ಗಡಿಬಿಡಿಯ ಮಾಘಸ್ನಾನವಾದ ಸ್ಥಳೀಯ ಸಂಸ್ಥೆಗಳ ಚುನಾವಣೆ

ದಿಢೀರ್‌ ಚುನಾವಣಾ ಘೋಷಣೆಗೆ ಪಕ್ಷಗಳು ತಬ್ಬಿಬ್ಬು

Team Udayavani, May 4, 2019, 1:28 PM IST

4-MAY-18

ಸಾಗರ: ಕಾಂಗ್ರೆಸ್‌ ಹಾಗೂ ಬಿಜೆಪಿ ಸಾಗರ ನಗರಸಭೆಯ ಆಡಳಿತ ಚುಕ್ಕಾಣಿ ಹಿಡಿಯುವ ಆತುರದಲ್ಲಿವೆ

ಸಾಗರ: ಸಾಗರ ನಗರಸಭೆಯ 31 ವಾರ್ಡ್‌ ಗಳಿಗೆ ಮೇ 29ರಂದು ಚುನಾವಣೆ ದಿನಾಂಕ ಘೋಷಣೆಯಾಗಿರುವುದು ರಾಜಕೀಯ ಪಕ್ಷಗಳಿಗೆ ಅನಿರೀಕ್ಷಿತವಾಗಿದ್ದು, ಅವು ತಬ್ಬಿಬ್ಟಾಗಿವೆ. ಪ್ರಮುಖವಾಗಿ ಸಾಗರದಲ್ಲಿ ಕಾಣಿಸಿಕೊಳ್ಳುವ ಕಾಂಗ್ರೆಸ್‌ ಹಾಗೂ ಬಿಜೆಪಿಗಳೆರಡೂ ಪಕ್ಷಕ್ಕೆ ಚುನಾವಣೆ ತುಸು ವಿಳಂಬವಾಗಿ ನಡೆದರೂ ಒಳ್ಳೆಯದು ಎಂಬ ಮನಃಸ್ಥಿತಿಯಲ್ಲಿಯೇ ಇದ್ದಿದ್ದರಿಂದ ಈ ಚುನಾವಣೆ ಗಡಿಬಿಡಿಯ ಮಾಘಸ್ನಾನದಂತಾಗಿದೆ.

ನಗರ ವ್ಯಾಪ್ತಿಯಲ್ಲಿ ಒಟ್ಟು 31 ವಾರ್ಡ್‌ಗಳಿವೆ. ಸ್ಥಳೀಯ ಸಂಸ್ಥೆಗಳ ವಾರ್ಡ್‌ ಮೀಸಲಾತಿ ವಿವಾದ ರಾಜ್ಯದ ಹೈಕೋರ್ಟ್‌ ಮೆಟ್ಟಿಲು ಏರಿರುವುದರಿಂದ ಅದು ಬಗೆಹರಿಯುವವರೆಗೂ ಚುನಾವಣೆ ದಿನಾಂಕ ಪ್ರಕಟವಾಗುವುದಿಲ್ಲ ಎಂಬ ನಿರೀಕ್ಷೆಯಲ್ಲಿದ್ದ ರಾಜಕೀಯ ಪಕ್ಷಗಳ ಪ್ರಮುಖರಿಗೆ ದಿಢೀರನೆ ಚುನಾವಣೆ ದಿನಾಂಕ ಪ್ರಕಟವಾಗಿರುವುದು ಅಚ್ಚರಿ ಮೂಡಿಸಿದೆ.ಮೇ 29ರಂದು ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಮೇ 9ರಂದು ಜಿಲ್ಲಾಧಿಕಾರಿ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಮೇ 20 ಕೊನೆಯ ದಿನ. ಮೇ 29ಕ್ಕೆ ಮತದಾನ ನಡೆದರೆ, 31ರಂದು ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೇ 23ರವರೆಗೆ ನೀತಿಸಂಹಿತೆಯ ಪಾಶದಲ್ಲಿರುವ ಆಡಳಿತಕ್ಕೆ, ಈ ಸಂಹಿತೆ ಮತ್ತೂ ಒಂದು ವಾರ ಮುಂದುವರಿಯಲಿದೆ.

ನೀತಿಸಂಹಿತೆಯ ಸಂಕಷ್ಟ: ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ 24, ಬಿಜೆಪಿ 4, ಜೆಡಿಎಸ್‌ 1, ಕೆಜೆಪಿ 1 ಗೆದ್ದಿದ್ದವು. ಒಂದು ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದರು. ನಂತರ ನಡೆದ ರಾಜಕೀಯ ಸಮೀಕರಣಗಳಲ್ಲಿ ಪಕ್ಷೇತರ ಕಾಂಗ್ರೆಸ್‌ ಜೊತೆ ಗುರುತಿಸಿಕೊಂಡಿದ್ದರೆ ಜೆಡಿಎಸ್‌ನಿಂದ ಗೆದ್ದಿದ್ದ ಎಸ್‌.ಎಲ್.ಮಂಜುನಾಥ್‌ ಬಿಜೆಪಿ ಪಾಲಾಗಿದ್ದರು. ಆದರೆ ಬಿಜೆಪಿಯಲ್ಲಿದ್ದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಕಾಂಗ್ರೆಸ್‌ ಸೇರಿದ್ದರೂ ಬಿಜೆಪಿ ನಗರಸಭೆ ಸದಸ್ಯರು ಕಾಂಗ್ರೆಸ್‌ ಕಡೆಗೆ ಹೋಗದ ವಿದ್ಯಮಾನಕ್ಕೂ ಸಾಗರ ಸಾಕ್ಷಿಯಾಗಿತ್ತು.

ಅಧ್ಯಕ್ಷ ಸ್ಥಾನದ ಪೈಪೋಟಿ ಹಾಗೂ ಹಣ ಮಾಡುವ ದಂಧೆಗೆ ಆಡಳಿತ ಕಾಂಗ್ರೆಸ್‌ ಮಗ್ನರಾಗಿದ್ದ ಹಿನ್ನೆಲೆಯಲ್ಲಿ ನಗರದ ಆಡಳಿತ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿತ್ತು ಎಂಬ ಆಕ್ರೋಶ ಜನರಲ್ಲಿದೆ. ಕಳೆದ 5 ವರ್ಷಗಳ ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿನ ವೈಫಲ್ಯಗಳನ್ನು ಎತ್ತಿ ತೋರಿಸಲು ಬಿಜೆಪಿ ಸಿದ್ಧವಾಗಿದೆ. ಚುನಾವಣಾ ನೀತಿ ಸಂಹಿತೆಯ ಸಂಕಷ್ಟ ಎದುರಾಗದೆ ಲೋಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯ ಸರ್ಕಾರದ ಅನುದಾನಗಳನ್ನು ನಗರಕ್ಕೆ ಹರಿದುಬಂದಿರುವ ಸುದ್ದಿ, ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ಮೊದಲಾದ ಕಾರ್ಯಕ್ರಮಗಳ ಮೂಲಕ ಜನರ ಕಹಿ ಭಾವನೆಯನ್ನು ತೊಡೆದುಹಾಕಿ ಮತ್ತೆ ಆಡಳಿತ ಗದ್ದುಗೆ ಏರಬಹುದು ಎಂದು ಕಾಂಗ್ರೆಸ್‌ ಆಶಿಸಿತ್ತು.

ಪಕ್ಷದ ನೂತನ ತಾಲೂಕು ಅಧ್ಯಕ್ಷ ಬಿ.ಆರ್‌. ಜಯಂತ್‌ ಅವರ ನೇತೃತ್ವ ಹಾಗೂ ಕಾಂಗ್ರೆಸ್‌ ನಗರ ಘಟಕದ ಅಧ್ಯಕ್ಷ ತಶ್ರೀಫ್‌ ಇಬ್ರಾಹಿಂ ಅವರ ಉದ್ಯಮ ಸದೃಶ ನಿರ್ವಹಣೆ ಪಕ್ಷಕ್ಕೆ ಅನುಕೂಲವಾಗಬಹುದು ಎಂಬ ನಿರೀಕ್ಷೆ ಆ ಪಕ್ಷಕ್ಕಿತ್ತು. ದಿಢೀರ್‌ ಚುನಾವಣಾ ಘೋಷಣೆ ತಂತ್ರಗಾರಿಕೆ ಬಗ್ಗೆಯೇ ಕಾಂಗ್ರೆಸ್‌ ಮತ್ತೂಮ್ಮೆ ಯೋಚಿಸುವಂತೆ ಮಾಡಿದೆ. ಐದು ವರ್ಷಗಳ ಆಡಳಿತದಲ್ಲಿ ಗಣಾಧೀಶ್‌, ಎನ್‌. ಲಲಿತಮ್ಮ, ಉಷಾ ಎಸ್‌.ಎನ್‌., ಬಿ.ಬಿ. ಫಸಿಹಾ ಹಾಗೂ ವೀಣಾ ಪರಮೇಶ್ವರ್‌ ಅವರನ್ನು ಅಧ್ಯಕ್ಷರನ್ನಾಗಿಸಲು ತೋರಿದ ತರಾತುರಿಯನ್ನು ಕಾಂಗ್ರೆಸ್‌ ಆಡಳಿತದಲ್ಲಿ ತೋರಿಸಲಿಲ್ಲ ಎಂದೇ ಜನ ಆರೋಪಿಸುತ್ತಾರೆ.

ಪಾಪಪ್ರಜ್ಞೆಯಿಂದ ಪ್ರತಿಭಟನೆಗಿಳಿಯದ ಬಿಜೆಪಿ!: ಆಡಳಿತ ಕಾಂಗ್ರೆಸ್‌ ಪಕ್ಷ ಆಡಳಿತದಲ್ಲಿ ಚುರುಕು ತೋರದ ಸಂದರ್ಭದಲ್ಲಿ ಅದನ್ನು ಧರಣಿ, ಪ್ರತಿಭಟನೆ ಮೊದಲಾದವುಗಳ ಮೂಲಕ ಜನರ ಮುಂದಿಡಬೇಕಾಗಿದ್ದ ಬಿಜೆಪಿ ಹಿಂದಿನ ಐದು ವರ್ಷಗಳ ತನ್ನ ಆಡಳಿತದ ಪಾಪಪ್ರಜ್ಞೆಯಿಂದ ಅಂತಹ ಕ್ರಮಕ್ಕೆ ಮುಂದಾಗಲೇ ಇಲ್ಲ ಎಂಬ ವ್ಯಂಗ್ಯದ ಮಾತು ಕೂಡ ಕೇಳಿಬರುತ್ತಿದೆ. ವಾಸ್ತವವಾಗಿ ಹಿಂದಿನ ಅವಯಲ್ಲಿ ಆಡಳಿತ ನಡೆಸಿದ ಬಿಜೆಪಿಯ ವಿರುದ್ಧದ ಅಲೆ ಕೂಡ ಕಾಂಗ್ರೆಸ್‌ ಮುನ್ನಡೆಗೆ ಕಾರಣವಾಗಿತ್ತು.

ಜನರಿಗೆ ಪರ್ಯಾಯಗಳೇ ಇಲ್ಲದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಆಡಳಿತದಿಂದ ಜನ ರೋಸಿ ಹೋಗುತ್ತಿರುವಾಗ ತಾನೇ ಮುಂದಿನ ಆಡಳಿತ ವಹಿಸಿಕೊಳ್ಳುವಂತಾಗುವುದು ನಿಶ್ಚಿತವಾದಾಗ ಹೆಚ್ಚಿನ ಶ್ರಮ ಏಕೆ ಎಂಬ ಆಲೋಚನೆಯೂ ಆ ಪಕ್ಷದಲ್ಲಿ ಸುಳಿದಾಡಿರಬಹುದು. ಸಾಗರ ನಗರದಲ್ಲಿ ಜೆಡಿಎಸ್‌ನ ಪ್ರಭಾವ ಒಂದು ಸ್ಥಾನಕ್ಕೆ, ಅದೂ ಜಾತಿ ಆಧಾರಿತವಾಗಿ ಸೀಮಿತವಾದ ಹಿನ್ನೆಲೆಯಲ್ಲಿ ಆ ಪಕ್ಷ ಗಂಭೀರ ಸ್ಪರ್ಧೆಯಲ್ಲಿಲ್ಲ ಎಂದೇ ಹೇಳಬೇಕಾಗಿದೆ.

ಈ ಬಾರಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ತೀವ್ರ ಹಣಾಹಣಿ ನಡೆಯುವುದು ಖಚಿತವಾಗಿದೆ. ಕಳೆದ ಐದು ವರ್ಷಗಳಲ್ಲಿ ತಾಲೂಕಿನ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರನ್ನು ಸೋಲಿಸುವ ಮೂಲಕ ಬಿಜೆಪಿ ತನ್ನ ಪ್ರಾಬಲ್ಯ ಮೆರೆದಿದೆ. ಶಾಸಕ ಎಚ್. ಹಾಲಪ್ಪ ನಗರಸಭೆಯ ಸಾಮಾನ್ಯ ಸಭೆಗಳಿಗೆ ಹಾಜರಾಗುವ ಹಾಗೂ ನಗರಸಭೆ ಆವರಣದಲ್ಲಿಯೇ ತಮ್ಮ ಶಾಸಕ ಕಚೇರಿ ತೆರೆಯುವ ಮೂಲಕ ನಗರಸಭೆ ಆಡಳಿತದ ಮೇಲೆ ಹಿಡಿತ ಸಾಧಿಸಬೇಕು ಎಂಬ ಇಂಗಿತವನ್ನು ಪರೋಕ್ಷವಾಗಿ ಈಗಾಗಲೇ ವ್ಯಕ್ತಪಡಿಸಿದ್ದಾರೆ.

ಬೇಳೂರು ರಾಜಕೀಯ ಅಸ್ತಿತ್ವದ ಪ್ರಶ್ನೆ
ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಚುನಾವಣಾ ರಾಜಕಾರಣಕ್ಕೆ ಖ್ಯಾತರು. ಆದರೆ ಅವರಿಗೆ ಇತ್ತೀಚಿನ ವರ್ಷಗಳಲ್ಲಿ ಪದೇ ಪದೆ ಹಿನ್ನೆಲೆಯಾಗುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ಸಿಗದು ಎಂಬ ಸುದ್ದಿ ಹೊರಟು ಅವರು ಸಾಗರದ ಕಾರ್ಯಕರ್ತರ ಸಭೆ ಕರೆದಾಗ ದೊಡ್ಡ ಸಂಖ್ಯೆಯಲ್ಲಿ ನಗರಸಭೆ ವ್ಯಾಪ್ತಿಯ ಬಿಜೆಪಿ ಪ್ರಮುಖರು ಅವರನ್ನು ಬೆಂಬಲಿಸಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಅವರು ಕಾಂಗ್ರೆಸ್‌ ಕಡೆ ಬೆಂಬಲ ವ್ಯಕ್ತಪಡಿಸಿದಾಗ ಅನಿವಾರ್ಯವಾಗಿ ಬಿಜೆಪಿಗೆ ಮರಳಿರುವ ಆ ಪ್ರಮುಖರ ಟಿಕೆಟ್ ಆಕಾಂಕ್ಷೆಗೆ ಶಾಸಕ ಹಾಲಪ್ಪ ಬಳಗದಿಂದ ಕೊಡಲಿ ಏಟು ಬೀಳುತ್ತದೆಯೇ ಎಂಬುದು ಕುತೂಹಲಕಾರಿ ಅಂಶ. ತಮ್ಮ ರಾಜಕೀಯ ಶಕ್ತಿ ವೃದ್ಧಿಸಿಕೊಳ್ಳಲು ಬೇಳೂರು ಅವರಿಗೆ ನಗರಸಭೆ ಚುನಾವಣೆ ಕೊನೆಯ ಅವಕಾಶವನ್ನು ಕಲ್ಪಿಸಿದೆ ಎಂಬ ಪ್ರತಿಪಾದನೆಯೂ ಕೇಳಿಬಂದಿದೆ. ಎರಡೂ ಪಕ್ಷಗಳಲ್ಲಿ ವಾರ್ಡ್‌ಗಳಲ್ಲಿ ಸ್ಪರ್ಧಿಸುವ ಮೂಲಕ ಪಕ್ಷದ ಅಧಿಕಾರ ವ್ಯಾಪ್ತಿಯಲ್ಲಿ ತಮ್ಮ ರಾಜಕೀಯ ಶಕ್ತಿ ಹೆಚ್ಚಿಸಿಕೊಳ್ಳಲು ಬಯಸಿರುವವರು ಹೆಚ್ಚುತ್ತಿದ್ದಾರೆ. ಇದರಿಂದ ಅನೇಕ ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಟಿಕೆಟ್ ಪಡೆಯಲು ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು, ಎರಡೂ ಪಕ್ಷಗಳಲ್ಲೂ ಭಿನ್ನಮತ, ಬಂಡಾಯ ಎದುರಿಸಬೇಕಾದ ಅನಿವಾರ್ಯ ಭೀತಿ ಕಾಡುತ್ತಿದೆ. ನಗರದ ಮಟ್ಟಿಗೆ ಸಣ್ಣ ಶಕ್ತಿಯಾದ ಜೆಡಿಎಸ್‌ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಳ್ಳುತ್ತದೆಯೇ ಎಂಬುದನ್ನು ಕೂಡ ಕಾದು ನೋಡಬೇಕಿದೆ.

ಟಾಪ್ ನ್ಯೂಸ್

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.