ಮಾವು ಮಾರ್ಕೆಟ್‌ಗೆ ಸೌಲಭ್ಯ ಕಲ್ಪಿಸಿ


Team Udayavani, May 3, 2019, 2:47 PM IST

kol-2

ಶ್ರೀನಿವಾಸಪುರ: ಕೃಷಿ ಉತ್ಪನ್ನ ಮಾರುಕಟ್ಟೆಗೆ ಮೂಲ ಸೌಕರ್ಯ, ಅಕ್ರಮ ತಡೆ, ಖಾಲಿ ಇರುವ ಹುದ್ದೆಗಳ ಭರ್ತಿ, ಕಮಿಷನ್‌ ಹಾವಳಿಗೆ ಕಡಿವಾಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಆಗ್ರಹಿಸಿತು.

ಎಪಿಎಂಸಿ ಅಧ್ಯಕ್ಷ ರಾಜೇಂದ್ರ ಪ್ರಸಾದ್‌ಗೆ ಮನವಿ ನೀಡಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಶ್ರೀನಿವಾಸಪುರ ಕೃಷಿ ಉತ್ಪನ್ನ ಮಾರುಕಟ್ಟೆ ಮಾವಿನ ಸುಗ್ಗಿ ಸಮಯದಲ್ಲಿ ಅಧಿಕಾರಿಗಳಿಗೆ ಚಿನ್ನದ ಮೊಟ್ಟೆ ಇಡುವ ಮಾರುಕಟ್ಟೆಯಾಗಿದೆ. ರೈತರ ಹೆಸರಿನಲ್ಲಿ ಲಕ್ಷಾಂತರ ರೂ. ಲೂಟಿ ಮಾಡುವ ಕಾಯಕವೇ ಹೊರತು ಯಾವುದೇ ಮೂಲ ಸೌಕರ್ಯ, ರೈತರ ಸಂರಕ್ಷಣೆ ಮಾಡುವಂತ ಕಾರ್ಯವಾಗುತ್ತಿಲ್ಲ ಎಂದು ದೂರಿದರು.

ಕಳೆದ ವರ್ಷ ಕಾರ್ಯದರ್ಶಿಯಾಗಿದ್ದವರು 60 ಲಕ್ಷ ರೂ. ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಅಮಾನತು ಮಾಡಿರುವ ಉದಾಹರಣೆ ಇದೆ. ರೈತರ ಮಾರುಕಟ್ಟೆ ಇಂದು ದಲ್ಲಾಳಿಗಳದ್ದಾಗಿದೆ. ಕಷ್ಟಾಪಟ್ಟು ಮಳೆ, ಬಿಸಿಲು, ಹಗಲು ರಾತ್ರಿಯನ್ನದೇ ತೀವ್ರ ಬರಗಾಲ ಮತ್ತು ಸರ್ಕಾರಗಳ ನಿರ್ಲಕ್ಷ್ಯದ ಮಧ್ಯದಲ್ಲೂ ತನ್ನ ಸ್ವಾಭಿಮಾನ ಬದುಕಿಗಾಗಿ ಕೃಷಿಯನ್ನೇ ನಂಬಿ ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಂದರೆ ಅದನ್ನು ಕಾಲಕಸದಂತೆ ಕಾಣುವ ದಲ್ಲಾಳಿಗಳು ಅವರ ತಾಳಕ್ಕೆ ತಕ್ಕಂತೆ ಕುಣಿಯುವ ಅಧಿಕಾರಿ ವರ್ಗ ಇವರ ಮದ್ಯೆ ನಲಗಿರುವ ರೈತರ ರಕ್ಷಣೆಗಾಗಿ ಜಿಲ್ಲಾಡಳಿತ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಅದರಲ್ಲೂ ಪ್ರಮುಖವಾಗಿ ಮಾವಿನ ಮಡಿಲೆಂದೇ ವಿಶ್ವವಿಖ್ಯಾತಿ ಪಡೆದಿರುವ ಶ್ರೀನಿವಾಸಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮೂಲ ಸೌಕರ್ಯಗಳಿಲ್ಲ ಎಂದು ದೂರಿದರು.

ಪ್ರತಿವರ್ಷ ಮಾವಿನ ಆವಕ ಹೆಚ್ಚಾದಾಗ ಮಾರುಕಟ್ಟೆಗೆ ಬರುವ ರೈತರಿಗೆ ಸಮರ್ಪಕ ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಕೊಠಡಿ, ಗುಣಮಟ್ಟದ ಊಟದ ವ್ಯವಸ್ಥೆ ಇಲ್ಲ. ಬಯಲಲ್ಲೇ ಮಲಗುವಂತ ಪರಿಸ್ಥಿತಿ ಉಂಟಾಗಿದೆ ಎಂದು ಆಡಳಿತ ಮಂಡಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ನಿಯಮ ಪಾಲಿಸಲ್ಲ: ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಮಾತನಾಡಿ, ಪ್ರತಿವರ್ಷ ಮಾವಿನ ಸುಗ್ಗಿಯ ಕಾಲದಲ್ಲಿ ಮಾತ್ರ ಅಧಿಕಾರಿಗಳಿಗೆ ಮಾರುಕಟ್ಟೆ ಜ್ಞಾಪಕಕ್ಕೆ ಬರುತ್ತದೆ. ಮುಂಚಿತವಾಗಿ ಇರುವ ಸಮಸ್ಯೆ ಬಗೆಹರಿಸಲು ಇಚ್ಛಾಶಕ್ತಿ ಇಲ್ಲ. ವಿಶ್ರಾಂತಿ ಗೃಹ ಪ್ರಾರಂಭವಾಗದೆ ಹಾಳು ಬೀಳುತ್ತಿವೆ. ಮಾವು ಮಂಡಿ ಕೆಲಸಕ್ಕೆ ಹೊರ ರಾಜ್ಯಗಳಿಂದ ಸಾವಿರಾರು ಸಂಖ್ಯೆಯ ಕಾರ್ಮಿಕರು ಮಾರುಕಟ್ಟೆಗೆ ಬರುವುದರಿಂದ ಇಲ್ಲಿ ಯಾವುದೇ ಸೌಲಭ್ಯಗಳಿಲ್ಲದ ಕಾರಣ ರೋಗ ರುಜಿನಗಳಿಂದ ನರಳಬೇಕಾದ ಪರಿಸ್ಥಿತಿ ಇದೆ. ಜೊತೆಗೆ ಸಿಬ್ಬಂದಿ ನೆಪದಲ್ಲಿ ಸರ್ಕಾರಕ್ಕೆ ಬರುವ ಆದಾಯ ಲೂಟಿ ಮಾಡುವಲ್ಲಿ ಇಲ್ಲಿನ ಸಿಬ್ಬಂದಿ ನಿರತವಾಗಿರುತ್ತಾರೆಯೇ ಹೊರತು, ಸರ್ಕಾರದ ನಿಯಮ ಪಾಲನೆ ಮಾಡುವುದಿಲ್ಲ ಎಂದು ಹೇಳಿದರು.

ಮಾರುಕಟ್ಟೆ ಸಮರ್ಪಕ ನಿರ್ವಹಣೆ: ಮನವಿ ಸ್ವೀಕರಿಸಿ ಅಧ್ಯಕ್ಷ ರಾಜೇಂದ್ರ ಪ್ರಸಾದ್‌ ಮಾತನಾಡಿ, ಮಾವಿನ ಮಾರುಕಟ್ಟೆಗೆ ಜಾಗದ ಕೊರತೆ ಜೊತೆಗೆ ಕುಡಿಯುವ ನೀರು, ಶೌಚಾಲಯಗಳ ಅವ್ಯವಸ್ಥೆ ಇರುವುದು ನಿಜ. ಅದರ ಜೊತೆಗೆ ಹಿಂದೆ ಇದ್ದ, ಕಾರ್ಯದರ್ಶಿ ಹಣ ದುರುಪಯೋಗ ಪಡಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ. ಜೊತೆಗೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿಂದ ಮಾರುಕಟ್ಟೆ ಸಮರ್ಪಕ ನಿರ್ವಹಣೆ ಮಾಡಲು ಆಗುತ್ತಿಲ್ಲ. ಆದರೂ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿ ಸರಿಪಡಿಸುವ ಭರವಸೆ ನೀಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷೆ ಎ.ನಳಿನಿ, ಹಸಿರುಸೇನೆ ಅಧ್ಯಕ್ಷ ಆಚಂಪಲ್ಲಿ ಗಂಗಾಧರ, ಹೊಸಹಳ್ಳಿ ಚಂದ್ರಪ್ಪ, ಬಂಗವಾದಿ ಮುನಿಯಪ್ಪ, ತೆರ್ನಹಳ್ಳಿ ರಮೇಶ್‌, ನಾಗರಾಜ, ವೆಂಕಿ, ರಾಯಲ್ಪಾಡು ಹರೀಶ್‌, ಕೆಂಬೋಡಿ ಕೃಷ್ಣೇಗೌಡ, ಪುತ್ತೇರಿ ರಾಜು ಮುಂತಾದವರಿದ್ದರು.

ಟಾಪ್ ನ್ಯೂಸ್

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pierre-Filliozat

ಫ್ರಾನ್ಸ್‌ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್‌ ಫಿಲಿಯೋಜಾ ನಿಧನ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.