ಘಟಾನುಘಟಿ ನಾಯಕರ ವಾರ್ಡ್‌ ಬದಲಾವಣೆ

ಹರಪನಹಳ್ಳಿ ಪುರಸಭೆಯ 27 ವಾರ್ಡ್‌ಗಳಿಗೆ ಮತದಾನ •ಪರಿಶಿಷ್ಟ ಜಾತಿ ವಾರ್ಡ್‌ಗಳ ಮೇಲೆ ಕಣ್ಣು

Team Udayavani, May 4, 2019, 12:43 PM IST

4-MAY-14

ಹರಪನಹಳ್ಳಿ ಪುರಸಭೆ ಕಾರ್ಯಾಲಯ.

ಹರಪನಹಳ್ಳಿ: ಲೋಕಸಭಾ ಚುನಾವಣೆಗೆ ಹಗಲಿರುಳು ಶ್ರಮ ಹಾಕಿದ್ದ ನಾಯಕರು ವಿಶ್ರಾಂತಿ ಪಡೆಯಬೇಕು ಎನ್ನುವಷ್ಟರಲ್ಲಿಯೇ ಸ್ಥಳೀಯ ಸಂಸ್ಥೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಪುನಃ ಅಖಾಡಕ್ಕೆ ಇಳಿಯಬೇಕಾಗಿದೆ. ಸ್ಥಳೀಯ ಪುರಸಭೆಯ 27 ವಾರ್ಡ್‌ಗಳಿಗೆ ಮೇ29ರಂದು ಚುನಾವಣೆ ನಡೆಯಲಿದ್ದು, ಮೇ 16ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರ ಪರಿಶೀಲನೆ, ಮೇ 20ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 31ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳ ಪುನರ್‌ ವಿಂಗಡನೆಯಲ್ಲಿ ಸ್ಥಾನಗಳ ಹೆಚ್ಚಳವಾಗಿಲ್ಲ. ಆದರೆ ಈ ಬಾರಿ ಮಹಿಳೆಯರಿಗೆ ಶೇ.40ರಷ್ಟು ಮೀಸಲಾತಿ ದೊರಕಿದ್ದು, ಹೆಚ್ಚಿನ ಸ್ಥಾನ ಪಡೆದು ಪಾರುಪತ್ಯ ಮೆರೆದಿದ್ದಾರೆ. ಪುರಸಭೆಯ ಒಟ್ಟು 12 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಕಳೆದ ಬಾರಿ 8 ಸ್ಥಾನ ಮಾತ್ರ ಮಹಿಳೆಯರಿಗೆ ಮೀಸಲಾಗಿದ್ದು, ಆದರೆ ಈ ಬಾರಿ 4 ಸ್ಥಾನ ಹೆಚ್ಚಳವಾಗಿದೆ. ಮಹಿಳೆಯರು ಸೇರಿ ಒಟ್ಟು 14 ಸ್ಥಾನಗಳು ಸಾಮಾನ್ಯ ವರ್ಗಕ್ಕೆ ದೊರಕಿವೆ. 3 ಸ್ಥಾನ ಪರಿಶಿಷ್ಟ ಜಾತಿ, 4 ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿವೆ. ಕಳೆದ ಚುನಾವಣೆಯಲ್ಲಿ ಎಸ್ಸಿ-2, ಎಸ್ಟಿ-4 ಸ್ಥಾನಗಳಿದ್ದು, ಈ ಬಾರಿ ಎಸ್ಸಿ ಮೀಸಲಾತಿಯಲ್ಲಿ 1 ಸ್ಥಾನ ಹೆಚ್ಚಾಗಿದೆ.

2014 ಮಾರ್ಚ್‌ನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ-10, ಕಾಂಗ್ರೆಸ್‌-7, ಬಿಎಸ್ಸಾರ್‌-6, ಜೆಡಿಎಸ್‌-1, ಕೆಜೆಪಿ-1, ಪಕ್ಷೇತರರು-2 ಸದಸ್ಯರು ಆಯ್ಕೆಯಾಗಿದ್ದರು. ಬಿಎಸ್ಸಾರ್‌ ಸದಸ್ಯರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡ ಪರಿಣಾಮ ಕಾಂಗ್ರೆಸ್‌ ಅಧಿಕಾರ ಹಿಡಿದಿತ್ತು. ನಂತರ ಬದಲಾದ ರಾಜಕೀಯ ಚಿತ್ರಣದಲ್ಲಿ ಬಿಜೆಪಿಯಿಂದ ಎಚ್.ಕೆ.ಹಾಲೇಶ್‌ ಅಧ್ಯಕ್ಷರಾಗಿ ಆಡಳಿತಾವಧಿ ಪೂರ್ಣಗೊಳಿಸಿದ್ದಾರೆ. ಕಾಂಗ್ರೆಸ್‌, ಬಿಜೆಪಿ ಪಕ್ಷದಿಂದ ಮೂವರು ಅಧ್ಯಕ್ಷರು, ಒಬ್ಬರು ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದಲ್ಲಿ ಚಿತ್ರಣವೇ ಬದಲಾಗುವ ಸಾಧ್ಯತೆಯಿದೆ.

ಸದ್ಯ ಪುರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾತಿ ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಎಲ್ಲರ ಕಣ್ಣು ಎಸ್ಸಿ ವಾರ್ಡ್‌ಗಳ ಬಿದ್ದಿದೆ. ಪಟ್ಟಣದಲ್ಲಿ ತಮ್ಮ ತಮ್ಮ ವಾರ್ಡ್‌ಗಳಲ್ಲಿ ಹಿಡಿತ ಸಾಧಿಸಿದ ಘಟಾನುಘಟಿ ನಾಯಕರ ವಾರ್ಡ್‌ಗಳ ಮೀಸಲಾತಿ ಬದಲಾವಣೆ ಆಗಿರುವುದರಿಂದ ಅನ್ಯ ವಾರ್ಡ್‌ಗಳತ್ತ ಮುಖ ಮಾಡಬೇಕಾದ ಅನಿವಾರ್ಯತೆ ಎದುರಾಗಿದ್ದು, ರಾಜಕಾರಣದಲ್ಲಿ ಸಂಚಲನ ಉಂಟು ಮಾಡಿದೆ. ಕಳೆದ ಚುನಾವಣೆಯಲ್ಲಿ ವಾರ್ಡ್‌ ನಂ.22ರಲ್ಲಿ ಪರಿಶಿಷ್ಟ ಪಂಗಡದ ಮೀಸಲಾತಿಯಲ್ಲಿ ಗೆಲುವು ಸಾಧಿಸಿದ್ದ ಪುರಸಭೆಯ ಹಾಲಿ ಅಧ್ಯಕ್ಷ ಎಚ್.ಕೆ.ಹಾಲೇಶ್‌ ಅವರ ವಾರ್ಡ್‌ ಇದೀಗ ಪರಿಶಿಷ್ಟ ಪಂಗಡ ಮಹಿಳೆಗೆ ಮೀಸಲಾಗಿದೆ. ಹೀಗಾಗಿ ಗಾಜಿಕೇರಿ ವಾರ್ಡ್‌ ನಂ.27ರಲ್ಲಿ ಅಥವಾ ತೆಕ್ಕದಗರಡಿಕೇರಿ ವಾರ್ಡ್‌ ನಂ.25ರಲ್ಲಿ ಸ್ಪರ್ಧೆ ಮಾಡುವ ನಿರೀಕ್ಷೆಯಿದೆ.

ಗಾಜಿಕೇರಿ ವಾರ್ಡ್‌ ನಂ.27ರಲ್ಲಿ ಪರಿಶಿಷ್ಟ ಜಾತಿ ಮೀಸಲಾತಿಯಲ್ಲಿ ಪ್ರಥಮ ಬಾರಿಗೆ ಬಿಎಸ್ಸಾರ್‌ ಪಕ್ಷದಿಂದ ಎಚ್.ಕೊಟ್ರೇಶ್‌ ಗೆಲುವು ಸಾಧಿಸಿದ್ದರು. 1 ಬಾರಿ ಪುರಸಭೆ ಅಧ್ಯಕ್ಷರು, 3 ಬಾರಿ ಸದಸ್ಯರಾಗಿದ್ದ ಕಾಂಗ್ರೆಸ್‌ ಜಿಲ್ಲಾ ಕಾರ್ಯದರ್ಶಿ ಎಂ.ಪಿ.ಅಂಜಿನಪ್ಪ ಅವರು ಕೊಟ್ರೇಶ್‌ ವಿರುದ್ಧ ಪರಾಭಗೊಂಡಿದ್ದರು. ಸದ್ಯ ಈ ವಾರ್ಡ್‌ ಪರಿಶಿಷ್ಟ ಜಾತಿಯಿಂದ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವುದರಿಂದ ಎಂ.ವಿ. ಅಂಜಿನಪ್ಪ ಅವರು ಶೀಲಾರಗೇರಿ ವಾರ್ಡ್‌ ನಂ.10ರಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ.

ವಾರ್ಡ್‌ ನಂ.23ರ ಕೊರವರಗೇರಿಯ ಸಾಮಾನ್ಯ ವರ್ಗ ಮೀಸಲಾತಿಯಲ್ಲಿ 1 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಪರಿಶಿಷ್ಟ ಪಂಗಡದ ಸದಸ್ಯ ಅರುಣ ಪೂಜಾರ ಅವರ ಹಾಲಿ ವಾರ್ಡ್‌ ಪರಿಶಿಷ್ಟ ಪಂಗಡ ಮಹಿಳೆಗೆ ಮೀಸಲಾಗಿದೆ. ಹಾಗಾಗಿ ತೆಕ್ಕದಗರಡಿಕೇರಿ ವಾರ್ಡ್‌ ನಂ.25ರಲ್ಲಿ ಸ್ಪರ್ಧೆಗಿಳಿಯುವ ಸಾಧ್ಯತೆಯಿದೆ. ಗುಂಡಿನಕೇರಿ ವಾರ್ಡ್‌ ನಂ.24ರಲ್ಲಿ ಸಾಮಾನ್ಯ ಕ್ಷೇತ್ರದಿಂದ 2 ಬಾರಿ ಗೆಲುವು ಸಾಧಿಸಿದ್ದ ಸದಸ್ಯ ಜಾವೂರ್‌ ಅವರ ಕ್ಷೇತ್ರ ಈ ಬಾರಿ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಬಾಣಗಾರಪೇಟೆ ವಾರ್ಡ್‌ ನಂ.6 ಹಿಂದುಳಿದ ವರ್ಗ(ಎ) ಮೀಸಲಾತಿಯಲ್ಲಿ ಗೆಲುವು ಪಡೆದಿದ್ದ ಪುರಸಭೆ ಮಾಜಿ ಅಧ್ಯಕ್ಷ, ಬಿಜೆಪಿ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎ.ಮಹಬೂಬ್‌ಸಾಬ್‌ ಅವರ ವಾರ್ಡ್‌ ಈ ಬಾರಿ ಪರಿಶಿಷ್ಟ ಪಂಗಡ ಮಹಿಳೆ ಮೀಸಲಾಗಿರುವುದರಿಂದ ವಾರ್ಡ್‌ ಬದಲಾವಣೆ ಅನಿವಾರ್ಯವಾಗಿದೆ. ಮೀಸಲಾತಿ ಬದಲಾವಣೆ ಪರಿಣಾಮ ಘಟಾನುಘಟಿ ನಾಯಕರು ವಾರ್ಡ್‌ಗಳನ್ನು ಬದಲಾಯಿಸುವ ಅನಿವಾರ್ಯತೆ ಬಂದಿದೆ. ಕಳೆದ ಬಾರಿಯ ಮೀಸಲಾತಿ ಪರಿಣಾಮ ಸ್ಪರ್ಧಿಸಲು ಅವಕಾಶ ಸಿಗದಿರುವ ಮತ್ತು ಪ್ರಥಮ ಬಾರಿಗೆ ಚುನಾವಣೆಗೆ ಸ್ಪರ್ಧಿಸಲು ಅನೇಕರಿಗೆ ಅವಕಾಶದ ಬಾಗಿಲು ತೆರೆದುಕೊಂಡಿದೆ ಎಂದೇ ಹೇಳಲಾಗುತ್ತಿದೆ.

ಎಸ್‌.ಎನ್‌.ಕುಮಾರ್‌ ಪುಣಬಗಟ್ಟಿ

ಟಾಪ್ ನ್ಯೂಸ್

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.