“ಶೈಕ್ಷಣಿಕ ಸಾಧನೆಯಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ’
Team Udayavani, May 5, 2019, 6:15 AM IST
ಮಡಿಕೇರಿ: ಶೈಕ್ಷಣಿಕ ಸಾಧನೆ ಯಿಂದ ಮಾತ್ರ ಪ್ರತಿಯೊಂದು ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟಿದ್ದಾರೆ.
ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜ, ಮೊಗೇರ ನ್ಪೋರ್ಟ್ಸ್ ಕ್ಲಬ್ ವತಿಯಿಂದ ನಗರದ ಜನ ರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋ ಜಿಸಿರುವ 9ನೇ ವರ್ಷದ ರಾಜ್ಯಮಟ್ಟದ ಜೈ ಜವಾನ್ ಟ್ರೋಫಿ “”ಖುಷಿಗೊಂಜಿ ಗೊಬ್ಬು” ಪಂದ್ಯಾವಳಿಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವಸಮೂಹ ಕ್ರೀಡೆಯೊಂದಿಗೆ ಶೈಕ್ಷಣಿಕ ಮತ್ತು ಸಾಮಾಜಿಕವಾಗಿಯೂ ಅಭ್ಯುದಯ ಹೊಂದಬೇಕಾಗಿದೆ. ಮೊಗೇರ ಸಮಾಜ ಶಿಕ್ಷಣದ ಮೂಲ ಕವೇ ಆರ್ಥಿಕ ಸದೃಢತೆಯನ್ನು ಸಾಧಿಸಬೇಕೆಂದು ಶಾಸಕರು ಸಲಹೆ ನೀಡಿದರು.
ಕೊಡಗು ಜಿಲ್ಲಾ ಮೊಗೇರ ಸಮಾಜದ ಸ್ಥಾಪಕಾಧ್ಯಕ್ಷ ಬಿ.ಸದಾನಂದ ಮಾಸ್ತರ್ ಮಾತನಾಡಿ, ಲೈನ್‌ಮನೆಗಳಲ್ಲಿ ವಾಸಿ ಸುತ್ತಿರುವ ಸಮುದಾಯ ಬಾಂಧವರಿಗೆ ಸಂಘದ ಪರಿಚಯವಾಗಬೇಕು ಎಂಬ ನಿಟ್ಟಿನಲ್ಲಿ ಕ್ರೀಡಾ ಕೂಟವನ್ನು ಆಯೋಜಿಸಿ ಆ ಮೂಲಕ ಶಿಕ್ಷಣದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಮೊಗೇರ ಜನಾಂಗದ ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡದೆ ಇರುವುದು ಸಮುದಾಯದ ಏಳಿಗೆಗೆ ತೊಡಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆ ಯುವ ಮೂಲಕ ಎಲ್ಲಾ ಕ್ಷೇತ್ರಗಳಲ್ಲೂ ಗುರುತಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮುಂದಿನ ದಿನಗಳಲ್ಲಿ ಮೊಗೇರ ಅಕಾಡೆಮಿಯ ಸ್ಥಾಪನೆಗೆ ಚಿಂತನೆ ನಡೆಸಲಾಗುವುದು ಎಂದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷೆ ಸವಿತಾ ರೈ, ಪತ್ರಕರ್ತ ಕುಡೆಕಲ್ ಸಂತೋಷ್, ಮೊಗೇರ ಸಮಾಜದ ಗೌರವಾಧ್ಯಕ್ಷ ಪಿ.ಎಂ.ರವಿ ಮಾತನಾಡಿ ಮೊಗೇರ ಸಮಾಜದ ಏಳಿಗೆಗೆ ಶುಭಕೋರಿದರು.
ಮೊಗೇರ ಸೇವಾ ಸಮಾಜದ ಜಿಲ್ಲಾಧ್ಯಕ್ಷ ಬಿ.ಶಿವಪ್ಪ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ವೇದಿಕೆಯಲ್ಲಿ ಮೊಗೇರ ನ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಪಿ.ಸಿ.ರಮೇಶ್, ಸೇವಾ ಸಮಾಜದ ಉಪಾಧ್ಯಕ್ಷ ಸೋಮನಾಥ್, ಮಡಿಕೇರಿ ತಾಲೂಕು ಅಧ್ಯಕ್ಷ ಪಿ.ಬಿ. ಸುರೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.