ತಜ್ಞ ವೈದ್ಯರಿಲ್ಲದೆ ರೋಗಿಗಳ ಪರದಾಟ!
•ಸುಸಜ್ಜಿತ ಕಟ್ಟಡ ಹೊಂದಿದ್ದರೂ ವೈದ್ಯರ ಕೊರತೆ •ದಿನೇ ದಿನೇ ರೋಗಿಗಳ ಸಂಖ್ಯೆ ಹೆಚ್ಚಳ
Team Udayavani, May 4, 2019, 10:49 AM IST
ಸಿರುಗುಪ್ಪ: ನಗರದಲ್ಲಿರುವ 100 ಹಾಸಿಗೆಗಳ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ.
ಸಿರುಗುಪ್ಪ: ತಾಲೂಕಿನ ಜನರ ಆರೋಗ್ಯ ಕಾಪಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ನಗರದಲ್ಲಿ ಸುಸಜ್ಜಿತ 100 ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯನ್ನು ನಿರ್ಮಿಸಿದೆ. ಆದರೆ ಸೂಕ್ತ ತಜ್ಞ ವೈದ್ಯರಿಲ್ಲದೆ ಆಸ್ಪತ್ರೆಗೆ ಬರುವ ರೋಗಿಗಳು ಪರದಾಡುವಂತಾಗಿದೆ.
100 ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆ ಸುಸಜ್ಜಿತವಾದ ಕಟ್ಟಡ, ಕೊಠಡಿಗಳು, ನವೀಕರಣಗೊಂಡ ಉಪಕರಣಗಳು ಸೇರಿದಂತೆ ಎಲ್ಲಾ ಸೌಲಭ್ಯ ಹೊಂದಿದ್ದು, ಹೈಟೆಕ್ ಆಸ್ಪತ್ರೆಯಂತಿದೆ. ಆದರೆ ಸೂಕ್ತ ತಜ್ಞ ವೈದ್ಯರಿಲ್ಲದೆ, ಈ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿಲ್ಲ.
ರೋಗಿಗಳ ಪರೀಕ್ಷೆಗೆ ಹರಸಾಹಸ: ದಿನದಿಂದ ದಿನಕ್ಕೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಿಂದ ಬರುವ ಹೊರ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಹಾಲಿ ಇರುವ ಎಲುಬು ಮತ್ತು ಕೀಲು ತಜ್ಞರು, ನೇತ್ರ ತಜ್ಞರು, ಕಿವಿ ಮೂಗು ಮತ್ತು ಗಂಟಲು ತಜ್ಞರು, ಸಾಮಾನ್ಯ ವೈದ್ಯಾಧಿಕಾರಿ, ಇಬ್ಬರು ದಂತ ವೈದ್ಯರು ಈ ಪರಿಸ್ಥಿತಿ ನಿಭಾಯಿಸಲು ಹೆಣಗಾಡುವಂತಾಗಿದೆ.
ಮೇಲ್ದರ್ಜೆಗೇರಿದ್ದರೂ ವೈದ್ಯರ ಕೊರತೆ ನೀಗಿಲ್ಲ: ನಗರದಲ್ಲಿ 30 ಹಾಸಿಗೆಯಿದ್ದ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿದ್ದರೂ ಇಲ್ಲಿ ತಜ್ಞ ವೈದ್ಯರ ಕೊರತೆ ನೀಗಿಲ್ಲ. ಇಲ್ಲಿ ಪ್ರಮುಖವಾಗಿ ಅರವಳಿಕೆ ತಜ್ಞರು, ಸ್ತ್ರೀರೋಗ ತಜ್ಞರು, ಚರ್ಮರೋಗ ತಜ್ಞರು, ಹೃದಯರೋಗ ತಜ್ಞರು, ಮಕ್ಕಳ ತಜ್ಞ ವೈದ್ಯರ ಹುದ್ದೆಗಳು ಖಾಲಿ ಇದ್ದು, ಗುತ್ತಿಗೆ ಆಧಾರದ ಮೇಲೆ ಅರವಳಿಕೆ ತಜ್ಞ ವೈದ್ಯ ಡಾ|ಸತೀಶ್, ಚರ್ಮರೋಗ ವೈದ್ಯ ಡಾ| ಹನುಮಂತಪ್ಪ ಸದ್ಯ ಕಾರ್ಯನಿರ್ವಹಿಸುತ್ತಿದ್ದಾರೆ.
ಪ್ರತಿ ತಿಂಗಳು 100ರಿಂದ 110 ಹೆರಿಗೆ: ಪ್ರತಿ ತಿಂಗಳು ಈ ಆಸ್ಪತ್ರೆಯಲ್ಲಿ 100ರಿಂದ 110 ಗರ್ಭಿಣಿಯರು ಹೆರಿಗೆ ಮಾಡಿಸಿಕೊಳ್ಳುತ್ತಿದ್ದಾರೆ. ಶೇ.90ರಷ್ಟು ಸಾಮಾನ್ಯ ಹೆರಿಗೆ, ಶೇ.20ರಷ್ಟು ಸಿಜರಿನ್ ಹೆರಿಗೆಗಳಾಗುತ್ತಿವೆ. ಆದರೆ ಸೂಕ್ತ ಪ್ರಸೂತಿ ತಜ್ಞ ವೈದರು ಇಲ್ಲದೆ ಪರಿತಪಿಸುವಂತಾಗಿದೆ. ಹೆರಿಗೆ ವೇಳೆ ಗರ್ಭಿಣಿಯರಿಗೆ ಅರವಳಿಕೆ ನೀಡಬೇಕಾಗುತ್ತದೆ. ಆದರೆ ಅರವಳಿಕೆ ತಜ್ಞ ವೈದ್ಯರಿಲ್ಲದೆ ಈ ಆಸ್ಪತ್ರೆಯಲ್ಲಿ ತುರ್ತು ಸಂದರ್ಭದಲ್ಲಿ ಹೆರಿಗೆ ಮಾಡಿಸಲು ಆಗದೆ ಬಳ್ಳಾರಿಯಿಂದ ಅರವಳಿಕೆ ತಜ್ಞರನ್ನು ಕರೆಸಿ ಹೆರಿಗೆ ಮಾಡಲಾಗುತ್ತದೆ.
ಸ್ತ್ರೀರೋಗ ತಜ್ಞರೇ ಇಲ್ಲ: ಪ್ರತಿ ಗುರುವಾರ ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಂದ ನೂರಾರು ಗರ್ಭಿಣಿಯರು ಆಸ್ಪತ್ರೆಗೆ ಬರುತ್ತಾರೆ. ಆದರೆ ಇಲ್ಲಿ ಸ್ತ್ರೀರೋಗ ತಜ್ಞರೇ ಇಲ್ಲ. ಇನ್ನು ಇಲ್ಲಿ 21 ನರ್ಸ್‌ಗಳ ಅವಶ್ಯಕತೆ ಇದ್ದು, ಇದರಲ್ಲಿ 9 ಹುದ್ದೆಗಳು ಖಾಲಿ ಇವೆ. ಮಧ್ಯಾಹ್ನ ಮತ್ತು ರಾತ್ರಿ ಸಂದರ್ಭದಲ್ಲಿ ತುರ್ತು ಚಿಕಿತ್ಸೆಗಾಗಿ ಈ ಆಸ್ಪತ್ರೆಗೆ ಬಂದರೆ ಇಲ್ಲಿ ಹೇಳುವವರು, ಕೇಳುವವರು ಯಾರು ಇಲ್ಲವೆಂಬ ಪರಿಸ್ಥಿತಿ ನಿರ್ಮಾಣವಾಗಿದೆ.
ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆ ಅವಲಂಬನೆ: ಇನ್ನು ಮಕ್ಕಳ ತಜ್ಞರಿಲ್ಲದೆ ಇರುವುದರಿಂದ ಈ ಆಸ್ಪತ್ರೆಗೆ ಮಕ್ಕಳನ್ನು ಕರೆದುಕೊಂಡು ಬರುವ ಪೋಷಕರು ತಮ್ಮ ಮಕ್ಕಳಿಗೆ ಸರಿಯಾದ ಚಿಕಿತ್ಸೆ ದೊರೆಯದಿರುವುದರಿಂದ ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಕೊಡಿಸುವುದು ಸಾಮಾನ್ಯವಾಗಿದೆ. ಮಕ್ಕಳ ವೈದ್ಯರನ್ನು ನೇಮಿಸಬೇಕೆಂದು ಸಾರ್ವಜನಿಕರಿಂದ ಸಾಕಷ್ಟು ಹೋರಾಟ ನಡೆಸಿದ್ದರೂ ಅವರ ಕೂಗಿಗೆ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ.
ಕುಡಿಯುವ ನೀರಿಗೂ ಬರ: ಪ್ರತಿನಿತ್ಯ ಆಸ್ಪತ್ರೆಗೆ ಬರುವ ರೋಗಿಗಳಿಗೆ ಶುದ್ಧ ಕುಡಿಯುವ ನೀರನ್ನೊದಗಿಸಲು ಶುದ್ಧೀಕರಣ ಘಟಕ ನಿರ್ಮಿಸಲಾಗಿದೆ. ಆದರೆ ಶುದ್ಧ ನೀರು ಮಾತ್ರ ಈ ಘಟಕದಿಂದ ಬರುತ್ತಿಲ್ಲ. ಇದರಿಂದಾಗಿ ಅಶುದ್ಧ ನೀರನ್ನು ರೋಗಿಗಳು ಕುಡಿಯುತ್ತಿದ್ದಾರೆ. ಒಟ್ಟಾರೆ ಸುಸಜ್ಜಿತ ಕಟ್ಟಡ ಹೊಂದಿರುವ ಈ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ, ‘ನಾವಿಕನಿಲ್ಲದ ದೋಣಿಯಂತಾಗಿದೆ ಇಲ್ಲಿನ ಜನರ ಪರಿಸ್ಥಿತಿ.
ತಾಲೂಕಿನ ಬಹುತೇಕ ಹಳ್ಳಿಗಳ ಜನ ಈ ಆಸ್ಪತ್ರೆಯನ್ನೇ ಆಶ್ರಯಿಸಿದ್ದು, ಸರ್ಕಾರ ತಕ್ಷಣವೇ ಖಾಲಿ ಇರುವ ತಜ್ಞ ವೈದ್ಯರನ್ನು ನೇಮಕ ಮಾಡಿ ರೋಗಿಗಳ ಸಮಸ್ಯೆಗೆ ಮುಕ್ತಿ ಕೊಡಬೇಕಾಗಿದೆ. ಅಲ್ಲದೆ, ಆಸ್ಪತ್ರೆಯ ಮುಂಭಾಗದಲ್ಲಿ ಉದ್ಯಾನವನ್ನು ನಿರ್ಮಿಸುವ ಮೂಲಕ ಜನರ ಆರೋಗ್ಯ ಕಾಪಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
30 ಹಾಸಿಗೆಯಿರುವ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಸೂಕ್ತ ತಜ್ಞ ವೈದ್ಯರು ಮತ್ತು ನರ್ಸ್, ‘ಡಿ’ ದರ್ಜೆ ನೌಕರರ ಕೊರತೆಯಿದ್ದು, ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಹಾಲಿ ಇರುವ ವೈದ್ಯರೇ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಸಿಬ್ಬಂದಿ ಕೊರತೆ ಬಗ್ಗೆ ಇಲಾಖೆ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ.
•ಡಾ| ಡಿ.ಜಗನ್ನಾಥ್,
ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ.
ಬಸವರೆಡ್ಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.