ಹಂಗಾಮು ಮುಗಿದರೂ ರೈತರಿಗೆ ಸಿಗದ ಬಿಲ್
Team Udayavani, May 5, 2019, 12:59 PM IST
ಗೋಕಾಕ: ಸಕ್ಕರೆ ಕಾರ್ಖಾನೆಗಳಿಗೆ ರೈತರು ಕಬ್ಬು ಕಳಿಸಿ 4 ತಿಂಗಳು ಕಳೆದಿದ್ದು, ಕಬ್ಬು ನುರಿಸುವ ಹಂಗಾಮು ಮುಗಿದು 2 ತಿಂಗಳು ಕಳೆದರೂ ಇನ್ನೂವರೆಗೆ ಕಬ್ಬಿನ ಬಿಲ್ ನೀಡಿಲ್ಲ ಎಂದು ರೈತ ಸಂಘದ ರಾಜ್ಯ ಕಾರ್ಯದರ್ಶಿ ಭೀಮಶಿ ಗದಾಡಿ ಹಾಗೂ ಜಿಲ್ಲಾಧ್ಯಕ್ಷ ಸತ್ತೆಪ್ಪ ಮಲ್ಲಾಪೂರೆ ಆರೋಪಿಸಿದರು.
ನಗರದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಎಲ್ಲ ಕಾರ್ಖಾನೆಗಳು ರೈತರಿಗೆ ನೀಡಬೇಕಾದ ಕಬ್ಬಿನ ಬಿಲ್ ನೀಡಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ ಕೂಡಲೇ ಮಧ್ಯ ಪ್ರವೇಶಿಸಿ 8 ದಿನಗಳೊಳಗಾಗಿ ರೈತರ ಬಿಲ್ ನೀಡುವ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದರು.
ಜಿಲ್ಲೆಯಲ್ಲಿ ಈಗಾಗಲೇ ಬೆಳೆಗಳು ಬಿಸಿಲಿನ ಬೇಗೆಯಿಂದ ಒಣಗಿವೆ. ಕೂಡಲೇ ಕಂದಾಯ ಇಲಾಖೆ ಹಾಗೂ ಕೃಷಿ ಇಲಾಖೆ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಕುಡಿಯುವ ನೀರಿನ ಹಾಗೂ ಮೇವಿನ ಸಮಸ್ಯೆ ಇದ್ದು ಜಿಲ್ಲಾಡಳಿತ ನೀರಿನ ಸಮಸ್ಯೆಗಳಿರುವ ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ಜಾನುವಾರುಗಳಿಗೆ ಮೇವು ಬ್ಯಾಂಕ್ ಸ್ಥಾಪಿಸಬೇಕೆಂದು ಆಗ್ರಹಿಸಿದರು.
ರೈತರ ಸಾಲಮನ್ನಾ ಮಾಡಲಾಗಿದೆ ಎಂದು ಸರ್ಕಾರ ಘೋಷಣೆ ಮಾಡಿದ್ದರೂ ಬ್ಯಾಂಕಿನವರು ರೈತರಿಗೆ ಸಾಲ ತುಂಬುವಂತೆ ನೋಟಿಸ್ ನೀಡುವ ಕಾರ್ಯ ನಿಂತಿಲ್ಲ, ಇದರಿಂದಾಗಿ ರಾಮದುರ್ಗ ತಾಲೂಕಿನಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ ಅವರು, ಇನ್ನು ಮೇಲೆ ರೈತರಿಗೆ ಸಾಲ ತುಂಬುವಂತೆ ನೋಟಿಸ್ ನೀಡಿದರೆ ಆಯಾ ಬ್ಯಾಂಕ್ ಶಾಖೆಗಳ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಗೋಪಾಲ ಕುಕನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭರಮು ಖೆಮಲಾಪೂರೆ, ತಾಲೂಕಾಧ್ಯಕ್ಷ ಮುತ್ತೆಪ್ಪ ಬಾಗನ್ನವರ, ಗೌರವಾಧ್ಯಕ್ಷ ರಾಜಪ್ಪ ಹೂಲಿಕಟ್ಟಿ, ಕಾಯದರ್ಶಿ ಯಲ್ಲಪ್ಪ ತಿಗಡಿ, ಸಿದ್ದಪ್ಪ ತಪಸಿ, ಆನಂದ ಹೂಲಿಕಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.