ಕೈ ಸರ್ಜಿಕಲ್ ದಾಳಿ ಕಾಗದದ ಮೇಲೆ
Team Udayavani, May 4, 2019, 6:00 AM IST
ರಾಜಸ್ಥಾನದ ಬಿಕಾನೇರ್ ರ್ಯಾಲಿಗೆ ಮೋದಿ ಸ್ವಾಗತಿಸಿದ ಪಕ್ಷದ ಮುಖಂಡರು.
ಜೈಪುರ: ತಾವು ಅಧಿಕಾರದಲ್ಲಿದ್ದಾಗ ಆರು ಬಾರಿ ಸರ್ಜಿಕಲ್ ದಾಳಿ ನಡೆಸಲಾಗಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದ್ದಕ್ಕೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಹೇಳಿಕೊಳ್ಳುವ ಸರ್ಜಿಕಲ್ ದಾಳಿಗೆ ಸಾಕ್ಷಿ ಇಲ್ಲ. ಅವರು ಮಾಡಿದ ದಾಳಿ ಕಾಗದದ ಮೇಲಷ್ಟೇ ಇದೆ ಎಂದಿದ್ದಾರೆ. ರಾಜಸ್ಥಾನದ ಸಿಕಾರ್‌ನಲ್ಲಿ ಚುನಾವಣಾ ರ್ಯಾಲಿ ನಡೆಸಿದ ಅವರು ನಮ್ಮ ಸೇನೆಯ ಯೋಧರ ಸಾಮರ್ಥ್ಯ ಕಾಂಗ್ರೆಸ್‌ಗೆ ತಿಳಿದಿಲ್ಲ. ಈಗ ಕಾಂಗ್ರೆಸ್ ಮೀಟೂ ಎನ್ನುತ್ತಿದೆ. ಆರಂಭದಲ್ಲಿ ಅವರು ಅಣಕವಾಡಿದ್ದರು. ಅಷ್ಟೇ ಅಲ್ಲ, ಸರ್ಜಿಕಲ್ ದಾಳಿ ನಡೆದೇ ಇಲ್ಲ ಎಂದಿತ್ತು. ಆದರೆ ಈಗ ನಾವೂ ಮಾಡಿದ್ದೇವೆ ಎನ್ನುತ್ತಿದೆ. ಆದರೆ ಜನರಿಗೆ ನನ್ನ ಮೇಲೆ ವಿಶ್ವಾಸವಿತ್ತು. ನನ್ನನ್ನು ಜನರು ಬೆಂಬಲಿಸಿದರು ಎಂದು ಮೋದಿ ಹೇಳಿದ್ದಾರೆ.
ಇದೇ ಕಾಂಗ್ರೆಸ್ ನಾಯಕರು ಹಿಂದೆ ಸೇನೆ ಮುಖ್ಯಸ್ಥರನ್ನು ಬೀದಿ ಬದಿಯ ಗೂಂಡಾ ಎಂದಿದ್ದರು. ವಾಯುಪಡೆ ಮುಖ್ಯಸ್ಥರನ್ನು ಸುಳ್ಳುಗಾರ ಎಂದಿದ್ದರು. ನಮ್ಮ ಯೋಧರು ನೆರೆ ದೇಶಕ್ಕೆ ಹೋಗಿ ಉಗ್ರರನ್ನು ಸದೆಬಡಿದು ಬಂದಿದ್ದರೆ, ಅದಕ್ಕೆ ಸಾಕ್ಷ್ಯ ಕೊಡಿ ಎಂದು ಕೇಳುತ್ತಿದೆ ಎಂದು ಟೀಕಿಸಿದ್ದಾರೆ.
ರಾಜಸ್ಥಾನ ಬಿಜೆಪಿಯನ್ನು ಬಯಸುತ್ತಿದೆ: ಶುಕ್ರವಾರ ರಾಜಸ್ಥಾನಕ್ಕೆ ತೆರಳುವ ಮುನ್ನ ವೀಡಿಯೋವೊಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಪ್ರಧಾನಿ ಮೋದಿ, ರಾಜ್ಯಕ್ಕೆ ಬಿಜೆಪಿ ಅಗತ್ಯವಿದೆ ಎಂದಿದ್ದಾರೆ. ಜನರು ತಮ್ಮ ಮೊಬೈಲ್ನ ಫ್ಲಾಶ್‌ಲೈಟ್ ತೋರಿಸುತ್ತಿರುವ ವೀಡಿಯೋವನ್ನು ಅವರು ಹಂಚಿಕೊಂಡಿದ್ದಾರೆ.
ಹಾವಿನ ಪ್ರಸ್ತಾಪ: ಪ್ರಿಯಾಂಕಾ ರಾಯ್ ಬರೇಲಿಯಲ್ಲಿ ಹಾವಾಡಿಗರ ಜೊತೆ ಮಾತನಾಡುತ್ತಾ ಹಾವನ್ನು ಕೈಯಲ್ಲಿ ಹಿಡಿದ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದು, ನೆಹರು ಕೂಡ ಹಾವಿನ ನೃತ್ಯ ಆನಂದಿಸುತ್ತಿದ್ದರು. ಮೂರು ತಲೆಮಾರು ಕಳೆದರೂ ಆ ಕುಟುಂಬ ಅಲ್ಲೇ ಇದೆ. ಆದರೆ ದೇಶ ಸಾಕಷ್ಟು ಮುಂದುವರಿದಿದೆ ಎಂದು ಟೀಕಿಸಿದ್ದಾರೆ.
ಮೋದಿಗೆ ಕಾಂಗ್ರೆಸ್ ತಿರುಗೇಟು
ಯುಪಿಎ ಅವಧಿಯಲ್ಲಿ ನಡೆದ ಸರ್ಜಿಕಲ್ ದಾಳಿಯ ಬಗ್ಗೆ ಅನುಮಾನ ವ್ಯಕ್ತಪಡಿಸುವ ಮೂಲಕ ಪ್ರಧಾನಿ ಮೋದಿ ನಮ್ಮ ಸೇನೆಯ ಸಾಮರ್ಥ್ಯವನ್ನು ಅನುಮಾನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಅಹಮದ್ ಪಟೇಲ್ ಹೇಳಿದ್ದಾರೆ. ನಮ್ಮದು ರಕ್ತ. ನಿಮ್ಮದು ನೀರು ಎಂದು ಮೋದಿ ಹೇಳುತ್ತಿದ್ದಾರೆಯೇ ಎಂದು ಅವರು ಪ್ರಶ್ನಿಸಿದ್ದಾರೆ.
ದೇಶಕ್ಕೆ ಎರಡು ಬಜೆಟ್
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಎರಡು ಬಾರಿ ಬಜೆಟ್ ಮಂಡಿಸಲಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಒಂದು ರಾಷ್ಟ್ರೀಯ ಬಜೆಟ್ ಆಗಿದ್ದರೆ ಇನ್ನೊಂದು ಬಜೆಟ್ ಅನ್ನು ರೈತರಿಗಾಗಿ ಮಂಡಿಸ ಲಾಗುತ್ತದೆ ಎಂದು ರಾಜಸ್ಥಾನದ ಭಾರತ್‌ಪುರದಲ್ಲಿ ರ್ಯಾಲಿಯಲ್ಲಿ ಮಾತನಾಡುತ್ತಾ ಹೇಳಿದ್ದಾರೆ. ರೈತರ ಬಜೆಟ್‌ನಲ್ಲಿ ಕನಿಷ್ಠ ಬೆಂಬಲ ಬೆಲೆ ಯನ್ನು ನಿಗದಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ ರೈತರು ಕೃಷಿ ಸಾಲ ಮರುಪಾವತಿ ಮಾಡದೇ ಜೈಲಿಗೆ ಹೋಗುವುದನ್ನು ತಪ್ಪಿಸುವ ಭರವಸೆಯನ್ನೂ ಅವರು ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರಕಾರವು ಉದ್ಯಮಿಗಳ ಭಾರಿ ಮೊತ್ತದ ಸಾಲ ಮನ್ನಾ ಮಾಡುತ್ತದೆ. ಆದರೆ ರೈತರಿಗೆ ಶಿಕ್ಷೆ ವಿಧಿಸುತ್ತದೆ ಎಂದಿದ್ದಾರೆ. ಇದನ್ನು ತಡೆಯಲು ಹೊಸ ಕಾನೂನು ಜಾರಿಗೆ ತರಲಾಗುತ್ತದೆ. ಯಾವ ರೈತನನ್ನೂ ಜೈಲಿಗೆ ಹಾಕದಂತೆ ತಡೆಯುತ್ತೇವೆ ಎಂದಿದ್ದಾರೆ.
ರೈತರ ಬಜೆಟ್‌ನಲ್ಲಿ ಆಹಾರ ಧಾನ್ಯಗಳ ಬೆಲೆ ನಿಗದಿ, ಶೀತಲೀಕರಣ ಘಟಕ ಸ್ಥಾಪನೆ ಹಾಗೂ ಆಹಾರ ಸಂಸ್ಕರಣೆ ಘಟಕಗಳ ಸ್ಥಾಪನೆಯ ಬಗ್ಗೆ ಪ್ರಸ್ತಾಪಿಸಲಾಗುತ್ತದೆ. ಇದನ್ನು ಸಾಮಾನ್ಯ ಬಜೆಟ್‌ಗೂ ಮೊದಲೇ ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.