ವೀರಶೈವ ಮಹಾಸಭಾ ಕಾಂಗ್ರೆಸ್‌ ಆಸ್ತಿಯಲ್ಲ

Team Udayavani, May 3, 2019, 10:33 AM IST

Udayavani Kannada Newspaper

ಧಾರವಾಡ: ಅಖೀಲ ಭಾರತ ವೀರಶೈವ ಮಹಾಸಭಾ ಕಾಂಗ್ರೆಸ್‌ ಪಕ್ಷದ ಆಸ್ತಿಯಲ್ಲ. ಅಥವಾ ಪಕ್ಷದ ಅಂಗ ಸಂಸ್ಥೆಯಲ್ಲ ಎಂದು ಸಮಾಜದ ಮುಖಂಡ ಟಿ.ಎಸ್‌.ಪಾಟೀಲ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌-ಜೆಡಿಎಸ್‌ ಮುಖಂಡರು ಮಹಾಸಭಾ ದುರ್ಬಳಕೆ ಮಾಡಿಕೊಳ್ಳುವುದು ಖಂಡನೀಯ. ವೀರಶೈವ ಮಹಾಸಭಾ ಪ್ರತ್ಯೇಕ, ಸ್ವತಂತ್ರ, ಸಾಮಾಜಿಕ ಸಂಸ್ಥೆ ಆಗಿದ್ದು, ಯಾವುದೇ ರಾಜಕೀಯ ಪಕ್ಷಕ್ಕೆ ಸಂಬಂಧಿಸಿದ್ದಲ್ಲ. ಮುಖ್ಯವಾಗಿ ಕಾಂಗ್ರೆಸ್‌ ಪಕ್ಷದ ಆಸ್ತಿಯಂತೂ ಮೊದಲೇ ಅಲ್ಲ ಎಂದರು.

ಕಾಂಗ್ರೆಸ್‌-ಜೆಡಿಎಸ್‌ನ ಕೆಲ ಮುಖಂಡರು ಶೃತಿ ಬೆಳ್ಳಕ್ಕಿ ಪ್ರಕರಣದಲ್ಲಿ ಅಖೀಲ ಭಾರತ ವೀರಶೈವ ಮಹಾಸಭಾ ದುರ್ಬಳಕೆ ಮಾಡಿಕೊಂಡಿದ್ದಾರೆ. ಪ್ರತಿಭಟಿಸುವ ಬಗ್ಗೆ ಸಭೆಯಲ್ಲಿ ಠರಾವು ಆಗಿಲ್ಲ. ಇದಕ್ಕೂ ಸಮಾಜ ಬೆಂಬಲ ಇಲ್ಲ. ಧರ್ಮ ಒಡೆಕರೇ ಪ್ರತಿಭಟಿಸಿದ್ದಾರೆ. ಶೃತಿ ಅವರು ತಪ್ಪು ಹೇಳಿಕೆ ನೀಡಿದ್ದರೆ, ಲಿಂಗಾಯತ ಸಮಾಜದ ಹಿರಿಯರೇ ಆಕೆಯನ್ನು ಭೇಟಿಯಾಗಿ ಅಥವಾ ಮಹಾಸಭೆಗೆ ಕರೆಯಿಸಿ ತಿಳಿವಳಿಕೆ ಹೇಳಬಹುದಿತ್ತು. ಆದರೆ, ಅದು ಬಿಟ್ಟು ಚುನಾವಣೆ ಮುಗಿದ ನಂತರ ದಶರಥ ದೇಸಾಯಿ ಅವರಿಂದ ದೂರು ಕೊಡಿಸಿ, ಆಕೆಯನ್ನು ಬಂಧನವಾಗುವಂತೆ ಕುತಂತ್ರ ಮಾಡಿದ್ದಾರೆಂದು ದೂರಿದರು.

ವಿವಾಹಿತ ಮಹಿಳೆ ಬಂಧಿಸುವಂತೆ ಮಾಡಿದ ಕ್ರಮ ಲಿಂಗಾಯತ ಸಮಾಜ ಒಪ್ಪುವುದಿಲ್ಲ. ವಿನಯ ಕುಲಕರ್ಣಿ, ಎಂ.ಬಿ. ಪಾಟೀಲ ಆಕೆಯ ಬಂಧನಕ್ಕೆ ಜಾಲ ಹೆಣೆದಿದ್ದು, ಇದಕ್ಕೂ ಗುರುರಾಜ ಹುಣಸಿಮರದ ಪ್ರತಿಭಟನೆಯ ಕುಮ್ಮಕ್ಕು ನೀಡಿದ್ದಾರೆ. ಕಾಂಗ್ರೆಸ್‌ ನಾಯಕರು ಶೃತಿ ಭವಿಷ್ಯದ ಜತೆ ಚೆಲ್ಲಾಟ ಆಡುತ್ತಿದ್ದಾರೆ. ಶೃತಿ ಜೀವ ಬೆದರಿಕೆ ಬಗ್ಗೆ ಡಿಸಿ ಅವರಿಗೆ ಮನವಿ ನೀಡಿದರೂ ಸ್ಪಂದಿಸಿಲ್ಲ. ಸ್ವತಃ ವಿನಯ ಕುಲಕರ್ಣಿ ಅವರೇ ಶೃತಿಗೆ ಬುದ್ಧಿ ಹೇಳಿ, ಅವಳ ಬಂಧನ ತಡೆಯಬಹುದಿತ್ತು. ಅದು ಬಿಟ್ಟು ಕಾಂಗ್ರೆಸ್‌ ನಾಯಕರನ್ನು ಮೆಚ್ಚಿಸಲು ಬಿಜೆಪಿ ನಾಯಕರ ವಿರುದ್ಧ ಪ್ರತಿಭಟಿಸುವುದು ನಾಚಿಗೇಡಿನ ಸಂಗತಿ. ಇದು ಸಮಾಜದ ಹಾದಿ ತಪ್ಪಿಸುವ ಕೆಲಸ ಎಂದರು.

ವೀರಶೈವ ಮಹಾಸಭಾ ಜಿಲ್ಲಾ ಉಪಾಧ್ಯಕ್ಷ ವಿ.ಎಸ್‌.ಸವಡಿ, ವೀರಶೈವ ಸಮಾಜಕ್ಕೂ ಕುಲಕರ್ಣಿ, ಪಾಟೀಲ ಹಾಗೂ ಹುಣಸಿಮರದ ಕೊಡುಗೆ ಶೂನ್ಯ. ಸಮಾಜಕ್ಕೆ ಒಂದು ನಯಾಪೈಸೆ ದೇಣಿಗೆ ನೀಡಿಲ್ಲ. ಇವರಿಗೆ ಜನತೆ ಈಗಾಗಲೇ ಬುದ್ಧಿ ಕಲಿಸಿದ್ದಾರೆ. ಶೃತಿ ಮೇಲಿನ ದೂರು ವಾಪಸ್‌ ಪಡೆಯದಿದ್ದರೆ ಮುಂದೆಯೂ ಕಲಿಸಲಿದ್ದಾರೆಂದು ಎಚ್ಚರಿಸಿದರು.

ಪಾಲಿಕೆ ಮಾಜಿ ಮೇಯರ್‌ ಶಿವು ಹಿರೇಮಠ, ಮಲ್ಲಿಕಾರ್ಜುನ ಹೊರಕೇರಿ, ಈರಣ್ಣ ಅಪ್ಪಳ್ಳಿ, ಶರಣು ಅಂಗಡಿ, ದೇವರಾಜ ಶಹಪೂರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಟಾಪ್ ನ್ಯೂಸ್

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.