ಚುನಾವಣಾ ಗುಂಗಿನಿಂದ ಹೊರಬರದ ಶಾಸಕರು

ಅಭಿವೃದ್ಧಿ ಕಾರ್ಯಗಳಿಗೆ ಗ್ರಹಣ, ರೈತರ ಸಮಸ್ಯೆಗೆ ಸಿಗದ ಮುಕ್ತಿ • ಬೆಳೆಹಾನಿಗೊಳಗಾದವರ ಕಷ್ಟ ಕೇಳ್ಳೋರಿಲ್ಲ, ಕಬ್ಬಿನ ಬಾಕಿ ಕೊಟ್ಟಿಲ್ಲ

Team Udayavani, May 6, 2019, 5:23 PM IST

mandya-1..

ಮಂಡ್ಯ: ಲೋಕಸಭಾ ಚುನಾವಣೆಯ ಗುಂಗಿನಿಂದ ಜಿಲ್ಲೆಯ ಸಚಿವರು ಹಾಗೂ ಶಾಸಕರು ಇನ್ನೂ ಹೊರಬಂದಿಲ್ಲ. ಚುನಾವಣೆ ಮುಗಿದು 17 ದಿನವಾದರೂ ಅಭಿವೃದ್ಧಿ ಕಾರ್ಯಗಳ ಕಡೆ ಗಮನಹರಿಸುವ, ರೈತರ ಸಂಕಷ್ಟಗಳಿಗೆ ಸ್ಪಂದಿಸುವ, ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವತ್ತ ಮನಸ್ಸು ಕೊಟ್ಟಿಲ್ಲ.

ಕಾರ್ಖಾನೆಗಳು ರೈತರ ಕಬ್ಬಿನ ಬಾಕಿ ಹಣ ಪಾವತಿಸಿಲ್ಲ, ಬಿರುಗಾಳಿ ಮಳೆಯಿಂದ ರೈತರ ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾಗೂ ಆಸ್ತಿಗೆ ಹಾನಿಯಾಗಿದೆ. ಕೆರೆ-ಕಟ್ಟೆಗಳಲ್ಲಿ ನೀರಿಲ್ಲದೆ ಎಲ್ಲೆಡೆ ಕುಡಿವ ನೀರಿಗೆ ಹಾಹಾಕಾರ ಎದುರಾಗಿದೆ, ಅಭಿವೃದ್ಧಿ ಕಾರ್ಯಗಳಿಗೆ ಗ್ರಹಣ ಹಿಡಿದಿದೆ. ಆದರೂ ಜನಪ್ರತಿನಿಧಿಗಳೆನಿಸಿಕೊಂಡವರು ಜನರ ಪಾಲಿಗೆ ಇದ್ದೂ ಇಲ್ಲದಂತಾಗಿದ್ದಾರೆ. ಸಮಸ್ಯೆ ಹೆಚ್ಚಾಗಿದೆ.

ಗೆಲವಿನ ಲೆಕ್ಕಾಚಾರ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕಾರದ ಕುರ್ಚಿ ಉಳಿವಿಗಾಗಿ, ಮಂಡ್ಯ ಕ್ಷೇತ್ರದಲ್ಲಿ ಪುತ್ರನ ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ. ಪುತ್ರನ ಗೆಲವು ಸೋಲಿನ ಲೆಕ್ಕಾಚಾರದಲ್ಲಿದ್ದಾರೆ. ಶಾಸಕರು ಇದೇ ಗುಂಗಿನಲ್ಲಿದ್ದು ಜನರ ಕೈಗೆ ಸಿಗುತ್ತಿಲ್ಲ ಎಂಬಂತಾಗಿದೆ.

ಜಿಲ್ಲೆಯ ಕೆ.ಆರ್‌.ಪೇಟೆ, ಮಳವಳ್ಳಿ, ನಾಗಮಂಗಲ, ಮದ್ದೂರು ಸೇರಿದಂತೆ ವಿವಿಧೆಡೆ ಇತ್ತೀಚೆಗೆ ಬಿರುಗಾಳಿ ಮಳೆಯಾಗಿದ್ದು, ಆ ಭಾಗಗಳಲ್ಲಿ ಬಾಳೆ, ಅಡಕೆ, ತೋಟಗಾರಿಕೆ ಬೆಳೆಗಳು ಸೇರಿದಂತೆ ಹಲವು ಬೆಳೆಗಳು ನೆಲಕಚ್ಚಿವೆ. ಹಲವಾರು ಮನೆಗಳ ಮೇಲ್ಚಾವಣಿಗಳು ಬಿರುಗಾಳಿಗೆ ಹಾರಿಹೋಗಿವೆ. ಲಕ್ಷಾಂತರ ರೂ. ಮೌಲ್ಯದ ಬೆಳೆ, ಆಸ್ತಿ ಹಾನಿಯಾಗಿದ್ದರೂ ಯಾರೂ ಸಹ ಸಂತ್ರಸ್ತರನ್ನು ಸಂತೈಸುವ, ಅವರ ಕಷ್ಟಕ್ಕೆ ಸ್ಪಂದಿಸದೆ ದೂರವೇ ಉಳಿದಿದ್ದಾರೆ.

ಬಾಕಿ ಹಣ ನೀಡಿಲ್ಲ: ಚುನಾವಣಾ ಪೂರ್ವದಿಂದಲೂ ಸಕ್ಕರೆ ಕಾರ್ಖಾನೆಗಳಿಗೆ ಸರಬರಾಜು ಮಾಡಿದ ಕಬ್ಬಿನ ಬಾಕಿ ಪಾವತಿಸುವಂತೆ ರೈತರು ಒತ್ತಾಯಿಸುತ್ತಲೇ ಇದ್ದಾರೆ. ಇಂದಿಗೂ ಕಾರ್ಖಾನೆಗಳು ಬಾಕಿ ಹಣವನ್ನು ಸಂಪೂರ್ಣವಾಗಿ ಪಾವತಿ ಮಾಡುವಲ್ಲಿ ವಿಫ‌ಲ ವಾಗಿವೆ. ಜಿಲ್ಲಾಡಳಿತವೂ ಕಾರ್ಖಾನೆ ಅಧಿಕಾರಿಗಳ ಸಭೆ ನಡೆಸಿ ಶೀಘ್ರ ಕಬ್ಬು ಬೆಳೆಗಾರರಿಗೆ ಹಣ ದೊರಕಿಸಿಕೊಡುವ ಕೆಲಸ ಮಾಡುತ್ತಿಲ್ಲ. ಇಲ್ಲವೇ ಸಕ್ಕರೆ ಜಪ್ತಿ ಮಾಡಿಕೊಂಡು ಮಾರಾಟ ಮಾಡಿ ಬಾಕಿ ಪಾವತಿ ಸುವ ಕ್ರಮಕ್ಕೂ ಮುಂದಾಗುತ್ತಿಲ್ಲ. ಜನಪ್ರತಿನಿಧಿಗಳೀಗ ಈ ವಿಷಯ ಗೊತ್ತಿದ್ದೂ ಗೊತ್ತಿಲ್ಲದವರಂತಿದ್ದಾರೆ.

ಆಕ್ರೋಶ: ಜಿಲ್ಲೆಯ ರೈತರು ಹಾಗೂ ಜನರು ಎದುರಿಸುತ್ತಿರುವ ಸಮಸ್ಯೆಗಳಿಗಿಂತಲೂ ಮಂಡ್ಯ ಲೋಕಸಭಾ ಕ್ಷೇತ್ರದ ಫ‌ಲಿತಾಂಶವೇ ಅವರಿಗೆ ಪ್ರಧಾನವಾಗಿದೆ. ಫ‌ಲಿತಾಂಶ ಏನಾಗಬಹುದೆಂಬ ಲೆಕ್ಕಾಚಾರದಲ್ಲೇ ಮುಳುಗಿಹೋಗಿದ್ದಾರೆ. ರೈತರ ಸಮಸ್ಯೆಗಳಿಗೆ ಸ್ಪಂದಿಸುವುದಕ್ಕೆ ಸಮಯ ಕೊಡಲಾಗದೆ ಫ‌ಲಿತಾಂಶಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. ಇದು ಸಹಜವಾಗಿಯೇ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಕಾಣದಂತಾದ ಪ್ರತಿನಿಧಿಗಳು: ಮಂಡ್ಯ ಫ‌ಲಿತಾಂಶದ ಗುಪ್ತಚರ ಇಲಾಖೆ ನೀಡಿರುವ ವರದಿ ಶಾಸಕರಲ್ಲೂ ತಳಮಳ ಸೃಷ್ಟಿಸಿದೆ. ಮುಖ್ಯಮಂತ್ರಿ ಪುತ್ರ ನಿಖೀಲ್ ಸ್ಪರ್ಧೆಯಿಂದ ಕ್ಷೇತ್ರ ದೇಶದಲ್ಲೇ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಫ‌ಲಿತಾಂಶವೇನಾದರೂ ಏರು-ಪೇರಾದರೆ ಜೆಡಿಎಸ್‌ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಅವರ ಆಕ್ರೋಶವನ್ನು ಎದುರಿಸುವುದು ಹೇಗೆ, ಮುಂದಿನ ತಮ್ಮ ರಾಜಕೀಯ ಭವಿಷ್ಯದ ಗತಿ ಏನು ಎಂಬ ಬಗ್ಗೆ ಬಹುತೇಕರು ತಲೆಕೆಡಿಸಿಕೊಂಡಿದ್ದಾರೆ.

ಹೀಗಾಗಿ ಜೆಡಿಎಸ್‌ ಸಚಿವರು, ಶಾಸಕರು, ಸಂಸದರು ಯಾರೂ ಸಹ ಕ್ಷೇತ್ರದೊಳಗೆ ಕಾಣಿಸಿ ಕೊಳ್ಳುತ್ತಿಲ್ಲ. ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಧರ್ಮ ಪಾಲಿಸಿಲ್ಲವೆಂಬ ಬಗ್ಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳ ನಾಯಕರಲ್ಲಿ ಅಪಸ್ವರಗಳು ಹೆಚ್ಚಾಗುತ್ತಿವೆ. ಸಮ್ಮಿಶ್ರ ಸರ್ಕಾರ ಪತನಗೊಳ್ಳುವ ಮಾತುಗಳು ದಟ್ಟವಾಗಿ ಳಿಬರುತ್ತಿವೆ. ಈ ಕಾರಣದಿಂದಲೂ ಶಾಸಕರೆಲ್ಲರೂ ಕ್ಷೇತ್ರದಿಂದ ಹೊರಗುಳಿದು ಅವರದೇ ಆದ ರಾಜಕೀಯ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಮುಂದೆ ಏನೆಲ್ಲಾ ರಾಜಕೀಯ ಬೆಳವಣಿಗೆಗಳು ನಡೆಯಲಿವೆ ಎಂಬ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಸಿಎಂಗೆ ನೆಮ್ಮದಿಯಿಲ್ಲ: ಜನಪ್ರತಿನಿಧಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬಹದು. ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳನ್ನು ಜನರು ಆಯ್ಕೆ ಮಾಡಿದ್ದರೂ, ಪಕ್ಷದ ನಾಯಕರೇ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿದ್ದರೂ ಇನ್ನೂ ತೃಪ್ತಿ ಸಿಕ್ಕಿಲ್ಲ. ಪ್ರಸ್ತುತ ಸನ್ನಿವೇಶದಲ್ಲಿ ಮಂಡ್ಯ ಅಖಾಡದಲ್ಲಿ ಸಿಎಂ ಪುತ್ರನ ಗೆಲುವು ಜನಪ್ರತಿನಿಧಿಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಅದಕ್ಕಾಗಿ ಎಲ್ಲರೂ ಎದುರು ನೋಡುತ್ತಿದ್ದಾರೆ. ಚುನಾವಣೋತ್ತರದಲ್ಲಿ ಜಿಲ್ಲೆಯೊಳಗೆ ಫ‌ಲಿತಾಂಶದ ಬಗೆಗಿನ ವಾತಾವರಣ ಬದಲಾಗಿರುವುದು ಶಾಸಕರ ನಿದ್ದೆಗೆಡಿಸಿದೆ. ಸಿಎಂಗೆ ನೆಮ್ಮದಿ ಇಲ್ಲದಂತೆ ಮಾಡಿದೆ.

ಒಟ್ಟಿನಲ್ಲಿ ರೈತರು ಬೆಳೆದ ಬೆಳೆಗೆ ಬೆಲೆ ಇಲ್ಲ, ನೀರಿಲ್ಲದೆ ಬೆಳೆ ನಷ್ಟಕ್ಕೊಳಗಾಗಿ ಆರ್ಥಿಕ ಚೇತರಿಕೆಯನ್ನು ಕಾಣದೆ ಕಂಗಾಲಾಗಿದ್ದಾರೆ. ನಾಗಮಂಗಲ, ಕೆ.ಆರ್‌.ಪೇಟೆ ಸೇರಿದಂತೆ ಗ್ರಾಮೀಣ ಭಾಗದ ಜನರು ಕುಡಿಯುವ ನೀರಿಲ್ಲದೆ ಕಂಗೆಟ್ಟಿದ್ದಾರೆ. ಇದೆಲ್ಲದರ ನಡುವೆ ನಾಡಿನ ದೊರೆ ಮಾತ್ರ ಇದಾವುದರ ಚಿಂತೆ ಇಲ್ಲದೆ ಮಂಡ್ಯದಲ್ಲಿ ಮಗನ ಫ‌ಲಿತಾಂಶದ ಬಗ್ಗೆ ದಿಕ್ಕೆಟ್ಟಿರುವುದು ವಿಚಿತ್ರ ಸತ್ಯವಾಗಿದೆ.

● ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.