ಎಷ್ಟೇ ಪಲ್ಟಿ ಹೊಡೆದರೂ ಬಿಜೆಪಿ ಅಧಿಕಾರಕ್ಕೆ ಬರಲ್ಲ: ಪರಮೇಶ್ವರ್
Team Udayavani, May 7, 2019, 3:02 AM IST
ಕಲಬುರಗಿ: “ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ 45 ಸಾವಿರ ಕೋಟಿ ರೂ. ಸಾಲಮನ್ನಾ ಮಾಡುವುದಾಗಿ ಜನತೆಗೆ ಮಾತು ಕೊಟ್ಟಿದೆ. ಅದರಂತೆ ಈಗಾಗಲೇ 15 ಲಕ್ಷ ರೈತರ 7,500 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ’ ಎಂದು ಉಪಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ್ ತಿಳಿಸಿದರು.
ಚಿಂಚೋಳಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ಟೆಂಗಳಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುಭಾಷ ರಾಠೊಡ ಪರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಸಾಲವನ್ನೂ ಮನ್ನಾ ಮಾಡಿದ ಮೊದಲ ಸರ್ಕಾರ ನಮ್ಮದು.
ಜನತೆಗೆ ಕೊಟ್ಟ ಮಾತಿನಂತೆ ಬದ್ಧತೆಯಿಂದ ನಮ್ಮ ಸರ್ಕಾರ ನಡೆದುಕೊಳ್ಳುತ್ತಿದೆ. ಉಪಚುನಾವಣೆ ನಂತರ ಬಿಜೆಪಿಯವರು ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ, ಅವರು ಎಷ್ಟೇ ಪಲ್ಟಿ ಹೊಡೆದರೂ ಅಧಿಕಾರಕ್ಕೆ ಬರಲ್ಲ. ಕುಂದಗೋಳ ಮತ್ತು ಚಿಂಚೋಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.