ಜಲಕ್ಷಾಮ ನಿವಾರಣೆಗೆ ಮಳೆ ನೀರು ಸಂಗ್ರಹವೇ ಮದ್ದು

ಮಳೆ ನೀರು ಹೊರತುಪಡಿಸಿ ಬೇರೆ ಯಾವುದೇ ಜಲಮೂಲದಿಂದ ನೀರಿನ ಅಭಾವ ನೀಗಿಸಲಾಗದು: ಪ್ರೊ| ರವಿವರ್ವಕುಮಾರ್‌

Team Udayavani, May 6, 2019, 4:39 PM IST

6–May-28

ಹಿರಿಯೂರು: ಸಮಾಲೋಚನಾ ಸಭೆಯಲ್ಲಿ ಮಾಜಿ ಸಂಸದ ಪಿ. ಕೋದಂಡರಾಮಯ್ಯ ಮಾತನಾಡಿದರು

ಹಿರಿಯೂರು: ಚಳ್ಳಕೆರೆ, ಹಿರಿಯೂರು, ತುಮಕೂರು ಜಿಲ್ಲೆಯ ಶಿರಾ, ಪಾವಗಡ ಮತ್ತಿತರ ಭಾಗಗಳಲ್ಲಿ ಅತಿಯಾದ ಜಲಕ್ಷಾಮ ಉಂಟಾಗಲು ಮಳೆ ಕೊರತೆಯೇ ಕಾರಣ. ಇದಕ್ಕೆ ಮಳೆ ನೀರು ಸಂಗ್ರಹವೇ ಪರಿಹಾರ ಎಂದು ಮಾಜಿ ಅಡ್ವೋಕೇಟ್ ಜನರಲ್ ಪ್ರೊ| ರವಿವರ್ಮಕುಮಾರ್‌ ಅಭಿಪ್ರಾಯಪಟ್ಟರು.

ನಗರದ ಸುಗ್ಗಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ನದಿ, ಕೆರೆ ಸಂರಕ್ಷಣೆ ಕುರಿತ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ದೇಶದಲ್ಲಿ ರಾಜಸ್ಥಾನದ ಮರಳುಗಾಡನ್ನು ಹೊರತುಪಡಿಸಿದರೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು, ಚಳ್ಳಕೆರೆ ಪ್ರದೇಶದಲ್ಲಿ ಅತಿ ಕಡಿಮೆ ಮಳೆಯಾಗುವ ಹವಾಗುಣವಿದೆ. ನೀರಿನ ಕೊರತೆ ನಿಗ್ರಹಿಸಲು ಮಳೆ ನೀರನ್ನು ಸಂಗ್ರಹಿಸುವಂತಹ ವ್ಯವಸ್ಥೆ ರೂಢಿಸಿಕೊಳ್ಳಬೇಕು ಎಂದರು.

ದೇಶದಾದ್ಯಂತ ಜಲಮೂಲಗಳ ಬಗ್ಗೆ ಅಧ್ಯಯನ, ಸಂಶೋಧನೆಗಳು ನಡೆಯುತ್ತಿವೆ. ಆದರೆ ನೀರಿನ ಪೂರ್ಣ ಪ್ರಮಾಣದ ಮೂಲವಾಗಿರುವ ಮಳೆ ನೀರನ್ನು ಹೊರತುಪಡಿಸಿದರೆ ಯಾವುದೇ ಜಲಮೂಲಗಳು ನೀರನ್ನು ಒದಗಿಸಲು ಸಾಧ್ಯವಿಲ್ಲ. ಈಗಾಗಲೇ ಹಲವು ತಾಂತ್ರಿಕ ಅಧ್ಯಯನಗಳು, ವರದಿಗಳು ಹೇಳಲ್ಪಟ್ಟಿರುವ ಹಾಗೆ ಕೆಲವೇ ವರ್ಷಗಳಲ್ಲಿ ಸಂಪೂರ್ಣ ಜಲಕ್ಷಾಮದಿಂದ ನರಳಬೇಕಾದ ಪರಿಸ್ಥಿತಿ ಬರಲಿದೆ ಎನ್ನುವ ವರದಿಗಳು ಕಂಗೆಡಿಸಿದೆ ಎಂದು ಆತಂಕ ವ್ಯಕ್ತ ಪಡಿಸಿದರು.

ಜಲಮೂಲಗಳ ಸಂರಕ್ಷಣೆ, ಮಳೆ ನೀರು ಸಂಗ್ರಹ, ಕೆರೆ, ಕುಂಟೆ, ಕಾಲುವೆಗಳ ರಕ್ಷಣೆ, ನದಿಗಳ ಪುನಃಶ್ಚೇತನದಂತಹ ಕಾರ್ಯ ಕೈಗೊಳ್ಳಲು ಯುವಜನರು ಸಜ್ಜಾಗಬೇಕಾದ ಅನಿವಾರ್ಯತೆ ಇದೆ. ಆ ನಿಟ್ಟಿನಲ್ಲಿ ಸಂಘಟನೆ ಮಾಡಬೇಕಾಗಿದೆ ಎಂದು ತಿಳಿಸಿದರು.

ತುಮಕೂರಿನ ಸಾಮಾಜಿಕ ಕಾರ್ಯಕರ್ತ ಯತಿರಾಜ್‌ ಮಾತನಾಡಿ, ರಾಜಸ್ಥಾನದಲ್ಲಿ ಬತ್ತಿ ಹೋದ ನದಿ, ಕೆರೆ, ಕುಂಟೆ, ಕಾಲುವೆಗಳನ್ನು ಮಳೆ ನೀರಿನ ಮೂಲಕ ಪುನಶ್ಚೇತನಗೊಳಿಸಿದ ರಾಜೇಂದ್ರ ಸಿಂಗ್‌ ಮಾದರಿಯಾಗಿದ್ದಾರೆ. ಅವರ ಕಾರ್ಯವನ್ನು ಮುಂದಿಟ್ಟುಕೊಂಡು ಮುಂದಿನ ದಿನಗಳಲ್ಲಿ ಚಿತ್ರದುರ್ಗ, ಹಿರಿಯೂರು, ಶಿರಾ ತಾಲೂಕುಗಳಲ್ಲಿರುವಂತಹ ನದಿ, ಕೆರೆ, ಕಾಲುವೆಗಳಿಗೆ ಜೀವ ತುಂಬುವಂತಹ ಕೆಲಸ ಮಾಡುವ ವಾತಾವರಣವನ್ನು ನಿರ್ಮಾಣ ಮಾಡಬೇಕಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಹಿರಿಯೂರು ತಾಲೂಕು ಪಂಚಾಯತ್‌ ಮಾಜಿ ಅಧ್ಯಕ್ಷ ತಿಪ್ಪೀರಯ್ಯ, ಮಾಜಿ ಸದಸ್ಯ ಎಂ.ಡಿ. ರವಿ, ಸಾಮಾಜಿಕ ಕಾರ್ಯಕರ್ತ ನರೇನಹಳ್ಳಿ ಅರುಣ್‌ಕುಮಾರ್‌, ರೈತ ಸಂಘದ ತಾಲೂಕು ಅಧ್ಯಕ್ಷ ಕೆ.ಸಿ. ಹೊರಕೇರಪ್ಪ, ತೆಂಗು ಬೆಳೆಗಾರರ ಸಂಘದ ಅಧ್ಯಕ್ಷ ಕುಂಬರೇಶ್‌, ನಗರಸಭೆ ಸದಸ್ಯ ವಿ. ಶಿವಣ್ಣ ಯಾದವ್‌, ವಕೀಲ ಜಬೀವುಲ್ಲಾ, ರೈತ ಮುಖಂಡ ಬಬ್ಬೂರು ಸುರೇಶ್‌, ಮಲ್ಲಿಕಾರ್ಜುನಪ್ಪ, ಸಂಪತ್‌, ನಿವೃತ್ತ ಪ್ರಾಧ್ಯಾಪಕ ಪ್ರೊ| ಪರಮೇಶ್ವರಪ್ಪ, ಭೀಮಸಮುದ್ರ ಈಶ್ವರಪ್ಪ ಮೊದಲಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.