಹಾಕುವ ಸಮಾರಂಭದಲ್ಲಿ ಭಾಗವಹಿಸಲು ರುತ್ತಿದ್ದಾಗ ದುರಂತ ಸಂಭವಿಸಿದೆ. ಕಾಸರಗೋಡಿನಿಂದ ಅಗ್ನಿಶಾಮಕ ಸಿಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿದ್ದು, ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.