ಹುಷಾರ್‌..ರಸ್ತೆ ವಧ್ಯೆ ಇದೆ ವಿದ್ಯುತ್‌ ಕಂಬ

•ಅಧಿಕಾರಿಗಳ ನಿರ್ಲಕ್ಸ್ಯ ಕೈಗನ್ನಡಿ •ಕಂಬ ಸ್ಥಳಾಂತರಿಸದೆ ಡಾಂಬರೀಕರಣ

Team Udayavani, May 6, 2019, 4:10 PM IST

haveri-tdy-1..

ಹಾವೇರಿ: ವಿದ್ಯಾನಗರ ಪಶ್ಚಿಮ ಬಡಾವಣೆಯಲ್ಲಿ ರಸ್ತೆ ಮಧ್ಯಲ್ಲಿಯೇ ವಿದ್ಯುತ್‌ ಕಂಬ ಬಿಟ್ಟು ಡಾಂಬರೀಕರಣ ಮಾಡಿರುವುದು.

ಹಾವೇರಿ: ಕೆಲ ರಸ್ತೆ ಮಧ್ಯೆ ಗುಂಡಿಗಳು ಇರುವುದು, ಇನ್ನು ಕೆಲ ರಸ್ತೆಗಳ ಮಧ್ಯೆಯೇ ಕಾಲುವೆ ಇರುವುದನ್ನೂ ನೋಡಿದ್ದೇವೆ. ಆದರೆ, ರಸ್ತೆ ಮಧ್ಯೆಯೇ ವಿದ್ಯುತ್‌ ಕಂಬ ಇರುವುದು ಕಾಣುವುದು ಅಪರೂಪ. ಇಂಥ ಅಪರೂಪದ ದೃಶ್ಯ ನೋಡಬೇಕೆಂದರೆ ಇಲ್ಲಿಯ ವಿದ್ಯಾನಗರದ ಪಶ್ಚಿಮ ಬಡಾವಣೆಯ ಎರಡನೇ ಕ್ರಾಸ್‌ಗೆ ಬರಬೇಕು.!

ಇಲ್ಲಿ ರಸ್ತೆ ಮಧ್ಯೆ ಇರುವ ವಿದ್ಯುತ್‌ ಕಂಬವನ್ನು ಸ್ಥಳಾಂತರಿಸದೆ ಕಂಬ ಅಲ್ಲಿಯೇ ಇರಲು ಬಿಟ್ಟು ರಸ್ತೆಯ ಡಾಂಬರೀಕರಣ ಮಾಡಿದ್ದು ಇದು ಅಧಿಕಾರಿಗಳ ದಿವ್ಯ ನಿರ್ಲಕ್ಷ ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ರಸ್ತೆಯ ಮಧ್ಯದಲ್ಲಿಯೇ ಹಲವಾರು ವರ್ಷಗಳಿಂದ ವಿದ್ಯುತ್‌ ಕಂಬವಿದ್ದರೂ ಇದನ್ನು ಸಂಬಂಧಪಟ್ಟ ಇಲಾಖೆ ಸ್ಥಳಾಂತರಿಸುವ ಗೋಜಿಗೆ ಹೋಗಿಲ್ಲ. ಪರಿಣಾಮ ಇಲ್ಲಿಯ ನಿವಾಸಿಗಳು ನಿತ್ಯ ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ.

ರಾತ್ರಿ ಸಮಯದಲ್ಲಿ ಪರಸ್ಥಳಗಳಿಂದ ಬರುವ ಜನರು, ವಾಹನ ಸವಾರರು ವಿದ್ಯುತ್‌ ಕಂಬ ಕಾಣದೇ ಅವಘಡಗಳು ಸಂಭವಿಸಿದ ಘಟನೆಗಳು ಸಾಕಷ್ಟು ನಡೆದಿವೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು. ರಸ್ತೆ ಮಧ್ಯದಲ್ಲಿಯೇ ವಿದ್ಯುತ್‌ ಕಂಬ ಬಂದಿರುವುದರಿಂದ ದೊಡ್ಡ ವಾಹನಗಳಿಗೆ ಈ ರಸ್ತೆಯಲ್ಲಿ ಸಂಚಾರಕ್ಕೆ ನಿರ್ಬಂಧಿಸಿದಂತಾಗಿದೆ.

ಸ್ಥಳಾಂತರಿಸದೇ ಡಾಂಬರೀಕರಣ:

ಇಲ್ಲಿಯ ನಿವಾಸಿಗಳು ವಿದ್ಯುತ್‌ ಕಂಬ ಸ್ಥಳಾಂತರಗೊಳಿಸುವಂತೆ ನಗರಸಭೆ ಹಾಗೂ ಹೆಸ್ಕಾಂ ಕಚೇರಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಸಂಬಂಧಪಟ್ಟ ಇಲಾಖೆ ವಿದ್ಯುತ್‌ ಕಂಬ ಸ್ಥಳಾಂತರಕ್ಕೆ ಕ್ರಮ ಕೈಗೊಂಡಿಲ್ಲ. ಕಳೆದ ಹಲವಾರು ವರ್ಷಗಳಿಂದ ರಸ್ತೆಯಲ್ಲಿ ವಿದ್ಯುತ್‌ ಕಂಬ ಅಡ್ಡ ಬಂದಿದ್ದರಿಂದ ರಸ್ತೆ ಅಭಿವೃದ್ಧಿ ಕಾರ್ಯಕ್ಕೂ ಅಡ್ಡಿಯಾಗಿತ್ತು. ಆದರೆ, ಈಗ ರಸ್ತೆ ಮಧ್ಯೆ ವಿದ್ಯುತ್‌ ಕಂಬ ಇದ್ದರೂ ಕೂಡ ಅದನ್ನು ಅಲ್ಲಿಯೇ ಹಾಗೆಯೇ ಬಿಟ್ಟು ರಸ್ತೆಯನ್ನು ಡಾಂಬರೀರಣಗೊಳಿಸಿ ಅಭಿವೃದ್ಧಿ ಪಡಿಸಲಾಗಿದೆ.

ರಸ್ತೆ ಮಧ್ಯದ ಕಂಬವನ್ನು ಸ್ಥಳಾಂತರಿಸುವಂತೆ ನಗರಸಭೆ ಅಧ್ಯಕ್ಷೆ, ಸದಸ್ಯರಿಗೆ, ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವಿ ಸಲ್ಲಿಸಲಾಗಿದೆ. ಆದರೆ, ನಗರಸಭೆಯವರು ವಿದ್ಯುತ್‌ ಕಂಬ ಸ್ಥಳಾಂತರಿಸುವುದು ಹೆಸ್ಕಾಂನವರ ಕೆಲಸ ಎಂದು ಸಬೂಬು ನೀಡುತ್ತಾರೆ. ಆದರೆ, ಹೆಸ್ಕಾಂ ಇಲಾಖೆ ಅಧಿಕಾರಿಗಳು ಇದು ನಗರಸಭೆಗೆ ಸಂಬಂಧಪಟ್ಟದು ಎಂದು ಹೇಳುತ್ತಿದ್ದಾರೆ. ಇದರಿಂದಾಗಿ ಇಲ್ಲಿನ ನಿವಾಸಿಗಳಿಗೆ ಸಮಸ್ಯೆ ಸಮಸ್ಯೆಯಾಗಿಯೇ ಉಳಿದಿದ್ದು, ಯಾರೂ ವಿದ್ಯುತ್‌ ಕಂಬ ಸ್ಥಳಾಂತಕ್ಕೆ ಮುಂದಾಗುತ್ತಿಲ್ಲ. ಪರಿಣಾಮ ಇಲ್ಲಿನ ನಿವಾಸಿಗಳು ನಿತ್ಯ ಹೆಸ್ಕಾಂ ಹಾಗೂ ನಗರಸಭೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಟಾಪ್ ನ್ಯೂಸ್

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.