ಪ್ರಧಾನಿಯಿಂದ ಕೀಳುಮಟ್ಟದ ರಾಜಕೀಯ: ದಿನೇಶ ಆರೋಪ
Team Udayavani, May 5, 2019, 11:05 AM IST
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನಮ್ಮೊಂದಿಗೆ ಟಿಎಂಸಿಯ 40 ಶಾಸಕರು ಸಂಪರ್ಕದಲ್ಲಿದ್ದಾರೆಂದು ಹೇಳುವ ಮೂಲಕ ಕೀಳುಮಟ್ಟದ ರಾಜಕಾರಣಕ್ಕಿಳಿದಿದ್ದಾರೆ. ಆಪರೇಷನ್ ಕಮಲಕ್ಕೆ ಅವರೇ ಸಹಾಯ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಗಂಭೀರ ಆರೋಪ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಲೋಕಸಭೆ ಹಾಗೂ ಚಿಂಚೋಳಿ ವಿಧಾನಸಭೆ ಉಪ ಚುನಾವಣೆಗೆ ಬಿಜೆಪಿಗೆ ಅಭ್ಯರ್ಥಿಗಳೇ ಸಿಗಲಿಲ್ಲ. ಹೀಗಾಗಿ ಅವರಿಗೆ ಅಪ್ಪ-ಮಕ್ಕಳೇ ಬೇಕಾಯಿತೆಂದು ಗೇಲಿ ಮಾಡಿದರು.
ಕುಂದಗೋಳ ಉಪ ಚುನಾವಣೆ ತಯಾರಿಗೆ ಯಾರು ಯಾವ ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ಚರ್ಚಿಸುತ್ತಿದ್ದೇವೆ. ಕುಂದಗೋಳದಲ್ಲಿ ಬಂಡಾಯವೆಂದಿದ್ದ ಶಿವಾನಂದ ಬೆಂತೂರ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಸತ್ಯಾಂಶ ಯಾವುದು, ಸುಳ್ಳು ಯಾವುದೆಂಬುದು ನನಗೆ ಗೊತ್ತಿದೆ. ಬೆಂತೂರ ಬಗ್ಗೆ ಈಗ ಮಾತನಾಡುವ ಅವಶ್ಯಕತೆ ಇಲ್ಲ ಎಂದರು.
ಈ ನಡುವೆ ನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಭೆ ನಂತರ ಮಾತನಾಡಿದ ಅವರು, ಪಕ್ಷದ ಶಾಸಕರು, ಸಚಿವರು, ಪದಾಧಿಕಾರಿಗಳಿಗೆ ಜವಾಬ್ದಾರಿ ನೀಡುವ ಬಗ್ಗೆ ಸಭೆ ಮಾಡಿದ್ದೇವೆ. ಉಪ ಮುಖ್ಯಮಂತ್ರಿ ಡಾ|ಜಿ. ಪರಮೇಶ್ವರ ಅವರು ಕೆಲವು ಸಲಹೆ ನೀಡಿದ್ದಾರೆ. ಕುಂದಗೋಳದಲ್ಲಿ ಗೆಲ್ಲೋದ್ರಲ್ಲಿ ನಮಗೆ ಅನುಮಾನವೇ ಇಲ್ಲ. ಚಿಂಚೋಳಿ ಕೂಡಾ ಗೆಲ್ಲುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.