ಮೈಕ್ರೋ ಪ್ಲಾಸ್ಟಿಕ್ ವಿರುದ್ಧ “ಯುದ್ಧ’ ಅಗತ್ಯ
Team Udayavani, May 6, 2019, 3:07 AM IST
ಬೆಂಗಳೂರು: ನಮ್ಮ ಕಣ್ಣಿಗೇ ಕಾಣದ ಮೈಕ್ರೋ ಪ್ಲಾಸ್ಟಿಕ್‌ಕಣಗಳು ನಮ್ಮ ದೇಹವನ್ನು ಸೇರುತ್ತಿವೆ. ಇದನ್ನು ತಡೆಯಲು “ಯುದ್ಧ’ವೇ ನಡೆಸಬೇಕಿದೆ ಎಂದು ಅದಮ್ಯ ಚೇತನದ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಹೇಳಿದರು.
ಅದಮ್ಯ ಚೇತನ ಸಂಸ್ಥೆ ಮೈಕ್ರೋ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಲಾಲ್‌ಬಾಗ್‌ನಲ್ಲಿ ಆಯೋಜಿಸಿದ್ದ “ಅಗೋಚರ ಕೊಲೆಗಾರ- ಮೈಕ್ರೋ ಪ್ಲಾಸ್ಟಿಕ್ ವಿರುದ್ಧ ಹೋರಾಟ’ ಕಾರ್ಯಕ್ರಮದಲ್ಲಿ ಮತನಾಡಿದ ಅವರು, ಪ್ಲಾಸ್ಟಿಕ್ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರ ಪರಿಣಾಮವಾಗಿ 0.5 ಮಿ.ಮೀ ಗಿಂತ ಚಿಕ್ಕ ಪ್ಲಾಸ್ಟಿಕ್‌ಕಣಗಳು ದೇಹವನ್ನು ಸೇರುತ್ತಿವೆ ಎಂದರು.
ಇತ್ತೀಚೆಗೆ ಐಐಟಿ ನಡೆಸಿದ ಸಂಶೋಧನೆಯಲ್ಲಿ ಉಪ್ಪಿನಲ್ಲಿ ಮೈಕ್ರೋ ಪ್ಲಾಸ್ಟಿಕ್ ಅಂಶವಿರುವುದು ಪತ್ತೆಯಾಗಿದೆ. ಮಿನರಲ್ ವಾಟರ್ ಬಾಟಲ್‌ಗಳಲ್ಲೂ ಮೈಕ್ರೋ ಪ್ಲಾಸ್ಟಿಕ್ ಇರುವುದು ಪತ್ತೆಯಾಗಿದೆ. ಹೀಗಾಗಿ, ಶುದ್ಧ ಕುಡಿಯುವ ನೀರು ಸಹ ಅಪಾಯಕಾರಿಯಾಗಿದೆ ಎಂದು ಹೇಳಿದರು. ಈ ಪ್ಲಾಸ್ಟಿಕ್ ರಾಕ್ಷಸನನ್ನು ನಾವೇ ಸೃಷ್ಟಿಸಿಕೊಂಡಿದ್ದೇವೆ.
ಮೈಕ್ರೋ ಪ್ಲಾಸ್ಟಿಕ್‌ನ ಬಗ್ಗೆ ಯಾವುದೇ ಸಂಶೋಧನೆಗಳು ನಡೆದಿಲ್ಲ. ಇದರ ಮೇಲೆ ಸಂಶೋಧನೆಗಳು ನಡೆಯಬೇಕಿದೆ. ಇದರಿಂದ ಹೊರಬರುವ ಬಗ್ಗೆ ಚಿಂತಿಸಬೇಕಿದೆ. ಆಗ ಮಾತ್ರ ಸಾರ್ವಜನಿಕರಲ್ಲಿ ಅರಿವು ಮೂಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಜಾಗೃತಿ ಕಾರ್ಯಕ್ರಮದ ನಂತರ ಅದಮ್ಯ ಚೇತನದ ಸದಸ್ಯರು ಲಾಲ್‌ಬಾಗ್‌ನಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಶ್ರಮದಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Kannada Rajyotsava: ಪಾಲಿಕೆ ಆಡಳಿತದಲ್ಲಿ ಸಂಪೂರ್ಣ ಕನ್ನಡ: ತುಷಾರ್
Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು
Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.