ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಸ್ಪಂದನೆ

ಜನರ ಅಳಲು ಕೇಳಲು- ನೀರು ಪೂರೈಸಲು ತಾಲೂಕು ಕೇಂದ್ರಗಳಲ್ಲಿ ಕಂಟ್ರೋಲ್ ರೂಮ್‌ ಸ್ಥಾಪನೆ: ಜಿಲ್ಲಾಧಿಕಾರಿ

Team Udayavani, May 3, 2019, 3:51 PM IST

uttar-kannada-1-tdy..

ಕಾರವಾರ: ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕಾರವಾರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲು ಜಿಲ್ಲಾಡಳಿತ ಹಾಗೂ ಜಿಪಂ ಸಂಪೂರ್ಣ ಸಜ್ಜಾಗಿವೆ ಎಂದು ಜಿಲ್ಲಾಧಿಕಾರಿ ಹರಿಶಕುಮಾರ ಕೆ. ಹೇಳಿದರು.

ಅವರು ಡಿಸಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಬೇಸಿಗೆ ಕಾಲದಲ್ಲಿ ಸಾರ್ವಜನಿಕರಿಗೆ ಕುಡಿವ ನೀರು ಪೂರೈಸಲು ಜಿಲ್ಲಾಡಳಿತ ಹಾಗೂ ಜಿಪಂ ಕೈಗೊಂಡ ಕ್ರಮಗಳ ಕುರಿತು ವಿವರಿಸಿದರು.

ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಆಯಾ ತಾಲೂಕುಗಳ ತಹಶೀಲ್ದಾರ್‌ ಕಾರ್ಯಾಲಯ, ಜಿಪಂ, ತಾಪಂ ಕಚೇರಿಗಳಲ್ಲಿ ತರೆಯಲಾಗಿರುವ ಕಂಟ್ರೋಲ್ ರೂಮ್‌ಗಳಿಗೆ ಸಾರ್ವಜನಿಕರು ದೂರು ದಾಖಲಿಸಬಹುದಾಗಿದೆ ಎಂದು ತಿಳಿಸಿದರು. ಬರ ಪರಸ್ಥಿತಿಯಲ್ಲಿ ಜಿಲ್ಲೆಯ ಜನರಿಗೆ ಕುಡಿಯುವ ನೀರು ಒದಗಿಸಲು ಯಾವುದೇ ರೀತಿಯ ಹಣಕಾಸಿನ ಸಮಸ್ಯೆ ಇಲ್ಲ, ಅಲ್ಲದೇ ಕಾನೂನಿನ ತೋಡಕು ಕೂಡಾ ಇರುವುದಿಲ್ಲ, ಆಯಾ ಉಪವಿಭಾಗದ ಸಹಾಯಕ ಆಯುಕ್ತರಿಗೆ ಜವಾಬ್ದಾರಿ ನೀಡಲಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸಲಾಗುವುದು ಎಂದರು.

ಮೇವಿನ ಕೊರತೆ ಇಲ್ಲ: ಜಿಲ್ಲೆಯಲ್ಲಿ ಅಗತ್ಯ ಪ್ರಮಾಣದಲ್ಲಿ ಮೇವಿನ ಲಭ್ಯತೆ ಇದೆ. ಜಿಲ್ಲೆಯ ಜಾನುವಾರುಗಳಿಗೆ ಇನ್ನೂ 9 ವಾರಗಳಿಗೆ ಸಾಕಾಗುವಷ್ಟು ಮೇವಿನ ಸಂಗ್ರಹವಿದೆ. ಅಂತರ ಜಿಲ್ಲೆ ಅಥವಾ ಅಂತಾರಾಜ್ಯಕ್ಕೆ ಮೇವು ಸಾಗಾಣಿಕೆ ಆಗದಂತೆ ಜಿಲ್ಲೆಯ ಚೆಕ್‌ ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿಪಂ ಸಿಇಒ ಎಂ. ರೋಶನ್‌ ಮಾತನಾಡಿ ಜಿಲ್ಲಾಧಿಕಾರಿ, ಜಿಪಂ ಸಿಇಒ, ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು, ತಾಪಂ ಇಒ ಹಾಗೂ ಕಾರ್ಯನಿರ್ವಾಹಕ ಇಂಜನೀಯರ್‌ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದೊಂದಿಗೆ ಪ್ರತಿ ಶನಿವಾರ ವಿಡಿಯೋ ಸಂವಾದ ನಡೆಸಿ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕ್ರಮವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕಾರವಾರ ನಗರಸಭೆ ಪೌರಾಯುಕ್ತ ಎಸ್‌ ಯೋಗೇಶ್ವರ ಮಾತನಾಡಿ, ಪ್ರತಿದಿನ ಕಾರವಾರ ನಗರಕ್ಕೆ 3.80 ಎಂಎಲ್ಡಿ, ಅಂಕೋಲಾ ಪಟ್ಟಣಕ್ಕೆ 2.07, ಶಿರಸಿ 8.17, ದಾಂಡೇಲಿ 7.00, ಭಟ್ಕಳ 2.56, ಹೊನ್ನಾವರ 1.70, ಕುಮಟಾ 2.63, ಮುಂಡಗೋಡ 2.16 ಜಾಲಿ ಪಟ್ಟಣಕ್ಕೆ 1.30, ಯಲ್ಲಾಪುರ 1.40, ಹಳಿಯಾಳ 1.93, ಸಿದ್ದಾಪುರ 0.90 ಎಮ್‌.ಎಲ್.ಡಿ ನೀರು ಸರಬರಾಜು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್‌, ಡಿ.ಯು.ಡಿ.ಸಿ ಯೋಜನಾ ನಿರ್ದೇಶಕ ವಿನಾಯಕ ಉಪಸ್ಥಿತರಿದ್ದರು.

ಜಂಟಿ ಕಾರ್ಯಾಚರಣೆ:

ಕುಡಿವ ನೀರಿಗೆ ಸಮಸ್ಯೆ ಎದುರಾಗಬಹುದಾದ ಹಳ್ಳಿಗಳನ್ನು ಈಗಾಗಲೇ ಗುರುತಿಸಲಾಗಿದೆ. ಯಾವುದೇ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಇದೆ ಎಂದು ದೂರು ಬಂದ ಕೂಡಲೇ ಗ್ರಾಪಂ ಅಭಿವೃದ್ಧಿ ಅಧಿಕಾರಿ ಮತ್ತು ತಾಪಂ ಇಒ ಜಂಟಿಯಾಗಿ ಆ ಹಳ್ಳಿಗೆ ಭೇಟಿ ನೀಡಿ ಕೂಡಲೇ ಅಲ್ಲಿ ಪರಿಹಾರ ಕಾರ್ಯಕ್ಕೆ ಕ್ರಮವಹಿಸಲು ನಿರ್ದೇಶನ ನೀಡಲಾಗಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಆಂತರಿಕ ಸಮಸ್ಯೆಗಳಿದ್ದಾಗ ಜಿಲ್ಲಾಧಿಕಾರಿ ಮತ್ತು ಸಿಇಒ ತೆರಳಿ ಸಮಸ್ಯೆ ಬಗೆಹರಿಸಲಾಗುತ್ತಿದೆ ಎಂದು ಹೇಳಿದರು.
ಖಾಸಗಿ ಬೋರವೆಲ್ ಮೂಲಕ ನೀರು ಪೂರೈಕೆ:

ಜಿಲ್ಲೆಯ 304 ಗ್ರಾಮಗಳಲ್ಲಿ 427 ಖಾಸಗಿ ಬೋರವೆಲ್ಗಳು. 112 ತೆರೆದ ಬಾವಿಗಳನ್ನು ಗುರುತಿಸಲಾಗಿದ್ದು, ಕುಡಿಯುವ ನೀರಿನ ಅವಶ್ಯಕತೆ ಇರುವ ಪ್ರದೇಶಗಳಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುವುದು. ಅಲ್ಲದೇ ಖಾಸಗಿ ಜಮೀನಿನಲ್ಲಿ ನೀರಿನ ಲಭ್ಯತೆ ಇದ್ದರೆ ಅವುಗಳ ಮೂಲಕ ಕುಡಿಯುವ ನೀರಿನ ಬೇಡಿಕೆ ಪೂರೈಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಂದ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.