ಪಾಲಿಕೆ ಉಪ ಚುನಾವಣೆಗೂ ಮೈತ್ರಿ ಅಭ್ಯರ್ಥಿಗಳು ಕಣಕ್ಕೆ
Team Udayavani, May 7, 2019, 3:07 AM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಎರಡು ವಾರ್ಡ್‌ಗಳಿಗೆ ಮೇ 29ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಮೈತ್ರಿ ಅಭ್ಯರ್ಥಿಗಳು ಅಖಾಡಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಇಬ್ಬರು ಪಾಲಿಕೆ ಸದಸ್ಯರ ಅಕಾಲಿಕ ಮರಣದಿಂದಾಗಿ ಕಾವೇರಿಪುರ ಹಾಗೂ ಸಗಾಯಪುರ ವಾರ್ಡ್‌ಗಳ ಪಾಲಿಕೆ ಸದಸ್ಯ ಸ್ಥಾನಗಳು ತೆರವಾಗಿದ್ದು, ಮೇ 29ರಂದು ಎರಡೂ ವಾರ್ಡ್‌ಗಳಿಗೆ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಆ ಹಿನ್ನೆಲೆಯಲ್ಲಿ ಎರಡೂ ವಾರ್ಡ್‌ಗಳನ್ನು ಹಂಚಿಕೊಳ್ಳಲು ಕಾಂಗ್ರೆಸ್-ಜೆಡಿಎಸ್ ನಿರ್ಧರಿಸಿವೆ. ಅದರಂತೆ ಎರಡೂ ವಾರ್ಡ್‌ಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಎರಡೂ ಪಕ್ಷಗಳ ನಾಯಕರು ನಿರ್ಧರಿಸಿದ್ದು, ಅಧಿಕೃತ ಘೋಷಣೆ ಬಾಕಿಯಿದೆ.
ಹೃದಯಾಘಾತದಿಂದ ಮೃತಪಟ್ಟಿದ್ದ ಕಾವೇರಿಪುರ ವಾರ್ಡ್ ಸದಸ್ಯೆ ರಮೀಳಾ, ಜೆಡಿಎಸ್‌ನಿಂದ ಆಯ್ಕೆಯಾಗಿದ್ದರು. ಸಗಾಯಪುರದ ಪಾಲಿಕೆ ಸದಸ್ಯ ಏಳುಮಲೈ ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯರಾಗಿದ್ದರು. ಹೀಗಾಗಿ ಕಾವೇರಿಪುರವನ್ನು ಜೆಡಿಎಸ್ ಹಾಗೂ ಸಗಾಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಇದರ ನಡುವೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿಯುವುದರಿಂದ ಮೈತ್ರಿ ಹಾಗೂ ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯುವ ಸಾಧ್ಯತೆಯಿದೆ.
ಅಭ್ಯರ್ಥಿಗಳ ಆಯ್ಕೆ ಕಸರತ್ತು: ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಟಿಕೆಟ್ ಪಡೆಯಲು ಆಕಾಂಕ್ಷಿಗಳು ಪ್ರಮುಖ ನಾಯಕರ ಹಿಂದೆ ಬಿದ್ದಿದ್ದಾರೆ. ಅದರಂತೆ ಕಾವೇರಿಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಆಯ್ಕೆಯ ಹೊಣೆಯನ್ನು ವರಿಷ್ಠರು ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಅವರಿಗೆ ವಹಿಸಿದ್ದಾರೆ.
ಕಾವೇರಿಪುರ ವಾರ್ಡ್ ಒಬಿಸಿ-ಎ (ಮಹಿಳೆ) ಮೀಸಲಾಗಿದೆ. ಆ ಹಿನ್ನೆಲೆಯಲ್ಲಿ ರಮೀಳಾ ಅವರ ಸಂಬಂಧಿಕರು ಸೇರಿ ಸ್ಥಳೀಯ ಕಾರ್ಯಕರ್ತರಲ್ಲಿ ಕೆಲವರು ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದು, ಎರಡು ದಿನಗಳಲ್ಲಿ ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿ ಅಭ್ಯರ್ಥಿ ಆಯ್ಕೆ ಮಾಡಲು ಜೆಡಿಎಸ್ ಮುಂದಾಗಿದೆ.
ಇನ್ನು ಸಗಾಯಪುರ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು ಏಳುಮಲೈ ಅವರ ಸಹೋದರರಲ್ಲಿ ಒಬ್ಬರಿಗೆ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್ ಮುಖಂಡರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದ್ದು, ಮಾಜಿ ಪಾಲಿಕೆ ಸದಸ್ಯೆ ಮಾರಿಮುತ್ತು ಸಹ ಟಿಕೆಟ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಪಕ್ಷ ನಾಯಕರು ಶೀಘ್ರದಲ್ಲಿಯೇ ಸಭೆ ನಡೆಸಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದ್ದಾರೆ ಎನ್ನಲಾಗಿದೆ.
ಆಡಳಿತ ಚುಕ್ಕಾಣಿ ಹಿಡಿಯುವ ಲೆಕ್ಕಾಚಾರ: ಬಿಬಿಎಂಪಿ 198 ಸದಸ್ಯರ ಪೈಕಿ ಬಿಜೆಪಿ 101, ಕಾಂಗ್ರೆಸ್ 75, ಜೆಡಿಎಸ್ 14 ಹಾಗೂ ಪಕ್ಷೇತರರು 6 ಸದಸ್ಯರಿದ್ದಾರೆ. ಎರಡು ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುಣಾವಣೆಯಲ್ಲಿ ಬಿಜೆಪಿ ಎರಡೂ ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದರೆ, ಸಂಖ್ಯಾಬಲ 103ಕ್ಕೆ ಏರಲಿದೆ. ಅದೇ ರೀತಿ ಮೈತ್ರಿ ಪಕ್ಷದ ಬಲವೂ ಕಡಿಮೆಯಾಗಲಿದೆ. ಆಗ ಮೇಯರ್ ಸ್ಥಾನಕ್ಕೆ ಸಂಖ್ಯಾಬಲದ ಲೆಕ್ಕಚಾರ ಶುರುವಾಗಲಿದ್ದು, ಕೊನೆಯ ಸಾಲಿನ ಮೇಯರ್ ಸ್ಥಾನ ಪಡೆಯಲು ಅನುಕೂಲವಾಲಿದೆ.
ಪಕ್ಷದ ವರಿಷ್ಠರು ಕಾವೇರಿಪುರ ವಾರ್ಡ್ ಅಭ್ಯರ್ಥಿ ಆಯ್ಕೆ ಜವಾಬ್ದಾರಿಯನ್ನು ತಮಗೆ ನೀಡಿದ್ದಾರೆ. ಅದರಂತೆ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚಿಸಿದ ಬಳಿಕ ಸೂಕ್ತ ಅಭ್ಯರ್ಥಿಯನ್ನು ನೇಮಿಸಲಾಗುವುದು.
-ಆರ್.ಪ್ರಕಾಶ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ದೆಹಲಿಯ ನೇಲ್ ಆರ್ಟಿಸ್ಟ್ ನೇಣಿಗೆ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.