ಬೋಟ್ ಪತ್ತೆ: ಮೀನುಗಾರರ ಕುಟುಂಬಕ್ಕೆ ಇನ್ನೂ ಮಾಹಿತಿಯಿಲ್ಲ
Team Udayavani, May 5, 2019, 3:00 AM IST
ಮಲ್ಪೆ: ಸುವರ್ಣ ತ್ರಿಭುಜ ಬೋಟ್‌ನ ಅವಶೇಷ ಸಮುದ್ರದಲ್ಲಿ ಪತ್ತೆಯಾಗಿರುವ ವಿಚಾರವನ್ನು ನಾಪತ್ತೆಯಾಗಿರುವ ಮೀನುಗಾರರ ಮನೆಯವರು ಆಘಾತಗೊಳ್ಳುವರೆಂಬ ಕಾರಣದಿಂದ ಮನೆಯಲ್ಲಿ ಬಹಿರಂಗ ಪಡಿಸಿಲ್ಲ ಎನ್ನಲಾಗಿದೆ.
ಚಂದ್ರಶೇಖರ್ ಕೋಟ್ಯಾನ್ ಅವರ ಪತ್ನಿ ಶ್ಯಾಮಲಾ ಮತ್ತು ದಾಮೋದರ ಸಾಲ್ಯಾನ್ ಅವರ ಪತ್ನಿ ಮೋಹಿನಿ, ತಾಯಿ ಸೀತಾ ಸಾಲ್ಯಾನ್, ತಂದೆ ಸುವರ್ಣ ತಿಂಗಳಾಯ ಅವರಿಗೆ ಇನ್ನೂ ವಿಷಯ ತಿಳಿದಿಲ್ಲ. ತಮ್ಮವರು ಬಂದೇ ಬರುತ್ತಾರೆ ಎಂಬ ನಿರೀಕ್ಷೆಯಲ್ಲಿ ಅವರಿದ್ದಾರೆ.
ಇಬ್ಬರ ಮನೆಯಲ್ಲೂ ಹೆತ್ತವರು ತಮ್ಮ ಮಕ್ಕಳನ್ನು ನೆನೆದು ಈಗಲೂ ಕಣ್ಣೀರಿಡುತ್ತಿದ್ದಾರೆ. ಈ ಮಧ್ಯೆ, ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮೇ 16ರೊಳಗೆ ಭೇಟಿಯಾಗಿ ಮಾತುಕತೆ ನಡೆಸಲಾಗುವುದು.
ಸುವರ್ಣ ತ್ರಿಭುಜ ಬೋಟ್ ಹೇಗೆ ಮುಳುಗಡೆಯಾಯಿತು ಎಂಬ ಬಗ್ಗೆ ತನಿಖೆಯಾಗಬೇಕು ಮತ್ತು ಕೇಂದ್ರದಿಂದ 7 ಮಂದಿ ಮೀನುಗಾರರ ಕುಟುಂಬಕ್ಕೆ ಗರಿಷ್ಠ ಮೊತ್ತದ ಪರಿಹಾರವನ್ನು ನೀಡಲು ಆಗ್ರಹಿಸಲಾಗುವುದು ಎಂದು ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.