ಕನ್ನಡ ವಿಶ್ವ‌ ಭಾಷೆಯಲ್ಲೊಂದು: ಬಲ್ಲೂರ

•ಕಸಾಪ ಸಂಸ್ಥಾಪನಾ ದಿನಾಚರಣೆ •ಕನ್ನಡ ಭಾಷೆಯಲ್ಲಿಯೇ ಉನ್ನತ ಶಿಕ್ಷಣ ಪದ್ಧತಿ ಜಾರಿ ಮಾಡಿದಾಗ ಅಭಿವೃದ್ಧಿ ಸಾಧ್ಯ

Team Udayavani, May 6, 2019, 3:53 PM IST

6–May-20

ಬೀದರ: ನೌಬಾದ ಅಲ್ಲಮಪ್ರಭು ವಸತಿ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಸಂಸ್ಥಾಪನಾ ದಿನ ಆಚರಿಸಲಾಯಿತು.

ಬಿದರ: ಕನ್ನಡ ಭಾಷೆ ವಿಶ್ವದ ಭಾಷೆಗಳಲ್ಲೊಂದಾಗಿದೆ. ಕನ್ನಡಿಗರು ಯಾವ ದೇಶದಲ್ಲಿ ನೆಲೆಸಿದರೂ ಅಲ್ಲಿ ಕನ್ನಡ ಭಾಷೆ ಬಳಸುವ ಮೂಲಕ ವಿಶ್ವ ಭಾಷೆಯಾಗಲು ಶ್ರಮಿಸುತ್ತಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಗೌರವ ಕಾರ್ಯದರ್ಶಿ ಬಸವರಾಜ ಬಲ್ಲೂರ ಹೇಳಿದರು.

ನೌಬಾದ ವಿವೇಕಾನಂದ ಕಾಲೋನಿ ಅಲ್ಲಮಪ್ರಭು ವಸತಿ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್‌ನ 105ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಭಾಷೆ ಮತ್ತು ಸಾಹಿತ್ಯದ ಸರ್ವತೋಮುಖ ಬೆಳವಣಿಗೆಗೆ ಕನ್ನಡದ ಸ್ಥಾನಮಾನ ಹಾಗೂ ಅಮೂಲ್ಯ ಗ್ರಂಥಗಳ ಪ್ರಕಟಣೆ, ಕನ್ನಡ ಜಾಗೃತಿ, ಮೊದಲಾದ ಕಾರ್ಯ ಚಟುವಟಿಕೆಗಳು ಹಮ್ಮಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತು ಕಳೆದ 105 ವರ್ಷಗಳಿಂದ ಅವಿರತವಾಗಿ ಶ್ರಮಿಸುತ್ತಿದೆ. ಕನ್ನಡ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕನ್ನಡ ಭಾಷೆಯಲ್ಲಿಯೇ ಉನ್ನತ ಶಿಕ್ಷಣ ಜಾರಿ ಮಾಡಿದಾಗ ಮಾತ್ರ ಇದು ಸಾಧ್ಯ ಎಂದು ಹೇಳಿದರು.

ಶಿವಕುಮಾರ ಕಟ್ಟೆ ಮಾತನಾಡಿ, ಕನ್ನಡ ಸಾಹಿತ್ಯಕ್ಕೆ 2000 ವರ್ಷಗಳ ಇತಿಹಾಸ ಇದೆ. 12ನೇ ಶತಮಾನದಲ್ಲಿಯೇ ಬಸವಾದಿ ಶಿವಶರಣರು ಕನ್ನಡ ಭಾಷೆಯಲ್ಲಿಯೇ ವಚನ ಬರೆಯುವ ಮೂಲಕ ಕನ್ನಡದ ಶ್ರೀಮಂತಿಕೆ ಹೆಚ್ಚಿಸಿದರು. ಈ ಸಂಸ್ಥೆ ಕನ್ನಡ ವ್ಯಾಕರಣ, ಭಾಷಾ ಚರಿತ್ರೆ, ನಿಘಂಟುಗಳ ರಚನೆ, ಕನ್ನಡ ಶಾಸ್ತ್ರಗ್ರಂಥಗಳ, ಪಾರಿಭಾಷಿಕ ಶಬ್ದಕೋಶಗಳ ನಿರ್ಮಾಣ, ತತ್ವವಿಚಾರ, ಸಾಹಿತ್ಯ ಗ್ರಂಥಗಳ ಲೇಖನಕ್ಕೆ ಪ್ರೋತ್ಸಾಹ ಮತ್ತು ಅವುಗಳ ಪ್ರಕಟಣೆೆ ಸೇರಿದಂತೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ಕಸಾಪ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಬೀದರ ಜಿಲ್ಲೆಯಲ್ಲಿ ಕೂಡ ಕನ್ನಡ ಭಾಷೆ ಜಾಗೃತಿಗೊಳಿಸಲು ನೂರಾರು ಜನ ಕವಿಗಳು, ಲೇಖಕರು ತಮ್ಮ ಪುಸ್ತಕಗಳನ್ನು ಹೊರತರುವ ಮೂಲಕ ಕನ್ನಡದ ಬೆಳವಣಿಗೆಗಾಗಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ತಾಲೂಕು ಕಸಾಪ ಅಧ್ಯಕ್ಷ ಎಂ.ಎಸ್‌. ಮನೋಹರ, ಟಿ.ಎಂ. ಮಚ್ಚೆ, ಸಿಆರ್‌ಪಿ ಈಲೇಶಕುಮಾರ ಸೋನಿ, ಮುಖ್ಯ ಶಿಕ್ಷಕ ಸುರೇಕಲಾ ಮಾತನಾಡಿದರು.

ಇದೇ ಸಂಧರ್ಭದಲ್ಲಿ ರಾಜ್ಯಮಟ್ಟದ ಕನ್ನಡ ಸೇವಾ ಪ್ರಸಸ್ತಿ ಪುರಸ್ಕೃತರಾದ ಸಂಜೀವಕುಮಾರ ಅತಿವಾಳೆ ಅವರನ್ನು ಸನ್ಮಾನಿಸಲಾಯಿತು.

ಕಲ್ಯಾಣರಾವ ಚಳಕಾಪುರೆ, ರಮೇಶ ಬಿರಾದಾರ, ಓಂಪ್ರಕಾಶ ಧಡ್ಡೆ, ಜಗನ್ನಾಥ ಕಮಲಾಪುರೆ, ಶರಣಬಸವ ಲಂಗೋಫಟಿ ಇದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.