ಒಕ್ಕಲೆಬ್ಬಿಸುವುದರಿಂದ ಆದಿವಾಸಿಗಳ ಜೀವನ ಶೈಲಿ ನಾಶ

Team Udayavani, May 5, 2019, 2:28 PM IST

gad-1

ಗದಗ: ಅಭಿವೃದ್ಧಿ ಹೆಸರಲ್ಲಿ ಆದಿವಾಸಿಗಳನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಹೀಗಾಗಿ ವಿಕಾಸ್‌ ಎಂಬ ಶಬ್ದವನ್ನು ಕೇಳುತ್ತಿದ್ದಂತೆ ಆದಿವಾಸಿ ಜನರು ಬೆಚ್ಚಿ ಬೀಳುವಂತಾಗಿದೆ ಎಂದು ಮಧ್ಯ ಪ್ರದೇಶದ ಜಾಗೃತ ಆದಿವಾಸಿ ದಲಿತ ಸಂಘಟನೆಯ ಮಾಧುರಿ ಕಳವಳ ವ್ಯಕ್ತಪಡಿಸಿದರು.

ನಗರದ ಅಂಬೇಡ್ಕರ್‌ ಭವನದಲ್ಲಿ ಶನಿವಾರ ನಡೆದ ಮೇ ಸಾಹಿತ್ಯ ಮೇಳದಲ್ಲಿ ಅಭಿವೃದ್ಧಿ ಮತ್ತು ಆದಿವಾಸಿಗಳು ಕುರಿತ ವಿಚಾರ ಗೋಷ್ಠಿಯಲ್ಲಿ ವಿಷಯ ಮಂಡಿಸಿದ ಅವರು, ಈಗಾಗಲೇ ಮಧ್ಯಪ್ರದೇಶ, ಛತ್ತೀಸಗಡ, ಜಾರ್ಖಂಡ ಮತ್ತು ಒರಿಸಾದಲ್ಲಿ ಅಭಿವೃದ್ಧಿ ಹೆಸರಲ್ಲಿ ಲಕ್ಷಾಂತರ ಎಕರೆ ಭೂಮಿಯನ್ನು ಅದಾನಿ, ಅಂಬಾನಿಯಂತವರ ಕೈಗೀಡುತ್ತಿದ್ದಾರೆ. ಆದಿವಾಸಿಗಳು, ಬಡವರು ನೆಲೆ ಕಳೆದುಕೊಳ್ಳುತ್ತಿದ್ದಾರೆ. ಮೋದಿ ಅವರು ಹಗಲಿರುಳು ಪಠಿಸುವ ‘ಸಬ್‌ ಕಾ ಸಾಥ್‌- ಸಬ್‌ ಕಾ ವಿಕಾಸ್‌’ ಇದೇನಾ ಎಂದು ಹರಿಹಾಯ್ದರು.

ಆದಿವಾಸಿಗಳನ್ನು ಒಕ್ಕಲೆಬ್ಬಿಸುವುದರಿಂದ ಅವರ ಸಂಸ್ಕೃತಿ, ಜೀವನ ಶೈಲಿ ನಾಶವಾಗುತ್ತದೆ. ಇವತ್ತಿಗೂ ಎಷ್ಟೋ ಆದಿವಾಸಿಗಳು ತಮ್ಮ ಜಿಲ್ಲಾ ಕೇಂದ್ರಗಳನ್ನು ಕಂಡಿಲ್ಲ. ಅಂಥವರನ್ನು ಬೀದಿಗೆ ತಳ್ಳುವುದರಿಂದ ತುತ್ತಿನ ಚೀಲಕ್ಕಾಗಿ ಬೆಂಗಳೂರು, ದೆಹಲಿ, ಮುಂಬೈಗಳಲ್ಲಿ ಕಟ್ಟಡ ಕಾರ್ಮಿಕರಾಗಿ ದುಡಿಯುವಂತಾಗುತ್ತದೆ. ತಮ್ಮ ಪರಂಪರಾಗತ ನೆಲೆಯಿಂದ ಹೊರಬಿದ್ದ ಆದಿವಾಸಿಗಳು ನಗರಗಳಲ್ಲಿ ನಿತ್ಯ ಸತ್ತು ಬದುಕುತ್ತಿದ್ದಾರೆ ಎಂದು ಅವರ ಬದುಕಿನ ಕರಾಳತೆಯನ್ನು ಬಿಚ್ಚಿಟ್ಟರು.

ಇಂತಹ ಸಂದರ್ಭದಲ್ಲಿ ಸಂಘ ಪರಿವಾರ ತನ್ನ ಕುತಂತ್ರದಿಂದ ಆದಿವಾಸಿಗಳ ಮೇಲೆ ಹಿಂದುತ್ವವನ್ನು ಹೇರಲು ಪ್ರಯತ್ನಿಸುತ್ತಿದೆ. ಆದಿವಾಸಿಗಳ ನಡುವೆ ದುರ್ಗಾಮಾತೆಯನ್ನು ತಂದು ದಾರಿ ತಪ್ಪಿಸುತ್ತಿದೆ. ಆದಿವಾಸಿಗಳಿಗೆ ನೆಲ, ಜಲ, ಅರಣ್ಯವೇ ದೇವರು. ಅವರು ಮಾನವೀಯ ಗುಣಗಳ, ಪ್ರಕೃತಿ ಸ್ನೇಹಿ ಸಂಸ್ಕೃತಿಯ ಮೇಲೆ ಹಿಂದೂತ್ವದ ಮಾನವ ವಿರೋಧಿ ಸಂಸ್ಕೃತಿಯನ್ನು ಹೇರಲಾಗುತ್ತಿದೆ.

ಮತ್ತೂಂದೆಡೆ ಈ ದೇಶದ ಖನಿಜ ಸಂಪತ್ತನ್ನು ಖಾಸಗಿಯವರಿಗೆ ಲೂಟಿ ಮಾಡಲು ಅವಕಾಶ ಕೊಟ್ಟು ಆದಿವಾಸಿಗಳನ್ನು ಒಕ್ಕಲೆಬ್ಬಿಸುವುದನ್ನು ಅದ್ಯಾವ ಅರ್ಥದಲ್ಲಿ ಅಭಿವೃದ್ಧಿ ಎನ್ನಲು ಸಾಧ್ಯ ಎಂದು ಮಾಧುರಿ ಮಾರ್ಮಿಕವಾಗಿ ಪ್ರಶ್ನಿಸಿದರು. ಕುಮುದಾ ಸುಶೀಲಪ್ಪ, ಕಾವೇರಿ ಎಚ್.ಎಂ. ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ullala; Heap of waste in Nema’s field; Daiva got angry

Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Man enters church and chants Jai Shri Ram in Meghalaya: Case registered

Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ: ಕೇಸು ದಾಖಲು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ullala; Heap of waste in Nema’s field; Daiva got angry

Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ

5-snehamayi

Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.