ಕಾರ್ಮಿಕರ ದಿನಾಚರಣೆಗಿದೆ ಚಾರಿತ್ರಿಕ ದೀರ್ಘ‌ ಚರಿತ್ರೆ


Team Udayavani, May 4, 2019, 3:08 PM IST

hav-3

ಹಾವೇರಿ: ಜಗತ್ತಿನಾದ್ಯಂತ ಆಚರಿಸಲ್ಪಡುವ ಕಾರ್ಮಿಕರ ದಿನಾಚರಣೆ ಅದೊಂದು ಅಂತಾರಾಷ್ಟ್ರೀಯ ಮಹತ್ವದ ದಿನ ಮಾತ್ರವಲ್ಲ, ಚಾರಿತ್ರಿಕವಾಗಿ ಒಂದು ದೀರ್ಘ‌ ಚರಿತ್ರೆ ತನ್ನೊಡಲಲ್ಲಿ ಇಟ್ಟಿಕೊಂಡಿರುವ ದಿನ ಎಂದು ವಕೀಲ, ಕಾರ್ಮಿಕ ಸಂಘಟನೆ ಮುಖಂಡ ನಾರಾಯಣ ಕಾಳೆ ಹೇಳಿದರು.

ನಗರದ ಮುರುಘರಾಜೇಂದ್ರ ಮಠದ ಆವರಣದಲ್ಲಿ ಸಿಐಟಿಯು ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಡೆದ ಕಾರ್ಮಿಕ ದಿನಾಚರಣೆಯಲ್ಲಿ ಮಾತನಾಡಿದ ಅವರು, ಬಂಡವಾಳಶಾಹಿ ವ್ಯವಸ್ಥೆಯನ್ನು ಕಿತ್ತುಹಾಕುವಲ್ಲಿ ಕಾರ್ಮಿಕ ವರ್ಗದ ಪಾತ್ರದ ಕುರಿತು ಕಾರ್ಮಿಕರ ಪ್ರಜ್ಞೆ ಎತ್ತರಿಸಲು ಮತ್ತು ಎಲ್ಲ ಶೋಷಣೆ ಕೊನೆಗಾಣಿಸುವ ಅಂತಿಮ ಸಂಘಕ್ಕಾಗಿ ಕಾರ್ಮಿಕ ವರ್ಗವನ್ನು ಸಜ್ಜುಗೊಳಿಸಲು ಸಿಐಟಿಯು ಪ್ರತಿಜ್ಞೆಗೈಯುತ್ತದೆ. ತಮ್ಮ ಜೀವನಾಧಾರಗಳು, ಜೀವನ ಮತ್ತು ದುಡಿಮೆಯ ಪರಿಸ್ಥಿತಿಗಳನ್ನು ರಕ್ಷಿಸಿಕೊಳ್ಳಲು ಕಾರ್ಮಿಕರು, ರೈತರು, ಕೃಷಿ ಕೂಲಿಕಾರರು, ಯುವಜನ, ವಿದ್ಯಾರ್ಥಿಗಳು ಹೀಗೆ ಸಮಾಜದ ಎಲ್ಲ ವಿಭಾಗದ ಜನರ ಹೆಚ್ಚುತ್ತಿರುವ ಹೋರಾಟಗಳನ್ನು ಸಿಐಟಿಯು ಸ್ವಾಗತಿಸುತ್ತದೆ ಎಂದರು.

ಸಂವಿಧಾನಿಕ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ಪ್ರತಿಪಾದನೆಗೆ ದಲಿತರು ಮತ್ತು ಆದಿವಾಸಿಗಳು ಸೇರಿದಂತೆ ವಿವಿಧ ವಿಭಾಗಗಳ ಹೆಚ್ಚುತ್ತಿರುವ ಹೋರಾಟಗಳನ್ನು ಕೂಡ ಸ್ವಾಗತಿಸುತ್ತದೆ. ಚುನಾವಣೆಯ ನಂತರ ಯಾವುದೇ ಸರ್ಕಾರ ಬಂದರೂ, ನವ ಉದಾರವಾದಿ ನೀತಿಗಳನ್ನು ಸೋಲಿಸುವ ಉದ್ದೇಶದಿಂದ ಈ ಹೋರಾಟಗಳನ್ನು ಮತ್ತಷ್ಟು ತೀವ್ರಗೊಳಿಸಲು ಕಾರ್ಮಿಕ ವರ್ಗಕ್ಕೆ ಮತ್ತು ದುಡಿಯುವ ವರ್ಗಕ್ಕೆ ಕರೆ ನೀಡುತ್ತದೆ. ಕಾರ್ಪೊರೇಟ್ ಪರದಿಂದ ಜನ ಪರದ ಕಡೆಗೆ ನೀತಿಗಳ ದಿಕ್ಕನ್ನು ಬದಲಾಯಿಸಲು ಹೋರಾಟ ತೀವ್ರಗೊಳಿಸಬೇಕು ಎಂದರು.

ಸಿಐಟಿಯು ಜಿಲ್ಲಾ ಸಂಚಾಲಕ ವಿನಾಯಕ ಕುರುಬರ ಮಾತನಾಡಿ, ಯಾರು ಸಂಪತ್ತನ್ನು ಸೃಷ್ಟಿಸುತ್ತಾರೋ ಅವರಿಗೇ ಅದು ಸೇರಬೇಕು. ಎಂಬ ಘೋಷಣೆಯೊಂದಿಗೆ ಈ ವರ್ಗದ ಮೇ ದಿನಾಚರಣೆಯನ್ನು ಆಚರಿಸಬೇಕೆಂಬ ಕಾರ್ಮಿಕ ಸಂಘಗಳ ವಿಶ್ವ ಒಕ್ಕೂಟ ಕರೆಯನ್ನು ಸಿಐಟಿಯುಪೂರ್ಣವಾಗಿ ಬೆಂಬಲಿಸುತ್ತದೆ. ಬಂಡವಾಳಶಾಹಿ ಶೋಷಣೆ ವ್ಯವಸ್ಥೆಯ ವಿರುದ್ಧ ಸಂಘವನ್ನು ಗಟ್ಟಿಗೊಳಿಸುವ ಪ್ರಯತ್ನ ಸಿಐಟಿಯು ಮುಂದುವರಿಸಲಿದೆ. ಮಾನವ ಕುಲದ ಸಾಮೂಹಿಕ ಪ್ರಯತ್ನಗಳ ಮೂಲಕ ಸಾಧಿಸಲಾದ ಅಪಾರ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗಳನ್ನು ಕೆಲವೇ ದೇಶಗಳು ಮತ್ತು ಕೆಲವೇ ಕಾರ್ಪೋರೇಟ್‌ಗಳು ಕಬಳಿಸಿವೆ. ಇವುಗಳನ್ನು ಜನತೆಯ ಅನುಕೂಲಕ್ಕಾಗಿ ಬಳಸುತ್ತಿಲ್ಲ. ಬದಲಿಗೆ ತಮ್ಮ ಲಾಭಗಳನ್ನು ಹೆಚ್ಚಿಸಿಕೊಳ್ಳಲು ಮತ್ತು ದುಡಿಯುವ ಜನತೆಯನ್ನು ದಿವಾಳಿ ಮಾಡಲು ಬಳಸಲಾಗುತ್ತಿದೆ. ಇಂತಹ ಲಾಭಕೋರ ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧ ಸಿಐಟಿಯು ತನ್ನ ಆಕ್ರೋಶ ವ್ಯಕ್ತಪಡಿಸುತದೆ ಎಂದರು.

ಈಗಲೂ ಜನರು ನಿರುದ್ಯೋಗ, ಬಡತನ, ಅನಕ್ಷರತೆ, ಅನಾರೋಗ್ಯ, ನಿರ್ವಸತಿ, ಮೂಲ ಸೌಲಭ್ಯಗಳ ಕೊರತೆಯಿಂದ ನರಳುತ್ತಿರುವುದು ಮಾನವ ಕುಲವೇ ನಾಚಿಕೆ ಪಡುವ ವಿಷಯವಾಗಿದೆ. ಆದ್ದರಿಂದ ಇಂತಹ ಅಮಾನವೀಯ ಬಂಡವಾಳಶಾಹಿ ವ್ಯವಸ್ಥೆಯು ಮುಂದುವರಿಯುವ ಹಕ್ಕಿಲ್ಲ. ಇದನ್ನು ಮುಂದುವರಿಯಲು ಬಿಡಬಾರದು ಎಂದರು.

ಈ ಸಂದರ್ಭದಲ್ಲಿ ಸಿಐಟಿಯು ಮುಖಂಡರಾದ ವಿ.ಕೆ.ಬಾಳಿಕಾಯಿ, ಎಸ್‌ಎಫ್‌ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಭೋವಿ, ಜ್ಯೋತಿ ದೊಡ್ಡಮನಿ, ಎಸ್‌ಪಿಜೆ ಮುಖ್ಯಸ್ಥರಾದ ಹಸೀನಾ ಹೆಡಿಯಾಲ, ಹೆಸ್ಕಾಂ ನೌಕರರ ಮುಖಂಡರಾದ ಚಂದ್ರು ಬೆನಕನಹಳ್ಳಿ, ಗುಡದಯ್ಯ ಬರಡಿ, ಸಂತೋಷ ಕುಂಸಿ, ಶಂಕರ ಜಂಗಳೆ, ಟಿ.ಎನ್‌. ಪಾಟೀಲ, ಗ್ರಾಪಂ ನೌಕರರ ಮುಖಂಡರಾದ ಅಜ್ಜಪ್ಪ ಬಾರ್ಕಿ, ದಯಾನಂದ ಚೌಟಿ ಇದ್ದರು.

ಟಾಪ್ ನ್ಯೂಸ್

PM Modi: ಶಿವ ದೇಗುಲ ವಿವಾದದ ಮಧ್ಯೆ ಅಜ್ಮೇರ್ ದರ್ಗಾಗೆ ಮೋದಿ ಚಾದರ್‌ ಅರ್ಪಣೆ

PM Modi: ಶಿವ ದೇಗುಲ ವಿವಾದದ ಮಧ್ಯೆ ಅಜ್ಮೇರ್ ದರ್ಗಾಗೆ ಮೋದಿ ಚಾದರ್‌ ಅರ್ಪಣೆ

ರಾಜ್ಯಕ್ಕೆ ನಡ್ಡಾ ಆಗಮನ: ರಾಜ್ಯ ನಾಯಕರ ಜತೆ ಚರ್ಚೆ

BJP: ರಾಜ್ಯಕ್ಕೆ ನಡ್ಡಾ ಆಗಮನ: ರಾಜ್ಯ ನಾಯಕರ ಜತೆ ಚರ್ಚೆ

ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

Health Department: ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi: ಶಿವ ದೇಗುಲ ವಿವಾದದ ಮಧ್ಯೆ ಅಜ್ಮೇರ್ ದರ್ಗಾಗೆ ಮೋದಿ ಚಾದರ್‌ ಅರ್ಪಣೆ

PM Modi: ಶಿವ ದೇಗುಲ ವಿವಾದದ ಮಧ್ಯೆ ಅಜ್ಮೇರ್ ದರ್ಗಾಗೆ ಮೋದಿ ಚಾದರ್‌ ಅರ್ಪಣೆ

1aaaane

Sullia: ತೋಟದಲ್ಲಿ ಮೂರು ಕಾಡಾನೆ!

1-sss

Kodagu SP warning; ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ: ಸುಮೋಟೋ ಕೇಸ್‌

ರಾಜ್ಯಕ್ಕೆ ನಡ್ಡಾ ಆಗಮನ: ರಾಜ್ಯ ನಾಯಕರ ಜತೆ ಚರ್ಚೆ

BJP: ರಾಜ್ಯಕ್ಕೆ ನಡ್ಡಾ ಆಗಮನ: ರಾಜ್ಯ ನಾಯಕರ ಜತೆ ಚರ್ಚೆ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.