ಕುಡಿಯುವ ನೀರಿಗಾಗಿ ಮಹಿಳೆಯರ ಪ್ರತಿಭಟನೆ

ಖಾಲಿ ಕೊಡಗಳೊಂದಿಗೆ ಗ್ರಾಪಂ ಮುಂದೆ ಪ್ರತಿಭಟನೆ

Team Udayavani, May 4, 2019, 4:37 PM IST

tumkur 7 tdy

ಕೊರಟಗೆರೆ: ಕಳೆದ 2 ತಿಂಗಳಿಂದ ಸರಿಯಾಗಿ ಕುಡಿಯುವ ನೀರು ಪೂರೈಕೆ ಮಾಡುತ್ತಿಲ್ಲ ಎಂದು ಬೇಸತ್ತ ಮಹಿಳೆಯರು ಹಾಗೂ ಸ್ಥಳೀಯರು ಸೇರಿ ಗ್ರಾಪಂಗೆ ಮುಂದೆ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ಮಾಡಿರುವ ಘಟನೆ ಹೊಳವನಹಳ್ಳಿ ಯಲ್ಲಿ ನಡೆದಿದೆ.

ತಾಲೂಕಿನ ಹೊಳವನಹಳ್ಳಿ ಗ್ರಾಪಂ ವ್ಯಾಪ್ತಿಯ ಇಂದಿರಾಕಾಲೋನಿ ಬಡವಾಣೆಯಲ್ಲಿ ಸುಮಾರು 3 ತಿಂಗಳಿನಿಂದ‌ ಸರಿಯಾಗಿ ನೀರು ಬರುತ್ತಿಲ್ಲ. ಇಂದಿರಾ ಕಾಲೋನಿ ಮನೆಗಳಲ್ಲಿ ಹನಿ ನೀರಿಗೂ ಹಾಹಾಕಾರ ಉಂಟಾಗಿದೆ. ನೀರಿನ ಸಮಸ್ಯೆ ಬಗೆ ಹರಿಸುವಂತೆ ಹಲವಾರು ಬಾರಿ ಗ್ರಾಪಂ ಅಧಿ ಕಾರಿಗಳಿಗೆ ಹಾಗೂ ಸದಸ್ಯರಿಗೆ ತಿಳಿಸಿದರೂ ಇತ್ತ ತಿರುಗಿಯೂ ನೋಡುತ್ತಿಲ್ಲ ಎಂದು ದೂರಿದರು.

ಗ್ರಾಪಂ ಮಾಜಿ ಸದಸ್ಯ ಹನುಮಂತರಾಜು ಮಾತನಾಡಿ, ನಮ್ಮ ಇಂದಿರಾ ಕಾಲೋನಿಯಲ್ಲಿ ಇರುವ ಓವರ್‌ ಟ್ಯಾಂಕ್‌ಗೆ ನೀರು ಹರಿಸಲಾಗುತ್ತದೆ. ಈ ನೀರು ಕೆಲವು ಮನೆಗಳಿಗೆ ಮಾತ್ರ ಸಿಮೀತ ವಾಗಿದೆ. ಕಳೆದ 3 ತಿಂಗಳಿಂದ ನಮ್ಮ ಕಾಲೋನಿಗೆ ಸರಿಯಾಗಿ ನೀರು ಬಂದಿಲ್ಲ ಎಂದು ಹೇಳಿದರು.

ಗ್ರಾಮಸ್ಥ ಮಹಮದ್‌ ಖಲಿಂವುಲ್ಲಾ, ವಾರಕ್ಕೆ 3ಬಾರಿ ನೀರು ಬಿಡುತ್ತಾರೆ. ಆ ಕೆಲವು ಮನೆಯವರು ಮೋಟರ್‌ಗಳನ್ನು ಅಳವಡಿಸಿಕೊಂಡಿದ್ದಾರೆ. ಅಂತಹ ಮನೆಗಳಿಗೆ ಮಾತ್ರ ನೀರು ಹೋಗುತ್ತಿದೆ. ಇದರಿಂದ ನಮಗೆ ಕುಡಿಯುವ ನೀರು ಬಹಳಷ್ಟು ತೊಂದರೆಯಾಗಿದೆ ಎಂದರು.

ಸ್ಪಷ್ಟನೆ: ಹೊಳವನಹಳ್ಳಿ ಗ್ರಾಪಂ ಪಿಡಿಒ ಚಲುವ ರಾಜು ಮಾತನಾಡಿ, ನಾವು ಈಗಾಗಲೇ ಹೊಳವನಹಳ್ಳಿ ಗ್ರಾಪಂನಲ್ಲಿ 10ಕ್ಕೂ ಹೆಚ್ಚು ಹೊಸ ಕೊಳವೆ ಬಾವಿ ಕೊರೆಸಿದ್ದೇವೆ. ಅಂತರ್ಜಲ ಮಟ್ಟ ಕುಸಿದಿರುವುದರಿಂದ ನೀರು ಸಿಗುತ್ತಿಲ್ಲ. ಕೆಲವು ಮನೆಗಳಲ್ಲಿ ಮೋಟಾರ್‌ ಅಳವಡಿಸಿ ನೀರು ಹೊಡೆ ಯುತ್ತಿದ್ದಾರೆ ಎಂದು ಮಾಹಿತಿ ಬಂದಿದ್ದು, ಮೋಟರ್‌ನಿಂದ ನೀರು ಹೊಡೆಯುತ್ತಿರುವವರ ಮನೆ ನಲ್ಲಿ ಸಂಪರ್ಕ ಕಡಿತಗೊಳಿಸಲಾಗುವುದು, ಹಾಗೆಯೇ ಇಂದಿರಾ ಕಾಲೋನಿಗೆ ಭೇಟಿ ಕೊಟ್ಟು ನೀರಿನ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ. ಅಸ್ಲಾಂ ಪಾಷಾ, ಇರ್ಫಾನ್‌, ಲಾಲು, ನಜೀರ್‌, ಸಾವಿತ್ರಮ್ಮ, ಅಸೀನಾ, ಲಕ್ಷ್ಮಮ್ಮ ಮಮತಾಜ್‌ ಬೇಗಂ, ನರಸಿಂಹರಾಜು, ರಾಮ ಕೃಷ್ಣಯ್ಯ, ಹನುಮಂತರಾಜು, ಗೋವಿಂದರಾಜು ಮತ್ತಿತರರಿದ್ದರು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

hejjenu

Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.