ಬಸವ-ಭಗೀರಥ ಜಯಂತಿ ಆಚರಣೆಗೆ ಸಿದ್ಧತೆ
Team Udayavani, May 3, 2019, 2:57 PM IST
ಶಹಾಬಾದ: ಬಸವ ಜಯಂತಿ, ಭಗೀರಥ ಜಯಂತಿ ಆಚರಣೆ ನಿಮಿತ್ತ ತಾಲೂಕಾಡಳಿತ ವತಿಯಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ಪೌರಾಯುಕ್ತ ವೆಂಕಟೇಶ ಮಾತನಾಡಿದರು.
ಶಹಾಬಾದ: ನಗರಸಭೆ ಹಾಗೂ ತಾಲೂಕಾಡಳಿತ ವತಿಯಿಂದ ಮೇ 7ರಂದು ಬಸವ ಜಯಂತಿ, ಭಗೀರಥ ಜಯಂತಿಯನ್ನು ಮೇ 11 ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ವೆಂಕಟೇಶ ತಿಳಿಸಿದರು.
ನಗರಸಭೆ ಸಭಾಂಗಣದಲ್ಲಿ ಬಸವ ಜಯಂತಿ ಮತ್ತು ಭಗೀರಥ ಜಯಂತಿ ಆಚರಣೆ ನಿಮಿತ್ತ ತಾಲೂಕಾಡಳಿತ ವತಿಯಿಂದ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮನುಕುಲದ ಉದ್ಧಾರಕರಾದ ಬಸವಣ್ಣನವರು, ಭಗೀರಥ ಜಯಂತಿ ಯಾವುದೇ ಆಡಂಬರವಿಲ್ಲದೇ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿದ್ದೇವೆ. ವೀರಶೈವ ಸಮಾಜ, ಲಿಂಗಾಯತ ಸಮಾಜ, ಬಸವಾದಿ ಒಕ್ಕೂಟ ಸಮಿತಿ ಸೇರಿದಂತೆ ಅನೇಕ ಸಂಘಟನೆಗಳ, ಇತರ ಸಮುದಾಯಗಳ ಮುಖಂಡರು ಅಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು. ಅಂದು ಬೆಳಗ್ಗೆ 8ಕ್ಕೆ ಬಸವೇಶ್ವರ ವೃತ್ತದಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಗುವುದು. ನಂತರ ನಗರದ ಮುಖ್ಯ ಬೀದಿಗಳಲ್ಲಿ ಟ್ರ್ಯಾಕ್ಟರ್‌ನಲ್ಲಿ ಬಸವಣ್ಣನ ಭಾವಚಿತ್ರ ಹಾಗೂ ಮೂರ್ತಿಯ ಭವ್ಯ ಮೆರವಣಿಗೆ ನಡೆಸಿ, ನಗರದ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬ್ಯಾನರ್, ಕಟೌಟ್ ಹಾಕಬೇಕಾದರೆ ಸಮಾಜದ ಮುಖಂಡರೇ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯಬೇಕು. ಅಲ್ಲದೇ ಬಸವ ಜಯಂತಿಯಂತೆ ಭಗೀರಥ ಜಯಂತಿಯನ್ನು ಆಚರಿಸಲಾಗುವುದು. ಇದಕ್ಕೆ ಜನರ ಸಹಕಾರ ಅಗತ್ಯ ಎಂದರು.
ಪಿಐ ಮಹಾಂತೇಶ ಸಜ್ಜನ್, ಉಪ ತಹಶೀಲ್ದಾರ ಮಲ್ಲಿಕಾರ್ಜುನ ಶಿವಪುರ, ಶರಣಬಸಪ್ಪ, ವೀರಶೈವ ಸಮಾಜದ ಅಧ್ಯಕ್ಷ ವಿಜಯಕುಮಾರ ಮುಟ್ಟತ್ತಿ, ಬಸವಾದಿ ಶರಣರ ಒಕ್ಕೂಟ ಸಮಿತಿ ಅಧ್ಯಕ್ಷ ವೈಜನಾಥ ಹುಗ್ಗಿ, ಬಸವ ಸಮಿತಿ ಅಧ್ಯಕ್ಷ ಅಮೃತ ಮಾನಕರ್, ಮುಖಂಡರಾದ ಶರಣಗೌಡ ಪಾಟೀಲ, ಅಣವೀರ ಇಂಗಿನಶೆಟ್ಟಿ, ಗಿರಿಮಲ್ಲಪ್ಪ ವಳಸಂಗ, ಅರುಣ ಪಟ್ಟಣಕರ್, ಸೂರ್ಯಕಾಂತ ಕೋಬಾಳ, ಸಾಹೇಬಗೌಡ ಬೋಗುಂಡಿ, ನಗರಸಭೆ ಸದಸ್ಯರಾದ ಮಲ್ಲಿಕಾರ್ಜುನ ವಾಲಿ, ತಿಪ್ಪಣ್ಣ ನಾಟೇಕಾರ,ಶರಣಪ್ಪ ಕೊಡದೂರ, ಬಸವರಾಜ ತರನಳ್ಳಿ ನಾಗಪ್ಪ ಬೆಳಮಗಿ, ನಾಮದೇವ ಸಿಪ್ಪಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
Bantwal: ಕೆಎಸ್‌ಆರ್‌ಟಿಸಿ ಬಸ್-ಬೈಕ್ ಢಿಕ್ಕಿ; ದಂಪತಿಗೆ ಗಾಯ
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.