ನಗರಸಭೆ ವಾಣಿಜ್ಯ ಮಳಿಗೆಗಳ ಟೆಂಡರ್‌ಗೆ ಆಗ್ರಹ


Team Udayavani, May 4, 2019, 1:53 PM IST

bel-4

ಗದಗ: ಗದಗ-ಬೆಟಗೇರಿ ನಗರಸಭೆ ಮಾಲೀಕತ್ವದಲ್ಲಿ ಅವಳಿ ನಗರದಲ್ಲಿರುವ ವಾಣಿಜ್ಯ ಮಳಿಗೆಗಳನ್ನು ಬಹಿರಂಗ ಹರಾಜು ಮೂಲಕ ವಿತರಣೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಮಹಾತ್ಮಗಾಂಧಿ ವೃತ್ತದಿಂದ ನಗರಸಭೆವರೆಗೆ ಪ್ರತಿಭಟನೆ ನಡೆಸಿ, ವಾಣಿಜ್ಯ ಮಳಿಗೆಗಳ ಹಂಚಿಕೆಯಲ್ಲಿ ಕಾನೂನು ಗಾಳಿಗೆ ತೂರುವ ನಗರಸಭೆ ಹಾಗೂ ಜಿಲ್ಲಾಡಳಿತಕ್ಕೆ ಧಿಕ್ಕಾರ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಸುಮಾರು 320ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳಿವೆ. ಅವುಗಳನ್ನು 25-30 ವರ್ಷಗಳ ಹಿಂದೆ ಬಹಿರಂಗ ಹರಾಜು ಮೂಲಕ ವಿತರಿಸಲಾಗಿದೆ. ಆನಂತರ ಕಾಲಕಾಲಕ್ಕೆ ಟೆಂಡರ್‌ ಕರೆಯದೇ, ಲೀಸ್‌ ಅಥವಾ ಬಾಡಿಗೆಯನ್ನು ಮುಂದುವರಿಸಲಾಗಿದೆ ಎಂದು ದೂರಿದರು.

30 ವರ್ಷದ ಹಿಂದೆ ವಾಣಿಜ್ಯ ಮಳಿಗೆಗಳಿಗೆ 200ರಿಂದ 500 ರೂ. ಬಾಡಿಗೆ ನಿಗದಿಪಡಿಸಿದೆ. ಆದರೆ, ಸದ್ಯ ಮಾರುಕಟ್ಟೆಯಲ್ಲಿ ಮಳಿಗೆಯೊಂದಕ್ಕೆ ಕನಿಷ್ಠ 2000 ರಿಂದ 6000 ರೂ. ಬಾಡಿಗೆ ಇದೆ. ಅಲ್ಲದೇ, 30 ವರ್ಷಗಳ ಹಿಂದೆ ಹರಾಜು ಮೂಲಕ ಮಳಿಗೆ ಪಡೆದವರು, ಅಕ್ರಮವಾಗಿ ಮತ್ತೂಬ್ಬರಿಗೆ ದುಪ್ಪಟ್ಟು ಬೆಲೆಗೆ ಬಾಡಿಗೆ ನೀಡಿ, ಹಣ ಜೇಬಿಗಿಳಿಸುತ್ತಿದ್ದಾರೆ. ಈ ಬಗ್ಗೆ ಸ್ಥಳೀಯ ನಗರಸಭೆ ಅಧಿಕಾರಿಗಳು ಕಂಡೂ ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು.

ನಗರಸಭೆ ವಾಣಿಜ್ಯ ಮಳಿಗೆಗಳನ್ನು ಕಾಲಕಾಲಕ್ಕೆ ಟೆಂಡರ್‌ ಮೂಲಕ ಹಂಚಿಕೆ ಮಾಡಬೇಕು ಎಂದು ಕಾನೂನುಗಳಿದ್ದರೂ ಅಧಿಕಾರಿಗಳು ಅದನ್ನು ಪಾಲಿಸುತ್ತಿಲ್ಲ ಎಂದು ದೂರಿದ ಪ್ರತಿಭಟನಾಕಾರರು, ಈ ಕುರಿತು ಜಿಲ್ಲಾಡಳಿತ ಗಮನ ಹರಿಸಿ ನಗರಸಭೆಯ ಎಲ್ಲ ವಾಣಿಜ್ಯ ಮಳಿಗೆಗಳನ್ನು ಹರಾಜು ಮೂಲಕ ಹಂಚಿಕೆ ಮಾಡಬೇಕು. ಈ ಮೂಲಕ ನವೋದ್ಯಮಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಅದರೊಂದಿಗೆ ನಗರಸಭೆ ವ್ಯಾಪ್ತಿಯ ಹಲವು ಉದ್ಯಾನಗಳು ನಿರ್ವಹಣೆ ಇಲ್ಲದೇ ಅನೈತಿಕ ಚಟುವಟಿಕೆ ತಾಣಗಳಾಗಿ ಮಾರ್ಪಡುತ್ತಿವೆ. ಈ ಕುರಿತು ನಗರಸಭೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ಕೋರಿ ಪೌರಾಯುಕ್ತರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕರವೇ ಜಿಲ್ಲಾಧ್ಯಕ್ಷ ಹನುಮಂತ ಎಚ್. ಅಬ್ಬಿಗೇರಿ, ಪದಾಧಿಕಾರಿಗಳಾದ ಶರಣು ಗೋಡಿ, ನಿಂಗನೌಡ ಮಾಲಿಪಾಟೀಲ, ಬಸವರಾಜ ಮೇಟಿ, ಸಿದ್ಧಪ್ಪ ವಡ್ಡರ, ಹನಮಂತ ಪೂಜಾರ, ಶಂಶುದ್ದೀನ್‌ ಡಂಬಳ, ಶಾಮು ನದಾಫ್‌, ಲಖನ್‌ ಸಿಂಗ್‌ ಗಂಗಾವತಿ, ಆಶಾ ಜೂಲಗುಡ್ಡ, ರತ್ನಮ್ಮ ಯಲಬುರ್ಗಿ, ರತ್ನಮ್ಮ ಕಣಗಿನಹಾಳ, ಗೀತಾ ಕಾಳಗಿ, ಮೇರಿ ಪೂಜಾರ, ನಾಗಪ್ಪ ಅಣ್ಣಿಗೇರಿ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

Gadag; ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

Gadag; ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Gadag; ಹಬ್ಬದ ಖರೀದಿಗೆಂದು ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Mundargi: Bike rider went to Kochi without overbridge; Protest by villagers

Mundargi: ನೀರಿನಲ್ಲಿ ಕೊಚ್ಚಿ ಹೋದ ಬೈಕ್; ಓರ್ವ ಸಾವು

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.