ಹೆಚ್ಚು ಅಂತರದಿಂದ ಬಿಜೆಪಿ ಗೆಲುವು

Team Udayavani, May 6, 2019, 4:57 PM IST

uk-2..

ಶಿರಸಿ: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅತಿ ಹೆಚ್ಚು ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ಭವಿಷ್ಯ ನುಡಿದಿದ್ದಾರೆ.

ಶನಿವಾರ ನಗರದ ಲಿಂಗದಕೋಣ ಕಲ್ಯಾಣ ಮಂಟಪದಲ್ಲಿ ಜರುಗಿದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಸಂಘಟನೆ ಆಧಾರದಲ್ಲಿ ಚುನಾವಣೆ ನಡೆಸುವ ಶಕ್ತಿ ಇಲ್ಲಿಯ ಜನತೆಯಲ್ಲಿದೆ. ಲೋಕಸಭಾ ಚುನಾವಣೆಯಲ್ಲಿ ಯಾವುದೇ ಆಮಿಷ, ವಿಶೇಷ ಅಪೇಕ್ಷೆಗಳಿಲ್ಲದೆ, ಕೇವಲ ಸಂಘಟನೆ, ರಾಷ್ಟ್ರ ಭಕ್ತಿಯ ಕಾರ್ಯವೆಂದು ಭಾವಿಸಿ ಇಲ್ಲಿಯ ಜನರು ಸಂಘಟನೆಯಲ್ಲಿ ತೊಡಗಿಕೊಳ್ಳುವುದು ವಿಶೇಷವಾಗಿದೆ ಎಂದರು.

ಕಾಮಗಾರಿಗಳ ಪಟ್ಟಿಯನ್ನಾಧರಿಸಿ ಅಭಿವೃದ್ಧಿ ಕುರಿತು ಲೆಕ್ಕಾಚಾರ ಮಾಡುವುದು ಸಮಂಜಸವಲ್ಲ. ಕಾಮಗಾರಿಗಳನ್ನು ಅಭಿವೃದ್ಧಿ ಎಂದು ಅರಿಯುವ ರೋಗಗ್ರಸ್ಥ ಕಣ್ಣುಗಳು ಸಮಾಜದ ದಿಕ್ಕನ್ನು ತಪ್ಪಿಸುತ್ತಿವೆ. ಇದಕ್ಕೆ ಉತ್ತರವಾಗಿ ಕಾರ್ಯಕರ್ತರು ದೇಶದ ಬೌದ್ಧಿಕ ವಿಕಾಸಗಳನ್ನು ರೋಗಗ್ರಸ್ಥ ಮನಸ್ಸುಗಳಿಗೆ ಅರಿಕೆ ಮಾಡಿಕೊಡಬೇಕು ಎಂದರು.

ನನ್ನ ಮೊದಲನೆ ಚುನಾವಣೆಯಿಂದ ಇಂದಿನವರೆಗೂ ಭಾವನೆಗಳಿಗೆ ನಾಲಿಗೆ ನೀಡಿಲ್ಲ. ಅಭ್ಯರ್ಥಿ ಅನಂತಕುಮಾರ ಆದರೂ ಪಕ್ಷ ಮತ್ತು ಸಂಘಟನೆಗೆ ಗೆಲುವು ದೊರಕಬೇಕು. ಆಗ ಮಾತ್ರ ಸಿದ್ಧಾಂತ, ತತ್ವಗಳು ಜೀವಂತವಾಗಿರುತ್ತದೆ. ಒಮ್ಮೆ ಅನಂತಕುಮಾರ ಸೋತರೆ ಯಾವುದೇ ನಷ್ಟ ಆಗೊಲ್ಲ. ಬದಲಾಗಿ ಸಂಘಟನೆಗೆ ಬಹುದೊಡ್ಡ ಹೊಡೆತ ಬೀಳುತ್ತದೆ. ಹೆಗಡೆ ಬರಲಿ, ಇನ್ಯಾರೇ ಬರಲಿ ಗೆಲುವು ಪಕ್ಷದ್ದಾಗಬೇಕು ಎಂದರು. ಪಕ್ಷಕ್ಕಿಂತ ಮಿಗಿಲಾಗಿ ಸಾವಿರಾರು ಅನಾಮಧೇಯ ಸಂಘ ಪರಿವಾರದ ಕಾರ್ಯಕರ್ತರು ಚುನಾವಣೆ ಪೂರ್ವದಲ್ಲಿಯೇ ಸಂಘಟನೆ ಕಾರ್ಯ ಆರಂಭಿಸಿದ್ದಾರೆ. ಜಗತ್ತಿನ ಮಧ್ಯದಲ್ಲಿ ಭಗವಾಧ್ವಜ ಹಾರಾಡುವ ನಿರೀಕ್ಷೆಯ ದಿನ ಹತ್ತಿರ ಬಂದಿದ್ದರಿಂದ ಹಗಲು ರಾತ್ರಿ ಶ್ರಮವಹಿಸಿದ್ದಾರೆ ಎಂದರು. ಬಿಜೆಪಿ ಪ್ರಮುಖರಾದ ಪ್ರಮೋದ ಹೆಗಡೆ, ಸುನೀಲ್ ಹೆಗಡೆ, ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ, ವಿವೇಕಾನಂದ ವೈದ್ಯ, ದಿನಕರ ಶೆಟ್ಟಿ, ಆರ್‌. ಡಿ. ಹೆಗಡೆ, ವಿನೋದ ಪ್ರಭು, ಎನ್‌.ಜಿ. ನಾಯ್ಕ, ವಿಕ್ರಮಾದಿತ್ಯ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.