ಒಡಿಶಾಗೆ ಫೋನಿ ಹೊಡೆತ

ಇಂದು ಪಶ್ಚಿಮ ಬಂಗಾಳಕ್ಕೆ, ಸಂಜೆ ವೇಳೆಗೆ ಬಾಂಗ್ಲಾದೇಶಕ್ಕೆ ಪ್ರವೇಶ

Team Udayavani, May 4, 2019, 6:00 AM IST

19

ಹೊಸದಿಲ್ಲಿ: ನಿರೀಕ್ಷೆಯಂತೆಯೇ ಬಂಗಾಲ ಕೊಲ್ಲಿಯಲ್ಲಿ ಕೇಂದ್ರೀಕೃತವಾಗಿದ್ದ “ಫೋನಿ’ ಚಂಡ ಮಾರುತ ಶುಕ್ರವಾರ ಬೆಳಗ್ಗೆ ಪುರಿ ಕರಾವಳಿ ಮೂಲಕ ಒಡಿಶಾ ಪ್ರವೇಶಿಸಿದ್ದು, ರಾಜ್ಯಾದ್ಯಂತ ಭಾರೀ ಹಾನಿ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ 11 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದ್ದರಿಂದಾಗಿ ಹೆಚ್ಚಿನ ಸಾವು ನೋವು ಸಂಭವಿಸಿಲ್ಲ. ರಾಜ್ಯದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಹೇಳಿದೆ. ಅಲ್ಲದೆ ವಿವಿಧ ಕಡೆಗಳಲ್ಲಿ 160 ಮಂದಿ ಗಾಯಗೊಂಡಿದ್ದಾರೆ.

ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಗೆ ಪುರಿ ಕರಾವಳಿಗೆ ಫೋನಿ ಚಂಡಮಾರುತ ಅಪ್ಪಳಿಸಿತು. ಸಮುದ್ರದಲ್ಲಿ ಭಾರೀ ತೀವ್ರತೆಯಿಂದ ಕೂಡಿದ್ದ ಚಂಡಮಾರುತದ ವೇಗ ಅಲ್ಪ ಕಡಿಮೆಯಾದರೂ ಪುರಿ ಪ್ರವೇಶಿಸುವಾಗ ಗಂಟೆಗೆ ಸುಮಾರು 200 ಕಿ.ಮೀ. ವೇಗದಲ್ಲಿತ್ತು. ಒಟ್ಟು ಒಡಿಶಾದ 14 ಜಿಲ್ಲೆಗಳಲ್ಲಿ ಫೋನಿಯಿಂದ ಹಾನಿ ಯಾಗಿದೆ. ಸಾವಿರಾರು ಬೃಹತ್‌ ಗಾತ್ರದ ಮರಗಳು ನೆಲ ಕ್ಕುರುಳಿವೆ. ಅಲ್ಲಲ್ಲಿ ವಿದ್ಯುತ್‌ ಕಂಬಗಳು, ಮೊಬೈಲ್‌ ಟವರ್‌ಗಳು ನೆಲಕ್ಕೆ ಉರುಳಿದ್ದರೆ, ಹಲವಾರು ಮನೆಗಳು ಕುಸಿದಿವೆ.

ಗಾಳಿಯ ರಭಸಕ್ಕೆ ಭುವನೇಶ್ವರದ ಏಮ್ಸ್‌ನ ಮೇಲ್ಛಾವಣಿಯೇ ಹಾರಿಹೋಗಿದೆ. ಆದರೆ ಆಸ್ಪತ್ರೆಯೊಳಗಿನ ಯಾವುದೇ ರೋಗಿಗಳಿಗೆ ಹಾನಿಯಾಗಿಲ್ಲ ಎಂದು ಒಡಿಶಾ ಸರಕಾರ ಸ್ಪಷ್ಟಪಡಿಸಿದೆ. ಇಡೀ ರಾಜ್ಯಾದ್ಯಂತ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಎನ್‌ಡಿಆರ್‌ಎಫ್ ಹೇಳಿದೆ. 160 ಮಂದಿ ಗಾಯಗೊಂಡಿದ್ದಾರೆ ಎಂದೂ ತಿಳಿಸಿದೆ.

ಒಡಿಶಾದ ನಾಲ್ಕು ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿಯಾಗಿದೆ. ಕಟಕ್‌, ಖೋರ್ಡಾ, ಭುವನೇಶ್ವರ ಮತ್ತು ಪುರಿ ಜಿಲ್ಲೆಗಳಲ್ಲಿ ಫೋನಿಯ ತೀವ್ರತೆ ಹೆಚ್ಚಾಗಿದೆ. ಪರಿಹಾರ ಕಾರ್ಯಾಚರಣೆಗೆ ರೈಲ್ವೇ ಇಲಾಖೆ, ಭಾರತೀಯ ವಾಯು ಸೇನೆ, ನೌಕಾಪಡೆಗಳೂ ಕೈಜೋಡಿಸಿವೆ. ಶನಿವಾರ ಬೆಳಗ್ಗೆ ವೇಳೆಗೆ ಫೋನಿ ಚಂಡಮಾರುತ ಪಶ್ಚಿಮ ಬಂಗಾಲ ಪ್ರವೇಶಿಸಲಿದೆ. ಇದರಿಂದಾಗಿ ಪಶ್ಚಿಮ ಬಂಗಾಲದ ಸುತ್ತಲಿನ ರಾಜ್ಯಗಳಲ್ಲಿ ಭಾರೀ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ.

11.54 ಲಕ್ಷ ಮಂದಿ ಸ್ಥಳಾಂತರ: ಚಂಡಮಾರುತದ ಹಿನ್ನೆಲೆಯಲ್ಲಿ ಒಡಿಶಾದ 18 ಜಿಲ್ಲೆಗಳ 11.50 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಇವರಿಗೆ 6,564 ನಿರಾಶ್ರಿತ ಶಿಬಿರಗಳಲ್ಲಿ ವಾಸ್ತವ್ಯ ಕಲ್ಪಿಸಲಾಗಿದೆ. ಉಚಿತವಾಗಿ ಆಹಾರ ವ್ಯವಸ್ಥೆ ಮಾಡಲಾಗಿದೆ.

ಆಂಧ್ರದಲ್ಲೂ ಅಬ್ಬರ: ಆಂಧ್ರ ಪ್ರದೇಶದಲ್ಲೂ ಫೋನಿಯ ಹಾನಿ ಹೆಚ್ಚಾಗಿದೆ. 2,000 ವಿದ್ಯುತ್‌ ಕಂಬಗಳು, 117 ಸಬ್‌ ಸ್ಟೇಷನ್‌ಗಳಿಗೆ ಹಾನಿಯಾಗಿದೆ. ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ. ಶ್ರೀಕಾಕುಲಂನಲ್ಲಿ ಸುಮಾರು 20 ಸಾವಿರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಇಲ್ಲಿ 126 ನಿರಾಶ್ರಿತ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಒಟ್ಟು 733 ಗ್ರಾಮಗಳಿಗೆ ಹಾನಿಯಾಗಿದೆ. ಸದ್ಯ ಅಲ್ಲಿ ನೀತಿ ಸಂಹಿತೆ ಸಡಿಲ ಮಾಡಲಾಗಿದೆ. ಪೂರ್ವ ಗೋದಾವರಿ, ವಿಶಾಖಪಟ್ಟಣ, ವಿಜಯನಗರ ಮತ್ತು ಶ್ರೀಕಾಕುಲಂ ಜಿಲ್ಲೆಗಳಲ್ಲಿ ನೀತಿ ಸಂಹಿತೆ ಸಡಿಲ ಮಾಡಲಾಗಿದೆ.

5 ಲಕ್ಷ ಜನರ ಸ್ಥಳಾಂತರ: ಇಂದು ಸಂಜೆ ವೇಳೆಗೆ ಫೋನಿ ಚಂಡಮಾರುತ ಬಾಂಗ್ಲಾದೇಶ ಪ್ರವೇಶಿಸಲಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸುಮಾರು 5 ಲಕ್ಷ ಜನರನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರ ಮಾಡಲಾಗಿದೆ.
45 ಸಾವಿರ ಜನರ ಸ್ಥಳಾಂತರ: ಅತ್ತ ಪಶ್ಚಿಮ ಬಂಗಾಲದಲ್ಲೂ ಸುಮಾರು 45 ಸಾವಿರ ಜನರನ್ನು ಸ್ಥಳಾಂತರರಿಸಲಾಗಿದೆ. ನಾಡಿಯಾ, ಮಿಡ್ನಾಪುರ, ಸೌತ್‌ 24 ಪರಗಣ, ಹೌರಾ, ನಾರ್ತ್‌ 24 ಪರಗಣಗಳಲ್ಲಿ ಸ್ಥಾಪಿಸಲಾಗಿರುವ ನಿರಾಶ್ರಿತ ಶಿಬಿರಗಳಲ್ಲಿ ಇವರಿಗೆ ಆಶ್ರಯ ಕಲ್ಪಿಸಲಾಗಿದೆ. ಶುಕ್ರವಾರವೇ ಬಂಗಾಲದಲ್ಲಿ ಭಾರೀ ಮಳೆಯಾಗಿದೆ.

ಭುವನೇಶ್ವರ, ಕೋಲ್ಕತಾ ಏರ್‌ಪೋರ್ಟ್‌ ಬಂದ್‌
ಚಂಡಮಾರುತ ಹಿನ್ನೆಲೆಯಲ್ಲಿ ಗುರುವಾರ ಮಧ್ಯ ರಾತ್ರಿ ಯಿಂದಲೇ ಭುವನೇಶ್ವರ ಮತ್ತು ಕೋಲ್ಕತಾ ವಿಮಾನ ನಿಲ್ದಾಣಗಳನ್ನು ಸ್ಥಗಿತಗೊಳಿಸಲಾಗಿದೆ. ಭುವನೇಶ್ವರ ವಿಮಾನ ನಿಲ್ದಾಣಕ್ಕೆ ವ್ಯಾಪಕ ಹಾನಿ ಯಾ ಗಿದೆ. ಪರಿಸ್ಥಿತಿ ನೋಡಿ ಕೊಂಡು ವಿಮಾನಗಳ ಕಾರ್ಯಾಚರಣೆ ಆರಂಭಿ ಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿದೆ.

1,000 ಕೋಟಿ ರೂ. ಬಿಡುಗಡೆ
ಫೋನಿ ಅಬ್ಬರದಿಂದ ಹಾನಿಯಾಗಿರುವ ಜನತೆಗೆ ಪ್ರಧಾನಿ ಮೋದಿ ಸಾಂತ್ವನ ಹೇಳಿ ದ್ದಾರೆ. ನಿಮ್ಮ ಜತೆಗೆ ನಾವಿದ್ದೇವೆ ಎಂದೂ ಭರವಸೆ ನೀಡಿದ್ದಾರೆ. ಚಂಡಮಾರುತ ಆಗಮಿಸುವ ಮೊದಲೇ ಪರಿಹಾರ ಕಾರ್ಯಾ ಚರಣೆ  ಗಾಗಿ 1,000 ಕೋಟಿ ರೂ. ಬಿಡುಗಡೆ ಮಾಡ ಲಾಗಿದೆ ಎಂದೂ ತಿಳಿಸಿದ್ದಾರೆ. ಜತೆಗೆ ಒಡಿಶಾ, ಆಂಧ್ರ, ಪಶ್ಚಿಮ ಬಂಗಾಲ, ತಮಿಳುನಾಡು, ಪುದುಚೇರಿ ಸರಕಾರಗಳ ಜತೆ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ.

200 ಕಿ.ಮೀ. ಫೋನಿ ಮಾರುತದ ಅಬ್ಬರ
160ಮಂದಿಗೆ ಗಾಯ
11.54 ಲಕ್ಷ ಒಡಿಶಾದಲ್ಲೇ ಸ್ಥಳಾಂತರಗೊಂಡವರು
20,000 ಆಂಧ್ರದಲ್ಲಿನ ನಿರಾಶ್ರಿತರ ಶಿಬಿರದಲ್ಲಿರುವವರು
08 ಒಡಿಶಾದಲ್ಲಿ ಮೃತರ ಸಂಖ್ಯೆ
14 ಒಡಿಶಾದಲ್ಲಿನ ಜಿಲ್ಲೆಗಳಿಗೆ ಹಾನಿ
6,564 ಸ್ಥಾಪಿಸಲಾಗಿರುವ ನಿರಾಶ್ರಿತ ಶಿಬಿರಗಳು
45,000 ಪಶ್ಚಿಮ ಬಂಗಾಲದಲ್ಲಿ ಸ್ಥಳಾಂತರ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.