ಕುಡಿಯುವ ನೀರಿಗೆ ಬರ: ಶಾಶ್ವತ ಪರಿಹಾರಕ್ಕೆ ಯೋಜನೆ ಸಿದ್ಧ


Team Udayavani, May 6, 2019, 6:15 AM IST

kudiyuva-neeerige-bara

ಕುಂಬಳೆ: ಹರಿಯುವ ನದಿಯ ನೀರನ್ನು ನೈಸರ್ಗಿಕವಾಗಿ ಸಂಗ್ರಹಿಸಿ ಜಿಲ್ಲೆಯ ಕುಡಿಯುವ ನೀರಿನ ಬರಕ್ಕೆ ಶಾಶ್ವತ ಪರಿಹಾರ ಒದಗಿಸಲು ಶಾಸ್ತ್ರೀಯ ಯೋಜನೆ ಸಿದ್ಧಪಡಿಸಲಾಗಿದೆ. ಈ ನಿಟ್ಟಿನಲ್ಲಿ ಮಂಜೇಶ್ವರ ತಾಲೂಕಿನಲ್ಲಿ 418 ಹೊಸ ಸಣ್ಣ ಕೆರೆಗಳನ್ನು ನಿರ್ಮಿಸಲಾಗುವುದು.

ನದಿಗಳಲ್ಲಿ ಸಹಜವಾಗಿ ಹರಿದು ಹೋಗುವ ನೀರನ್ನು ಬಳಸಿ, ನದಿಗಳ ಬದಿಯಲ್ಲಿ ನಿರ್ಮಿಸಲಾಗುವ ಜಲಾಶ್ರಯಗಳಲ್ಲಿ ಸಂಗ್ರಹಿಸಿ ಬಳಸುವ ಮಹತ್ವದ ಯೋಜನೆ ಇದಾಗಿದೆ. ಹತ್ತರಿಂದ ಹದಿನೈದು ಡಿಗ್ರಿ ವರೆಗಿನ ವ್ಯತ್ಯಾಸದಲ್ಲಿ ನೂತನ ಕಾಲುವೆಗಳನ್ನು ನಿರ್ಮಿಸಿ ಜಲಾಶ್ರಯಗಳಿಗೆ ನದಿ ನೀರು ತಲಪುವಂತೆ ಮಡಲಾಗುವುದು. ಕನಿಷ್ಠ 7x9x3 ಮೀಟರ್‌ ಆಳದ ಕೆರೆಗಳನ್ನು ನಿರ್ಮಿಸಲಾಗುವುದು.

ಜಲ ಲಭ್ಯತೆಗೆ ಅನುಸರಿಸಿ ಆಳ-ಅಗಲದಲ್ಲಿ ವ್ಯತ್ಯಾಸಗಳಿರುವುದು. ಶಿರಿಯದಲ್ಲಿ 179, ಉಪ್ಪಳದಲ್ಲಿ 150, ಮೊಗ್ರಾಲ್‌ ನಲ್ಲಿ 74, ಮಂಜೇಶ್ವರದಲ್ಲಿ 4, ಕುಂಬಳೆಯಲ್ಲಿ 4 ಜಲಾಶ್ರಯಗಳ ನಿರ್ಮಾಣವಾಗಲಿವೆ. ಈ ಮೂಲಕ ಸಮೀಪ ಪ್ರದೇಶಗಳ ನೀರಿನ ಮಟ್ಟ ಹೆಚ್ಚಳಕ್ಕೆ ಪೂರಕ ವಾತಾವರಣ ಸƒಷ್ಟಿಯಾಗಲಿದೆ. ಅಧಿಕ ಜಲ ಲಭಿಸುವಲ್ಲಿ ಹೆಚ್ಚುವರಿ ಜಲಾಶಯಗಳ ನಿರ್ಮಾಣ ನಡೆಯಲಿದೆ.

ಲ್ಯಾಟ್ರೈಟ್‌ ಮಣ್ಣಿರುವ ಪ್ರದೇಶವಾಗಿರುವ ಮಂಜೇಶ್ವರ ತಾಲೂಕಿನಲ್ಲಿ ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅವರ ವಿಶೇಷ ಆಸಕ್ತಿ ಪ್ರಕಾರ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಈ ಯೋಜನೆ ಜಾರಿಗೊಳ್ಳಲಿದೆ. ಮುಂದಿನ ವರ್ಷಗಳಲ್ಲಿ ಕಾಸರಗೋಡು, ಮಂಜೇಶ್ವರ ತಾಲೂಕುಗಳಲ್ಲಿ ಈ ನಿಟ್ಟಿನಲ್ಲಿ 5 ಸಾವಿರ ಕೆರೆಗಳನ್ನು ನಿರ್ಮಿಸುವ ಯೋಜನೆಯನ್ನು ಹಮ್ಮಿಕೊಳ್ಳ‌ಲಾಗಿದೆ.
ಈ ಯೋಜನೆಗೆ ಅಗತ್ಯವಿರುವ ನಿಧಿಯನ್ನು ಕಾಸರಗೋಡು ಅಭಿವೃದ್ಧಿ ಪ್ಯಾಕೇಜಿನಿಂದ ಬಳಸಲಾಗುವುದು. ಈ ಕುರಿತು ಮಾತುಕತೆ ನಡೆಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಜರುಗಿತು.

ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅಧ್ಯಕ್ಷತೆ ವಹಿಸಿದ್ದರು.
ಕಾಸರಗೋಡು, ಮಂಜೇಶ್ವರಗಳ ಜಿಲ್ಲಾ ಮಣ್ಣು ಸಂರಕ್ಷಣೆ ಅಧಿಕಾರಿ ವಿ.ಎಂ. ಅಶೋಕ್‌ ಕುಮಾರ್‌, ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ ಸ್ಪೆಷಲ್‌ ಆಫೀಸರ್‌ ಇ.ಪಿ. ರಾಜ್‌ ಮೋಹನ್‌, ಹರಿತ ಕೇರಳಂ ಜಿಲ್ಲಾ ಸಂಚಾಲಕ ಎಂ.ಪಿ. ಸುಬ್ರಹ್ಮಣ್ಯನ್‌, ವಿವಿಧ ಗ್ರಾಮ ಪಂಚಾಯತ್‌ ಅಧ್ಯಕ್ಷರು, ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಮೇ 15ರ ಮುನ್ನ ನಿರ್ಮಾಣ ಕಾಮಗಾರಿ ಆರಂಭ
ಜಿಲ್ಲಾಡಳಿತದ ನೇತƒತ್ವದಲ್ಲಿ ಜಾರಿಗೊಳಿಸುವ ನದಿತಟ ಅಭಿವೃದ್ಧಿ ಯೋಜನೆಯಂಗವಾಗಿ ಈ ಚಟುವಟಿಕೆ ತ್ವರಿತಗತಿಯಲ್ಲಿ ಸಾಗುತ್ತಿದೆ.ಇದರ ಮೊದಲ ಹಂತವಾಗಿ ಮಂಜೇಶ್ವರ ತಾಲೂಕಿನ 5 ನದಿ ತಟಗಳಲ್ಲಿ ಈ ಯೋಜನೆ ಜಾರಿಗೊಳ್ಳಲಿದೆ. ಮಂಜೇಶ್ವರ, ಉಪ್ಪಳ, ಶಿರಿಯ, ಕುಂಬಳೆ, ಮೊಗ್ರಾಲ್‌ ನದಿಗಳ ಬದಿಯ ವಿವಿಧ ಪ್ರದೇಶಗಳಲ್ಲಿ ಕಿರು ಕೆರೆಗಳ ಸಹಿತ ಜಲಾಶಯಗಳ ನಿರ್ಮಾಣ ನಡೆಸಲಾಗುವುದು. ಖಾಸಗಿ, ಸರಕಾರಿ ಸ್ಥಳಗಳ ಸಹಿತ ಒಟ್ಟು 418 ಪ್ರದೇಶಗಳನ್ನು ಈ ನಿಟ್ಟಿನಲ್ಲಿ ಗುರುತಿಸಲಾಗಿದೆ. ಮೇ 15ರ ಮುನ್ನ ಕೆರೆಗಳ ನಿರ್ಮಾಣ ಕಾಮಗಾರಿ ಆರಂಭಿಸಲಾಗುವುದು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.