ಅನುಮತಿ ಇಲ್ಲದೆ ರಸ್ತೆ, ಚರಂಡಿ ನಿರ್ಮಾಣ
Team Udayavani, May 3, 2019, 4:03 PM IST
ಯಾದಗಿರಿ: ಮುದ್ನಾಳ ಗ್ರಾಮದ ಹೊರವಲಯದಲ್ಲಿ ಭೂಮಾಲಿಕನ ಅನುಮತಿಯಿಲ್ಲದೇ ಲೋಕೋಪಯೋಗಿ ಅಧಿಕಾರಿಗಳು ರಸ್ತೆ ಮತ್ತು ಚರಂಡಿ ನಿರ್ಮಿಸಿರುವುದು.
ಯಾದಗಿರಿ: ಖಾಸಗಿ ವ್ಯಕ್ತಿಗೆ ಸಂಬಂಧಿಸಿದ ಹೊಲದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡಿರುವ ಲೋಕೋಪಯೋಗಿ ಇಲಾಖೆ ಜೆಇ ಗುರುನಾಥ ಮತ್ತು ಎಇಇ ನಾಗಪ್ಪ ಎನ್ನುವ ಅಧಿಕಾರಿಗಳ ವಿರುದ್ಧ ಭೂಮಾಲಿಕ ಉಮೇಶ ಕೆ. ಮುದ್ನಾಳ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಯಾದಗಿರಿ ತಾಲೂಕಿನ ಮುದ್ನಾಳ ಗ್ರಾಮದ ಹೊರವಲಯದಲ್ಲಿ ಕಳೆದ ಫೆಬ್ರವರಿಯಲ್ಲಿ ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಅನುಮತಿಯಿಲ್ಲದೇ ಹೊಲದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡಿದ್ದಾರೆಂದು ಎಂದು ದೂರಿದ್ದಾರೆ.
ತಮ್ಮ ಹೊಲದ ಸರ್ವೇ ನಂ: 249/1ರಲ್ಲಿ ಅಧಿಕಾರಿಗಳು ಹೊಲದ ಜಾಗೆಯನ್ನು ಅತಿಕ್ರಮಿಸಿ ರಸ್ತೆ ಮತ್ತು ಚರಂಡಿ ನಿರ್ಮಿಸಲು ಮುಂದಾಗಿದ್ದರು, ಆಗ ಪೊಲೀಸರ ಬಳಿ ದೂರು ನೀಡಲಾಗಿತ್ತು, ಅಧಿಕಾರಿಗಳನ್ನು ಠಾಣೆಗೆ ಕರೆಯಿಸಿ ಕಾಮಗಾರಿಯನ್ನು ಮಾಡದಂತೆ ಹೇಳಲಾಗಿತ್ತು. ಆದರೇ, ಊರಿನಲ್ಲಿ ಇರದ ಸಮಯ ನೋಡಿ ಕಾಮಗಾರಿ ನಿರ್ವಹಿಸಿದ್ದಾರೆ ಎನ್ನಲಾಗಿದೆ.
ಕಾಮಗಾರಿಯು ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದ್ದು, ರಸ್ತೆಯನ್ನು ದಾಟಿ ತಮ್ಮ ಹೊಲದೊಳಗೆ ಅತಿಕ್ರಮಿಸಿರುವುದರಿಂದ ದೂರು ಸಲ್ಲಿಸಿದ್ದಾಗಿ ಉಮೇಶ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.