ದಾಖಲಾತಿ ಹೆಚ್ಚಿಸಲು ಧ್ವನಿವರ್ಧಕಗಳ ಮೂಲಕ ಪ್ರಚಾರ
Team Udayavani, May 5, 2019, 3:00 AM IST
ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆ ತರಲು ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ಬಾರಿ ಧ್ವನಿವರ್ಧಕಗಳ ಮೂಲಕ ವಿಶೇಷ ಪ್ರಚಾರ ಕಾರ್ಯ ಹಮ್ಮಿಕೊಂಡಿದೆ.
ಸರ್ಕಾರಿ ಶಾಲಾ ಮಕ್ಕಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಆಯಾ ಶಾಲೆಯಲ್ಲಿ ಪಾಲಕ-ಪೋಷಕರಿಗೆ ತಿಳಿಸಿ, ಅವರ ಮಕ್ಕಳನ್ನು ಸರ್ಕಾರಿ ಶಾಲೆಗೆ ಕರೆ ತರುವ ಪ್ರಯತ್ನ ಹಲವು ವರ್ಷಗಳಿಂದ ನಡೆಯುತ್ತಿದೆ. ಆದರೆ, ನಿರೀಕ್ಷೆಯಷ್ಟು ಪ್ರಮಾಣದಲ್ಲಿ ದಾಖಲಾತಿ ಹೆಚ್ಚಿಸಲು ಸಾಧ್ಯವಾಗಿಲ್ಲ. ಇಂಗ್ಲಿಷ್ ಒಂದು ಭಾಷೆಯಾಗಿ ಬೋಧಿಸುವ ಕ್ರಮಕ್ಕೂ ಪಾಲಕ-ಪೋಷಕರನ್ನು ಆಕರ್ಷಿಸಲು ಸಾಧ್ಯವಾಗಿಲ್ಲ.
ಪ್ರಸಕ್ತ ಸಾಲಿನಿಂದ ಸಾವಿರ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲಾಗುತ್ತಿದೆ. ಅಲ್ಲದೆ, 176 ಕರ್ನಾಟಕ ಪಬ್ಲಿಕ್ ಶಾಲೆ ಕೂಡ ತೆರೆಯಲಾಗಿದೆ. ಇವೆಲ್ಲದರ ಪ್ರಚಾರಕ್ಕೆ ಸಾಮಾಜಿಕ ಜಾಲತಾಣ ಸಹಿತವಾಗಿ ಹಲವು ಕ್ರಮ ತೆಗೆದುಕೊಂಡಿದ್ದರೂ, ದಾಖಲಾತಿಯಲ್ಲಿ ಅಷ್ಟೇನೂ ಹೆಚ್ಚಾಗಿಲ್ಲ ಎಂಬುದನ್ನು ಮನಗಂಡ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಹಂತದಲ್ಲಿ ಧ್ವನಿವರ್ಧಕಗಳ ಮೂಲಕ ಬಹಿರಂಗ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
ಬಹುತೇಕ ಜಿಲ್ಲೆಗಳಲ್ಲಿ ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸರ್ಕಾರಿ ಶಾಲೆಗಳ ಸಾಧನೆ, ಸರ್ಕಾರದ ಕ್ರಮಗಳು, ಹೊಸ ಕಲಿಕಾ ವಿಧಾನ ಇತ್ಯಾದಿಗಳನ್ನು ಒಳಗೊಂಡ ಕರಪತ್ರ ಸಿದ್ಧಪಡಿಸಿಕೊಂಡು, ಧ್ವನಿವರ್ಧಕದ ಮೂಲಕ ಬೀದಿಬೀದಿಗಳಲ್ಲಿ ಬಹಿರಂಗ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.