ಅತೀ ಹೆಚ್ಚು ಮತದಾನ-ಯಾರಿಗೆ ವರದಾನ?

ಎಲ್ಲ ಚುನಾವಣೆಯಲ್ಲೂ ಕಾಂಗ್ರೆಸ್‌ಗೆ ಲೀಡ್‌ •ಈ ಬಾರಿ ಕಾಂಗ್ರೆಸ್‌ ಲೀಡ್‌ಗೆ ಬಿಜೆಪಿ ಬ್ರೇಕ್‌?

Team Udayavani, May 4, 2019, 12:57 PM IST

4-MAY-15

ಹಗರಿಬೊಮ್ಮನಹಳ್ಳಿ ಕ್ಷೇತ್ರ

ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಚಿತ್ತ ಫಲಿತಾಂಶದತ್ತ ನೆಟ್ಟಿದೆ.

ಮಾಜಿ-ಹಾಲಿ ಶಾಸಕರ ನಡುವಿನ ಅಸಮಾಧಾನದ ನಡುವೆಯೇ ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲೇ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇ.73.31ರಷ್ಟು ಮತದಾನವಾಗಿದ್ದು, ಕಳೆದ ಚುನಾವಣೆಯಂತೆ ಲೀಡ್‌ ದೊರೆಯಲಿದೆ ಎಂಬ ನಿರೀಕ್ಷೆ ಕಾಂಗ್ರೆಸ್‌ನವರದ್ದಾದರೆ, ಇದಕ್ಕೆ ಬ್ರೇಕ್‌ ಬೀಳಲಿದೆ ಎಂಬುದು ಬಿಜೆಪಿಯವರ ವಿಶ್ವಾಸ.

ಉಲ್ಟಾ ಆಗಿದ್ದ ಫಲಿತಾಂಶ: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಶಾಸಕ ಭೀಮಾನಾಯಕ್‌ ಸತತ ಎರಡನೇ ಬಾರಿಗೆ ಜಯಗಳಿಸಿದ್ದಾರೆ. 2013ರಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಕೇವಲ 125 ಮತಗಳ ಅಂತರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಜಯಗಳಿಸಿದ್ದ ಭೀಮಾನಾಯ್ಕ, 2018ರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಕಣಕ್ಕಿಳಿದರು. ಆರಂಭದಲ್ಲೆಲ್ಲಾ ಬಿಜೆಪಿ ಅಭ್ಯರ್ಥಿ ಗೆಲುವು ಎಂಬ ಮಾತು ಕೇಳಿ ಬಂದಿತ್ತು. ಚುನಾವಣೆಯಲ್ಲೂ ಜಿಲ್ಲೆಯಲ್ಲೇ ಅತಿ ಹೆಚ್ಚು ಶೇ.78.77ರಷ್ಟು ಮತದಾನವಾಗಿತ್ತು. ಹೆಚ್ಚುವರಿ ಮತಗಳು ಬಿಜೆಪಿಗೆ ಪ್ಲಸ್‌ ಆಗಲಿವೆ ಎಂಬ ಮಾತುಗಳು ಕೇಳಿ ಬಂದಿತ್ತಾದರೂ, ಫಲಿತಾಂಶ ಹೊರ ಬಿದ್ದ ಬಳಿಕ ಕಾಂಗ್ರೆಸ್‌ಗೆ ಪ್ಲಸ್‌ ಆಗಿತ್ತು. ಶಾಸಕ ಭೀಮಾನಾಯ್ಕ 7 ಸಾವಿರಕ್ಕೂ ಹೆಚ್ಚು ಮತಗಳ ಅಂತರ ಜಯಗಳಿಸಿದರು. ಈ ಮೂಲಕ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪ್ರಾಬಲ್ಯ ಸಾಧಿಸುವಲ್ಲಿ ಶಕ್ತವಾಯಿತು. ಪರಿಣಾಮ ಕಳೆದ ಲೋಕಸಭೆ ಉಪಚುನಾವಣೆಯಲ್ಲೂ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಲೀಡ್‌ ಲಭಿಸಿದ್ದು, ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಇದೇ ನಿರೀಕ್ಷೆಯಲ್ಲಿದೆ. ಆದರೆ ಕಾಂಗ್ರೆಸ್‌ ಕನಸಿಗೆ ಬಿಜೆಪಿ ಬ್ರೇಕ್‌ ಹಾಕಲಿದೆ ಎಂಬ ಚರ್ಚೆಗಳು ಕ್ಷೇತ್ರದಲ್ಲಿ ನಡೆಯುತ್ತಿದೆ.

ಹಾಲಿ-ಮಾಜಿ ಶಾಸಕರ ಮಧ್ಯೆ ಅಸಮಾಧಾನ: ಈ ಚುನಾವಣೆ ಸಂದರ್ಭದಲ್ಲಿ ಮಾಜಿ ಶಾಸಕ ಸಿರಾಜ್‌ಶೇಖ್‌ ಮತ್ತು ಹಾಲಿ ಶಾಸಕ ಭೀಮಾನಾಯ್ಕ ನಡುವೆ ಅಸಮಾಧಾನಗಳು ಬಯಲಿಗೆ ಬಂದಿತ್ತು. ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಮಾಜಿ ಶಾಸಕ ಶಿರಾಜ್‌ಶೇಖ್‌ಗೆ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದಕ್ಕೆ ಶಾಸಕ ಭೀಮಾನಾಯ್ಕ ಅಸಮಾಧಾನ ವ್ಯಕ್ತಪಡಿಸಿದ್ದರು. ಇದು ಚುನಾವಣೆಯ ಮೇಲೆ ಪರಿಣಾಮ ಬೀರಬಹುದು ಎಂಬ ಮಾತುಗಳು ಕೇಳಿ ಬಂದಿದ್ದು, ಬಿಜೆಪಿಗೆ ಪ್ಲಸ್‌ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಲೀಡ್‌ ಲೆಕ್ಕಾಚಾರ: ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಶೇ.78.77ರಷ್ಟು ಮತದಾನ ವಾಗಿದ್ದು ಕಾಂಗ್ರೆಸ್‌ಗೆ ವರದಾನವಾಗಿತ್ತು. ಇತ್ತೀಚೆಗಷ್ಟೇ ನಡೆದ ಬಳ್ಳಾರಿ ಲೋಕಸಭೆ ಉಪಚುನಾವಣೆಯಲ್ಲಿ ಶೇ.63.80 ರಷ್ಟು ಮತದಾನ ವಾಗಿದ್ದು, ವಿಧಾನಸಭೆ ಚುನಾವಣೆಗಿಂತ ಶೇ.15ರಷ್ಟು ಕಡಿಮೆ ಮತದಾನವಾಗಿತ್ತು. ಆದರೂ, ಕಾಂಗ್ರೆಸ್‌ ಪಕ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಲೀಡ್‌ ಲಭಿಸಿತ್ತು. ಇದೀಗ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ 1,12,078 ಪುರುಷರು, 1,12,104 ಮಹಿಳೆಯರು, 12 ಇತರೆ ಸೇರಿ ಒಟ್ಟು 2,24,210 ಮತದಾರರಿದ್ದು, ಈ ಪೈಕಿ 84377 ಪುರುಷರು, 80114 ಮಹಿಳೆಯರು, 3 ಇತರೆ ಸೇರಿ ಒಟ್ಟು 1,64,494 ಮತದಾರರು ಹಕ್ಕು ಚಲಾಯಿಸಿದ್ದಾರೆ. ಜಿಲ್ಲೆಯಲ್ಲೇ ಅತ್ಯಧಿಕ ಶೇ.73.31ರಷ್ಟು ಮತದಾನವಾಗಿದೆ. ಇದರಿಂದ ಯಾರಿಗೆ ಲೀಡ್‌ ದೊರೆಯಲಿದೆ ಎಂಬುದು ನಿರ್ದಿಷ್ಟವಾಗಿ ಹೇಳಲಾಗದಿದ್ದರೂ, ಕಳೆದ ಉಪಚುನಾವಣೆ, ವಿಧಾನಸಭೆ ಚುನಾವಣೆಗಳಲ್ಲಿ ಹೆಚ್ಚು ಮತದಾನವಾಗಿದ್ದ ಭಾಗದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚು ಮತಗಳು ಲಭಿಸಿದ್ದವು. ಅದರಂತೆ ಸಾರ್ವತ್ರಿಕ ಚುನಾವಣೆ ಯಲ್ಲೂ ಕಾಂಗ್ರೆಸ್‌ಗೆ ಲೀಡ್‌ ದೊರೆಯಲಿದೆ ಎಂದು ಕಾಂಗ್ರೆಸ್‌ ಮುಖಂಡರ ನಿರೀಕ್ಷೆಯಾಗಿದೆ.

ಅಲ್ಲದೇ, ಕೊಟ್ಟೂರು ಭಾಗದಲ್ಲಿ ಈ ಬಾರಿ ಕಡಿಮೆ ಮತದಾನವಾಗಿದ್ದು, ಕಾಂಗ್ರೆಸ್‌ಗೆ ಮೈನಸ್‌ ಆಗಿ ಬಿಜೆಪಿಗೆ ಪ್ಲಸ್‌ ಆಗಲಿದೆ ಎಂದೂ ಹೇಳಲಾಗುತ್ತಿದೆ. ಮೇಲಾಗಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರಮೋದಿಯವರ ಅಲೆ ಹೆಚ್ಚಿನ ಪ್ರಮಾಣದಲ್ಲಿ ಇದೆ. ಹಾಗಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ನಾಗಾಲೋಟಕ್ಕೆ ಈ ಬಾರಿ ಬಿಜೆಪಿ ಬ್ರೇಕ್‌ ಹಾಕುವ ಸಾಧ್ಯತೆಯಿದೆ ಎಂಬುದು ಬಿಜೆಪಿಯವರ ವಿಶ್ವಾಸ.

ಜಾತಿ ಕೈಹಿಡಿದೀತೇ?: ಕ್ಷೇತ್ರದಲ್ಲಿ ಲಿಂಗಾಯತ, ಕುರುಬ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮುಸ್ಲಿಂ ಮತಗಳು ಪ್ರಮುಖ ಪಾತ್ರ ವಹಿಸುತ್ತವೆ. ಕುರುಬ, ಪರಿಶಿಷ್ಟ ಜಾತಿ, ಮುಸ್ಲಿಂ ಮತಗಳು ಕಾಂಗ್ರೆಸ್‌ನ್ನು ಬೆಂಬಲಿಸಲಿವೆ. ಕ್ಷೇತ್ರದ ಬಹುದೊಡ್ಡ ಸಮುದಾಯವಾದ ಲಿಂಗಾಯತ ಮತಗಳು ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಬಿಜೆಪಿಯನ್ನು ಬೆಂಬಲಿಸಿದರೆ, ತಂಬ್ರಹಳ್ಳಿ ಭಾಗ ಸೇರಿ ಕೆಲ ಹಳ್ಳಿಗಳಲ್ಲಿ ಕಾಂಗ್ರೆಸ್‌ನ್ನು ಬೆಂಬಲಿಸಲಿವೆ ಎನ್ನಲಾಗುತ್ತಿದೆ. ಜತೆಗೆ ಎಸ್‌ಟಿ ಮೀಸಲು ಕ್ಷೇತ್ರವಾದ್ದರಿಂದ ವಾಲ್ಮೀಕಿ ಮತಗಳು ವಿಭಜನೆಯಾಗಲಿವೆ. ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು ಬಲಿಷ್ಠವಾಗಿದ್ದು, ಯುವ ಮತದಾರರು ಮೋದಿ ಅಲೆಗೆ ಮನಸೋತಿರುವುದು ಚುನಾವಣೆಯಲ್ಲಿ ನೆರವಾಗುವ ಸಾಧ್ಯತೆಯಿದೆ.

ಅಧ್ಯಕ್ಷರು ಏನಂತಾರೆ?
ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಆದ ಅಭಿವೃದ್ಧಿಕಂಡಿರುವ ಈ ಕ್ಷೇತ್ರದ ಮತದಾರರು ಕಾಂಗ್ರೆಸ್‌ನ್ನು ಬೆಂಬಲಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಕ್ಷೇತ್ರದಲ್ಲಿ ಕೈಗೊಂಡ ನೀರಾವರಿ ಯೋಜನೆಗಳ ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯವಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಹೆಚ್ಚಿನ ಮತಗಳು ಲಭಿಸಲಿದ್ದು, ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌.ಉಗ್ರಪ್ಪನವರ ಗೆಲುವು ನಿಶ್ಚಿತ.
ಸೋಮಲಿಂಗಪ್ಪ,
ಅಧ್ಯಕ್ಷರು, ಬ್ಲಾಕ್‌ ಕಾಂಗ್ರೆಸ್‌, ಹಗರಿಬೊಮ್ಮನಹಳ್ಳಿ

ಬಿಜೆಪಿಗೆ ಈ ಬಾರಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಅತ್ಯಧಿಕ ಮತಗಳ ಮುನ್ನಡೆ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಲೆ ಬಲವಾಗಿದ್ದು, ಬಳ್ಳಾರಿ ಕ್ಷೇತ್ರದಲ್ಲಿ ವೈ.ದೇವೆಂದ್ರಪ್ಪನವರ ಗೆಲುವನ್ನು ಯಾವುದೇ ಕಾರಣಗಳಿಂದ ತಪ್ಪಿಸಲಾಗುವುದಿಲ್ಲ.
ಜೆ.ಬಿ.ಶರಣಪ್ಪ,
ಪ್ರಧಾನ ಕಾರ್ಯದರ್ಶಿ, ಬಿಜೆಪಿ ಮಂಡಲ, ಹಗರಿಬೊಮ್ಮನಹಳ್ಳಿ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.