ಮೈತ್ರಿ ಒಡಕಿನ ಲಾಭ ಪಡೆದೀತೇ ಬಿಜೆಪಿ?
ಕಳೆದ ಬಾರಿ ಮೂರು ಹೋಳಾಗಿದ್ದ ಕಮಲ ಪಕ್ಷ•ಕೈ-ಜೆಡಿಎಸ್‌ಗೆ ಏಕಾಂಗಿ ಹೋರಾಟ ನಡೆಸುವ ಸ್ಥಿತಿ
Team Udayavani, May 6, 2019, 1:24 PM IST
ಚಿತ್ರದುರ್ಗ: ಲೋಕಸಭೆ ಚುನಾವಣೆಯ ಬೆನ್ನ ಹಿಂದೆಯೆ ಅವಧಿ ಪೂರ್ಣಗೊಂಡಿರುವ ಜಿಲ್ಲೆಯ ಮೂರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಹಾಗಾಗಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆ ಬಿರುಸು ಪಡೆದಿದೆ.
ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಯನ್ನು ಎದುರಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈ ಚುನಾವಣೆಯಲ್ಲಿ ಒಟ್ಟಾಗಿ ಸಾಗುವುದು ಅನುಮಾನ. ಹಾಗಾಗಿ ಮೈತ್ರಿ ಒಡಕಿನ ಲಾಭ ಪಡೆದು ಅತಿ ಹೆಚ್ಚು ಸ್ಥಾನಗಳನ್ನು ಗಳಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ರಣತಂತ್ರ ರೂಪಿಸುತ್ತಿದ್ದಾರೆ.
2013ರ ಮಾರ್ಚ್ 7 ರಂದು ಹಿರಿಯೂರು ನಗರಸಭೆ, ಹೊಳಲ್ಕೆರೆ ಮತ್ತು ಮೊಳಕಾಲ್ಮೂರು ಪಟ್ಟಣ ಪಂಚಾಯತ್‌ಗಳಿಗೆ ಚುನಾವಣೆ ನಡೆದಿತ್ತು. ಆ ಸಂದರ್ಭದಲ್ಲಿ ಬಿಜೆಪಿ ಮೂರು ಭಾಗಗಳಾಗಿ ಹೋಳಾಗಿತ್ತು. ಕೆಜೆಪಿ, ಬಿಎಸ್‌ಆರ್‌ಸಿ ಪಕ್ಷಗಳು ಉದಯವಾಗಿದ್ದವು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳೂ ಗೆಲುವಿಗಾಗಿ ಕಸರತ್ತು ನಡೆಸಿದ್ದವು.
ಆದರೆ ಈಗ ನಡೆಯಲಿರುವ ಚುನಾವಣೆಯಲ್ಲಿ ರಾಜಕೀಯ ಪರಿಸ್ಥಿತಿ ಬದಲಾಗಿದ್ದು, ಬಿಎಸ್‌ಆರ್‌ಸಿ ಹಾಗೂ ಕೆಜೆಪಿ ಪಕ್ಷಗಳು ಬಿಜೆಪಿಯಲ್ಲಿ ವಿಲೀನವಾಗಿವೆ. ವಿಧಾನಸಭೆ ಚುನಾವಣೆಯಲ್ಲಿ ಒಗ್ಗಟ್ಟಿನ ಮಂತ್ರ ಪಠಿಸಿದ್ದರಿಂದ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಕಮಲ ಅರಳಿತ್ತು. ಕಾಂಗ್ರೆಸ್ ಚಳ್ಳಕೆರೆ ಕ್ಷೇತ್ರದಲ್ಲಿ ಗೆದ್ದು ಮಾನ ಉಳಿಸಿಕೊಂಡಿದ್ದರೆ, ಜೆಡಿಎಸ್ ಧೂಳಿಪಟವಾಗಿತ್ತು.
ಜಿಲ್ಲೆಯಲ್ಲಿ ಐದು ಶಾಸಕರ ಬಲ ಹೊಂದಿರುವ ಬಿಜೆಪಿ ಅತಿ ದೊಡ್ಡ ಪಕ್ಷವಾಗಿದೆ. ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋತಿದ್ದರೂ ಮತ ಗಳಿಕೆಯಲ್ಲಿ ಹಿಂದೆ ಬಿದ್ದಿಲ್ಲ. ಅದೇ ರೀತಿ ಜೆಡಿಎಸ್ ಜಿಲ್ಲೆಯಲ್ಲಿ ಒಂದೂ ಶಾಸಕ ಸ್ಥಾನವನ್ನು ಪಡೆಯದಿದ್ದರೂ ಚಳ್ಳಕೆರೆ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಮತ ಗಳಿಸಿ ಎರಡನೇ ಸ್ಥಾನ ಪಡೆದು ತನ್ನ ಅಸ್ತಿತ್ವವನ್ನು ತೋರಿಸಿತ್ತು. ಅದೇ ರೀತಿ ಹಿರಿಯೂರು ಕ್ಷೇತ್ರದಲ್ಲೂ 40 ಸಾವಿರಕ್ಕೂ ಅಧಿಕ ಮತಗಳನ್ನು ತನ್ನದಾಗಿಸಿಕೊಂಡಿತ್ತು. ವಿಧಾನಸಭೆ ಚುನಾವಣೆಯ ಫಲಿತಾಂಶವನ್ನು ಮುಂದಿಟ್ಟುಕೊಂಡು ಹೇಳುವುದಾದರೆ, ಹಿರಿಯೂರು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟರೆ ಮೊಳಕಾಲ್ಮೂರು, ಹೊಳಲ್ಕೆರೆಯಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ನೇರಾ ನೇರ ಹಣಾಹಣಿ ನಡೆಯಲಿದೆ.
ಹರಿಯಬ್ಬೆ ಹೆಂಜಾರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.