ಸೌಲಭ್ಯಕ್ಕೆ ಆಗ್ರಹಿಸಿ ಪುರಸಭೆಗೆ ಮುತ್ತಿಗೆ

•ಮೂರು ದಿನದಲ್ಲಿ ಬೇಡಿಕೆ ಈಡೇರಿಸದಿದ್ದರೆ ಧರಣಿ ಸತ್ಯಾಗ್ರಹ: ಎಚ್ಚರಿಕೆ

Team Udayavani, May 3, 2019, 3:43 PM IST

kopala-4-tdy..

ಕುಷ್ಟಗಿ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕಾರ್ಯಕರ್ತರು ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕುಷ್ಟಗಿ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುದ್ದೀಪ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕಾರ್ಯಕರ್ತರು ಪುರಸಭೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ಮಲ್ಲಯ್ಯ ವೃತ್ತದಿಂದ ಜಿಲ್ಲಾಧ್ಯಕ್ಷ ಹುಲಗಪ್ಪ ಚೂರಿ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಪುರಸಭೆ ಆಡಲಿತ ಅವ್ಯವಸ್ಥೆ ಕುರಿತು ಧಿಕ್ಕಾರ ಕೂಗಿದರು. ನಂತರ ಪುರಸಭೆ ಕಾರ್ಯಾಲಯದಲ್ಲಿ ಮುಖ್ಯಾಧಿಕಾರಿ ಅಶೋಕ ಪಾಟೀಲ ಅನುಪಸ್ಥಿತಿಯಲ್ಲಿ ಅಕೌಟೆಂಟ್ ದೇವೇಂದ್ರಪ್ಪ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಹುಲಗಪ್ಪ ಚೂರಿ, ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ವಾರದಲ್ಲಿ ಎರಡು ಬಾರಿ ನೀರು ಪೂರೈಸಲು ಪುರಸಭೆ ಕ್ರಮ ಕೈಗೊಳ್ಳಬೇಕು. ಪಟ್ಟಣದ ಮುಖ್ಯ ರಸ್ತೆಯ ವಿಭಜಕಗಳ ಹೈಮಾಸ್ಟ್‌ ವಿದ್ಯುದ್ದೀಪಗಳಿಗೆ ಬೆಳಕಿನ ಭಾಗ್ಯ ಕಲ್ಪಿಸಿ ಕತ್ತಲೆಯಿಂದ ಮುಕ್ತಗೊಳಿಸಬೇಕು. ಕಳೆದ ಮೂರು ವರ್ಷಗಳಿಂದ ನನೆಗುದಿಯಲ್ಲಿರುವ 24 ತಾಸು ನೀರು ಪೂರೈಕೆ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಪಟ್ಟಣದಲ್ಲಿ ಸೊಳ್ಳೆ ನಿಯಂತ್ರಣಕ್ಕಾಗಿ ಸೊಳ್ಳೆ ನಿರೋಧಕ ಸಿಂಪರಣೆಗೆ ಫಾಗಿಂಗ್‌ ವ್ಯವಸ್ಥೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಕಳೆದ ಮಾರ್ಚ್‌ 12ರಿಂದ ಕುಷ್ಟಗಿ ಪಟ್ಟಣದ ಮುಖ್ಯ ರಸ್ತೆಯ ವಿಭಜಕ ವಿದ್ಯುತ್‌ ಕಂಬಗಳಲ್ಲಿ ವಿದ್ಯುದ್ದೀಪ ಬೆಳಗುತ್ತಿಲ್ಲ. ವಾಹನಗಳ ಬೆಳಕಲ್ಲಿ ಸಾರ್ವಜನಿಕರು ಸಂಚರಿಸುವ ದುಸ್ಥಿತಿ ಎದುರಾಗಿದೆ. ಪುರಸಭೆ ದುರಸ್ತಿಗೀಡಾದ ವಿದ್ಯುದ್ದೀಪಗಳ ಮರು ದುರಸ್ತಿಗೂ ಪ್ರಯತ್ನಿಸಿಲ್ಲ. ಇನ್ನೂ ಮೂರು ದಿನಗಳಲ್ಲಿ ಬೇಡಿಕೆ ಈಡೇರಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಗೌರವಾಧ್ಯಕ್ಷ ಮಹಾಂತೇಶ ಆರೇರ್‌, ತಾಲೂಕಾ ಅಧ್ಯಕ್ಷ ದೇವರಾಜ್‌ ಹಜಾಳ್‌, ರಫೀ ಬಂಗಾಳಿ, ತೊಂಡೆಪ್ಪ ಚೂರಿ, ನಾಗರಾಜ್‌ ಭೋವಿ, ಹನಮಂತಪ್ಪ ಬೂತಬಿಲ್ಲಿ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

12-metro

Metro: ನಾಡಿದ್ದಿನಿಂದ ಮೆಟ್ರೋ ಪ್ರಯಾಣ ದರ ಏರಿಕೆ?

The Gambia: ಗ್ಯಾಂಬಿಯಾ ಎನ್ನುವ ಎನ್‌ಕ್ಲೇವ್‌ ರಾಷ್ಟ್ರ: ಈ ದೇಶ ಇರುವುದೇ 30 ಕಿ.ಮೀ.ಉದ್ದ

The Gambia: ಗ್ಯಾಂಬಿಯಾ ಎನ್ನುವ ಎನ್‌ಕ್ಲೇವ್‌ ರಾಷ್ಟ್ರ: ಈ ದೇಶ ಇರುವುದೇ 30 ಕಿ.ಮೀ.ಉದ್ದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramesh-BYV

BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್‌ ಜಾರಕಿಹೊಳಿ; ಬಿವೈವಿ ಆಕ್ರೋಶ

8-1

Gangavathi: ಸಂಕ್ರಾಂತಿ: ತುಂಗಭದ್ರಾ ನದಿಯಲ್ಲಿ ಸಾವಿರಾರು ಜನರಿಂದ ಪುಣ್ಯ ಸ್ನಾನ

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

19-

EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್‌ 1 ಸ್ಥಾನ ಪಡೆದ ಕರ್ನಾಟಕ

18-

US visa: ಬೆಂಗಳೂರಿನಲ್ಲೇ ಅಮೆರಿಕ ವೀಸಾ: ಕನಸು ಸನ್ನಿಹಿತ

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.